ಬ್ರೇಕಿಂಗ್ ನ್ಯೂಸ್
02-11-21 07:21 pm Headline Karnataka News Network ಕರಾವಳಿ
ನವದೆಹಲಿ, ನ.2: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಹೆಸರಿಟ್ಟಿದ್ದು, ನವಜೋತ್ ಸಿಂಗ್ ಸಿಧು ನೇತೃತ್ವದ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಪತ್ರವನ್ನೂ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆ.
ನಾನು ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜಿನಾಮೆಗೆ ಕಾರಣವನ್ನೂ ಉಲ್ಲೇಖಿಸಿದ್ದೇನೆ. ಪಂಜಾಬ್ ಲೋಕ್ ಕಾಂಗ್ರೆಸ್ ಅನ್ನುವುದು ಹೊಸ ಪಕ್ಷವಾಗಿದ್ದು, ಅದರ ಚಿಹ್ನೆ ಇನ್ನಷ್ಟೇ ಅಂತಿಮ ಆಗಬೇಕಿದೆ. ಚುನಾವಣಾ ಆಯೋಗದಲ್ಲಿ ನೋಂದಣಿ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ತಿಂಗಳ ಹಿಂದಷ್ಟೇ ಪಂಜಾಬ್ ಮುಖ್ಯಮಂತ್ರಿ ಪದವಿಯಿಂದ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿ ಹೊರನಡೆದಿದ್ದರು. ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಯಲ್ಲಿ ಜಟಾಪಟಿ ನಡೆದ ಬಳಿಕ ಈ ಬೆಳವಣಿಗೆ ನಡೆದಿತ್ತು. ಆನಂತರ ಸಿಖ್ ಸಮುದಾಯದ ಹಿಂದುಳಿದ ವರ್ಗದ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಪದವಿಗೆ ಏರಿಸಲಾಗಿತ್ತು.
ಸಿಎಂ ಪದವಿಯಿಂದ ಕೆಳಗಿಳಿದ ಬಳಿಕ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದರು. ಅಲ್ಲದೆ, ಬಿಜೆಪಿ ನಾಯಕರು ಕೂಡ ಅವರನ್ನು ದೆಹಲಿಗೆ ಕರೆದು ಮಾತನಾಡಿದ್ದರು. ಹೀಗಾಗಿ ಬಿಜೆಪಿ ಸೇರುತ್ತಾರೆಂದು ವದಂತಿಯೂ ಹಬ್ಬಿತ್ತು. ಆದರೆ, ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಮೈತ್ರಿ ಸ್ಥಾಪಿಸುವ ಬಗ್ಗೆ ಸಿಂಗ್ ಸುಳಿವು ನೀಡಿದ್ದರು. ಇದೀಗ ಹೊಸ ಪಕ್ಷ ಘೋಷಣೆಯಾಗಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಸಿಧು ವಿರುದ್ಧ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಪತ್ಯ ಉಳಿಸಿಕೊಂಡಿದ್ದು, ಮುಂದಿನ ಬಾರಿ ಬದಲಾಗುತ್ತಾ ಅನ್ನುವ ನಿರೀಕ್ಷೆ ಗರಿಗೆದರಿದೆ.
Over a month after leaving the Congress, former Punjab Chief Minister Captain Amarinder Singh on Tuesday revealed the name of his new party as Punjab Lok Congress. The registration of the party is pending approval with the Election Commission of India. Disclosing the party's name in Chandigarh on Tuesday, Captain Amarinder Singh said, "Since we had announced earlier that we would be forming our own party, our team of lawyers was working on the process and had applied to the Election Commission of India for the registration."
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm