ಬ್ರೇಕಿಂಗ್ ನ್ಯೂಸ್
16-09-20 09:48 pm Mangalore Reporter ಕರಾವಳಿ
ಮಂಗಳೂರು, ಸೆ.16: ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಸಿಗಬೇಕು. ಅದಕ್ಕಾಗಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳಬೇಕು. ಎರಡು ವಾರದಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ, ಅಂತಹ ಆಸ್ಪತ್ರೆ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕೋವಿಡ್ 19, ಆಯುಷ್ಮಾನ್ ಭಾರತ್ ಕಾರ್ಡ್ ಕುರಿತಂತೆ ಮಂಗಳೂರು ಪುರಭವನದಲ್ಲಿ ಬುಧವಾರ ನಡೆದ ವಿಶೇಷ ಜನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲೆಯಲ್ಲಿ ಒಟ್ಟು 95 ಖಾಸಗಿ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ, 32 ಆಸ್ಪತ್ರೆಗಳು ಕೊರೊನಾ ಹೊರತುಪಡಿಸಿ ಇತರೇ ರೋಗಗಳಿಗೆ ಅನ್ವಯವಾಗುವಂತೆ ಆಯುಷ್ಮಾನ್ ಯೋಜನೆ ನೋಂದಣಿ ಮಾಡಿದೆ. ಆದರೆ, ಕೊರೋನಾ ಚಿಕಿತ್ಸೆಗಾಗಿ 8 ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ಇಟ್ಟು 12 ಆಸ್ಪತ್ರೆಗಳು ಮಾತ್ರ ನೋಂದಣಿ ಮಾಡಿರುವುದು. ಉಳಿದ 12 ಆಸ್ಪತ್ರೆಗಳು ನೋಂದಣಿ ಪ್ರಕ್ರಿಯೆ ಹಂತದಲ್ಲಿದೆ. ಆದರೆ, ಮುಂದಿನ ಎರಡು ವಾರದ ಗಡುವು ನೀಡುತ್ತಿದ್ದು ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿಯೂ ಕೊರೋನ ಚಿಕಿತ್ಸೆಯ ಕಾರಣಕ್ಕಾಗಿ ಆಯುಷ್ಮಾನ್ ನೋಂದಣಿ ಕಡ್ಡಾಯವಾಗಿ ಮಾಡಬೇಕು. ಕೊರೊನಾಗೆ ಚಿಕಿತ್ಸೆ ನೀಡುವ ಆಸ್ಪತ್ರೆಯವರು ದುಬಾರಿ ಮೊತ್ತ ಪಡೆಯುತ್ತಿರುವ ಆರೋಪವಿದೆ. ಇದು ನಿಜವಾಗಿದ್ದರೆ ತನಿಖೆ ನಡೆಸಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ನಲ್ಲಿ ಇದ್ದರೆ ಮಾತ್ರ ಆಯುಷ್ಮಾನ್ ಪ್ರಯೋಜನ ಸಿಗಲಿದೆ. ಆಯುಷ್ಮಾನ್ ಕಾರ್ಡ್ ಇಲ್ಲದಿದ್ದರೂ, ರೇಶನ್ ಕಾರ್ಡ್, ಆಧಾರ್ ಇದ್ದರೂ ಸೌಲಭ್ಯ ಸಿಗುತ್ತದೆ. ಆದರೆ, ಆಸ್ಪತ್ರೆಗೆ ಬಂದ 24 ಗಂಟೆಯಲ್ಲಿ ರೋಗಿ ಮೃತಪಟ್ಟರೆ ಆಯುಷ್ಮಾನ್ ಸೌಲಭ್ಯ ಸಿಗಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿ.ಪಂ., ಸಿಇಓ ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ ಎಸ್., ಡಿಸಿಪಿ ಅರುಣ್, ಮನಪಾ ಉಪ ಆಯುಕ್ತ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm