ಚಿಕ್ಕಮಗಳೂರು ; ಕಾರಿನ ಟೈರ್ ಬ್ಲಾಸ್ಟ್ , ಇಬ್ಬರು ಸ್ಥಳದಲ್ಲೇ ಸಾವು ! 

18-01-22 08:49 pm       Mangalore Correspondent   ಕರಾವಳಿ

ಚಲಿಸುತ್ತಿದ್ದ ಟೈರಿನ ಕಾರಿನ ಟೈರ್ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದೆ.

ಚಿಕ್ಕಮಗಳೂರು, ಜ 18 : ಚಲಿಸುತ್ತಿದ್ದ ಟೈರಿನ ಕಾರಿನ ಟೈರ್ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದೆ.

ಮೃತರನ್ನ ರಾಜಶೇಖರ್ ಹಾಗೂ ಮಣಿಕಂಠ ಎಂದು ಗುರುತಿಸಲಾಗಿದೆ. ಕೊಪ್ಪದ ಗುಣವಂತೆ ಮೆಡಿಕಲ್ ಸ್ಟೋರಿನ ಮಾಲೀಕರಾದ ರಾಜಶೇಖರ್ ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಮಣಿಕಂಠ  ಮೃತರಾಗಿದ್ದಾರೆ. ಕೆಲಸದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಆಗುಂಬೆಗೆ ಹೋಗಿ ವಾಪಸ್ ಕೊಪ್ಪಕ್ಕೆ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸದೆ. 

ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗೊಜ್ಜಾಗಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹರಿಹರಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Car tire blast kills two in Chikmagalur. The two were returning in Maruthi Swift car from Shivamogga.