ಬ್ರೇಕಿಂಗ್ ನ್ಯೂಸ್
14-11-21 12:36 pm Mangaluru Correspondent ಕರಾವಳಿ
ಉಳ್ಳಾಲ, ನ.14: ಸೋಮೇಶ್ವರದ ಕುಂಪಲ, ಪಿಲಾರು ಪ್ರದೇಶದಲ್ಲಿ ಮತ್ತೊಬ್ಬರು ಚಿರತೆ ಸಂಚಾರವನ್ನು ಪ್ರತ್ಯಕ್ಷವಾಗಿ ಕಂಡಿದ್ದಾರೆ. ಶನಿವಾರ ಸಂಜೆ ವ್ಯಕ್ತಿಯೊಬ್ಬರು ವಾಹನದಲ್ಲಿ ಹೋಗುತ್ತಿದ್ದಾಗ ಮರಿ ಚಿರತೆ ಠಳಾಯಿಸಿದೆ ಎನ್ನಲಾಗಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.
ಕುಂಪಲ ಸರಳಾಯ ಕಾಲನಿ ರಸ್ತೆಯಾಗಿ ಸ್ಕೂಟರಲ್ಲಿ ಕಟ್ಟಡ ಗುತ್ತಿಗೆದಾರ ಜಯಂತ್ ಕೊಂಡಾಣ ಎಂಬವರು ಹೋಗುತ್ತಿದ್ದ ವೇಳೆ ಚಿರತೆ ಮರಿಯೊಂದು ಪೊದೆಯಿಂದ ಜಿಗಿದು ರಸ್ತೆ ದಾಟಿದೆ. ಕುಂಪಲ ಸರಳಾಯ ಕಾಲನಿ ಮತ್ತು ಪಿಲಾರು ಪಲ್ಲ ಪರಿಸರದಲ್ಲಿ ಕೆಲ ದಿನಗಳ ಹಿಂದೆ ಚಿರತೆಯೊಂದನ್ನ ಪ್ರತ್ಯಕ್ಷ ಕಂಡಿರುವುದಾಗಿ ಸ್ಥಳೀಯ ನಿವಾಸಿಗಳಾದ ಶಿವರಾಜ್ ಪೊಣ್ಣು ಸ್ವಾಮಿ ಮತ್ತು ಮೌರಿಷ್ ಡಿಸೋಜ ಹೇಳಿಕೆ ನೀಡಿದ್ದರು. ಇದರಂತೆ, ನ.4 ರಂದು ಕುಂಪಲ, ಪಿಲಾರು ಪ್ರದೇಶಗಳಿಗೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿರತೆ ಇರುವಿಕೆಯ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿರಲಿಲ್ಲ.
ಇದೀಗ ಮತ್ತೊಬ್ಬ ವ್ಯಕ್ತಿ ಮರಿ ಚಿರತೆಯನ್ನ ಕಂಡಿದ್ದು ಅರಣ್ಯ ಇಲಾಖಾಧಿಕಾರಿಗಳು ತಕ್ಷಣ ಕಾರ್ಯ ಪೃವೃತ್ತರಾಗಿದ್ದಾರೆ. ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಮತ್ತು ಕೊಣಾಜೆ ಬೀಟ್ ಫಾರೆಸ್ಟ್ ಗಾರ್ಡ್ ಸವಿತಾ ಗಟ್ಟಿ ಅವರು ಇಂದು ಕುಂಪಲ ಸರಳಾಯ ಕಾಲನಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ನೀಡಿದ್ದಾರೆ.




ಚಿರತೆ ಪ್ರಕರಣವನ್ನು ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಬೋನನ್ನು ಇರಿಸಿ ಆಪರೇಷನ್ ಚೀತಾ ಕಾರ್ಯಾಚರಣೆ ನಡೆಸಲಾಗುವುದೆಂದು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ತಿಳಿಸಿದ್ದಾರೆ.
ಕುಂಪಲ ಸರಳಾಯ ಕಾಲನಿ, ಸುರಕ್ಷ ನಗರ, ಪಿಲಾರು ಪಲ್ಲದ ನಿವಾಸಿಗಳು ಸ್ವಲ್ಪ ಜಾಗರೂಕತೆ ವಹಿಸಿಕೊಂಡು ತಮ್ಮ ಮನೆಯ ಮಕ್ಕಳನ್ನ ಹೊರಗೆ ಒಬ್ಬಂಟಿಯಾಗಿ ಕಳಿಸದಿರಿ. ಮರಿ ಚಿರತೆ ಇರುವಿಕೆ ಇದೆಯೆಂಬುದು ಮೂರು ಪ್ರತ್ಯಕ್ಷದರ್ಶಿಗಳಿಂದ ತಿಳಿದಿದ್ದು ಅರಣ್ಯ ಇಲಾಖಾಧಿಕಾರಿಗಳು ಕಾರ್ಯಾಚರಣೆ ನಡೆಸಲಿದ್ದಾರೆಂದು ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ ಸ್ಥಳೀಯ ನಿವಾಸಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಉದಯ ಗಟ್ಟಿ ಪಿಲಾರ್, ನಾಗೇಶ್ ಗಟ್ಟಿ , ಸಚಿನ್ ಮಡಿವಾಳ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.
ಕುಂಪಲ, ಪಿಲಾರು ಪ್ರದೇಶದಲ್ಲಿ ಚಿರತೆ ಗುಮ್ಮ ; ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಚಿರತೆ ಬಗ್ಗೆ ಸಿಗದ ಸುಳಿವು
Mangalore another resident of Kumpala spots Cheetah near Pillar. Forest officials rush to the spot. Few days ago they were rumours that Cheetah was seen. The forest officials have promised of operation tormrrow.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am