ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am