ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am