ಬ್ರೇಕಿಂಗ್ ನ್ಯೂಸ್
02-11-21 07:38 pm Mangaluru Correspondent ಕರಾವಳಿ
ಮಂಗಳೂರು, ನ.2: ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಆನ್ಲೈನ್ ಜೂಮ್ ಮೀಟಿಂಗಲ್ಲಿ ಆಯೋಜಿಸಲಾಗಿತ್ತು.
ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿಗಳು ತಮ್ಮನ್ನಗಲಿದ ನೆಚ್ಚಿನ ನಟನ ಜೊತೆ ತಮಗಿದ್ದ ಒಡನಾಟ, ಪ್ರೀತಿ, ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡು ನುಡಿನಮನ ಸಲ್ಲಿಸಿದರು.
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಪಾಲ್ಗೊಂಡು, 'ನನ್ನ ಸ್ವಂತ ಮಗನನ್ನು ಕಳೆದುಕೊಂಡಷ್ಟು ದುಃಖವಾಗಿದೆ' ಎಂದು ಅಪ್ಪು ಜೊತೆಗಿನ ನೆನಪುಗಳನ್ನು ಹಂಚಿಕೊಂಡರು. ಮಾಜಿ ಗೃಹ ಸಚಿವರಾದ ಎಂ.ಬಿ. ಪಾಟೀಲ್ ಮಾತನಾಡಿ, ಅಪ್ಪು ಜೊತೆಗಿನ ಸವಿನಯ ಸಂಬಂಧ ಹಾಗೂ ಅವರ ಜೊತೆ ಕೊನೆಯ ಭೇಟಿ ಸಂದರ್ಭದ ಘಟನೆಯನ್ನು ನೆನಪಿಸಿಕೊಂಡು, ಭಾವುಕರಾಗಿ ಶೃದ್ಧಾಂಜಲಿ ಅರ್ಪಿಸಿದರು. ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರಿಸ್ ಮಾತನಾಡಿ ಪುನೀತ್ ರಾಜಕುಮಾರ್ ಜೀವನದಲ್ಲಿ ಅಳವಡಿಸಿದ್ದ ಸರಳತೆಯ ಕುರಿತು ನೆನಪಿನಂಗಳದಿಂದ ಹಲವು ಘಟನೆಗಳನ್ನು ಸ್ಮರಿಸಿದರು.

ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಅಪ್ಪು ಜೊತೆಗಿನ ಮೊದಲ ಭೇಟಿಯಲ್ಲೇ ತೋರಿದ ವಿನಯ ಮತ್ತು ಪ್ರೀತಿಯ ಅನುಭವವನ್ನು ಮಾತಿನಲ್ಲಿ ಹಂಚಿಕೊಂಡರು. ಮಂಗಳೂರು ಸಿಟಿ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ನಟರಾಜ್ ಮಾತನಾಡಿ ಪುನೀತ್ ಜೀವನದಲ್ಲಿ ಅಳವಡಿಸಿಕೊಂಡ ಆದರ್ಶಗಳನ್ನು ಹಲವು ನೆನಪುಗಳ ಸಹಿತ ಮೆಲುಕು ಹಾಕಿದರು. ದುಬೈನ ಉದಯೋನ್ಮುಖ ಗಾಯಕ ಉಮರ್ ಸೈಫ್, ಪುನೀತ್ ರಾಜಕುಮಾರ್ ಅವರ 'ಬೊಂಬೆ ಹೇಳುತೈತೆ' 'ನಿನ್ನಿಂದಲೇ' ಹಾಡನ್ನು ಹಾಡಿದಾಗ ನೆರೆದಿದ್ದ ಅಭಿಮಾನಿಗಳೆಲ್ಲರೂ ಅಪ್ಪು ನೆನೆದು ಗದ್ಗದಿತರಾದರು.
ಕಾರ್ಯಕ್ರಮದ ಸಂಘಟಕ, ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ಮಾತನಾಡಿ ನಮ್ಮ ಜೀವನದಲ್ಲಿ ಪುನೀತ್ ಅವರಂತಹ ಸರಳತೆ, ಪ್ರಚಾರ ಬಯಸದೇ ನೆರವಾಗುವ ಗುಣವನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸೋಣ, ಆ ಮೂಲಕ ನಿಜಾರ್ಥದಲ್ಲಿ ಶೃದ್ಧಾಂಜಲಿ ಅರ್ಪಿಸೋಣ ಎಂದರು. ಈ ಸಂದರ್ಭದಲ್ಲಿ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಪುನೀತ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ವೀಡಿಯೊ ಹಾಗೂ ಕಳೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಂದು ಪುನೀತ್ ರಾಜಕುಮಾರ್ ಶುಭ ಹಾರೈಸಿದ್ದ ವೀಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.
ಬಹರೈನ್ ಕನ್ನಡ ಸಂಘ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಬುಧಾಬಿ ಕರ್ನಾಟಕ ಸಂಘ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹಾಲೆಂಡ್ ಕನ್ನಡ ಸಂಘದ ಅಶೋಕ್, ಕನ್ನಡ ಸಂಘ ಉಗಾಂಡ ಅಧ್ಯಕ್ಷರಾದ ಸುಧೀರ್, ಬ್ಯಾಂಕಾಕ್ ಕನ್ನಡ ಸಂಘದ ಶಿವು ಪೂಜಾರಿ, ಇಟಲಿ ಕನ್ನಡ ಸಂಘದ ಅಧ್ಯಕ್ಷರಾದ ಹೇಮೇಗೌಡ, ಕನ್ನಡಿಗರು ದುಬೈ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ, ನಮ್ಮ ರೇಡಿಯೋ ಸ್ಥಾಪಕ ಅವನಿಧಾರ್ ಹವಾಲ್ದಾರ್, ಓವರ್ಸೀಸ್ ಕನ್ನಡ ಮೂವೀಸ್ ನ ದೀಪಕ್ ಸೋಮಶೇಖರ್ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಸಲ್ಲಿಸಿದರು.
ದ್ವಾರಕೀಶ್ ಅವರ ಪುತ್ರ ಸುಕೇಶ್ ದ್ವಾರಕೀಶ್, ಬಾ| ಮಮತಾ ರಡಾರ್, ಕೆ.ಎನ್ ಆರೈ ಫೋರಂ ಯುಎಇ ಸದಸ್ಯರಾದ ದಯಾ ಕಿರೋಡಿಯನ್, ಮಂಗಳೂರಿನ ಖ್ಯಾತ ರೇಡಿಯೋ ಜಾಕಿ ಆರ್.ಜೆ ಎರೋಲ್, ಲಕ್ಷ್ಮೀ ಲಿಂಗದಳ್ಳಿ, ವಡೆಕಾರ್ ಅಬುಧಾಬಿ, ಕನ್ನಡ ಮಿತ್ರರು ತಂಡದ ನಾಗರಾಜ್ ರಾವ್, ಕನ್ನಡಿಗಾಸ್ ಫೆಡರೇಷನ್ ನ ಇಮ್ರಾನ್ ಖಾನ್ ಎರ್ಮಾಳ್, ಸೆಂಥಿಲ್ ಬೆಂಗಳೂರು, ಅನ್ಸಾರ್ ಬಾರ್ಕೂರ್, ಸಮೀರ್ ಉದ್ಯಾವರ್ ಪ್ರೀತಿಯ ಅಪ್ಪು ರವರಿಗೆ ಅಭಿಮಾನದಿಂದ ನುಡಿನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ವಿಷ್ಣುಮೂರ್ತಿ ಮೈಸೂರು ನಿರೂಪಿಸಿದರು. ಹಾಗೂ ಪುನೀತ್ ಗೆ ಇಷ್ಟವಾದ ಭಕ್ತಿಗೀತೆಯನ್ನೂ ಹಾಡಿದರು, ಮಮತಾ ಶಾರ್ಜಾ ಧನ್ಯವಾದ ಅರ್ಪಿಸಿದರು.
Mangalore Kannadigas Federation hold tribute on ZOOM over the demise of Actor Puneeth Rajkumar. Kannadigas over the globe join the over zoom meeting sharing their deepest condolences.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm