ಬ್ರೇಕಿಂಗ್ ನ್ಯೂಸ್
29-01-22 11:19 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.29 : ಜ್ವರ, ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 19 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು ಆತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್ (19) ಮೃತ ಹುಡುಗ. ಈತನಿಗೆ ಎರಡು ದಿನಗಳ ಹಿಂದೆ ಜ್ವರ ಮತ್ತು ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಶಿರ್ತಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ, ಹೃದಯದ ಬಡಿತದಲ್ಲಿ ಅಸಮತೋಲನ ಇರುವ ಬಗ್ಗೆ ಹೇಳಿದ್ದರು. ಶುಕ್ರವಾರ ಸಂಜೆ ಮಂಗಳೂರಿನ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದಾಗ ಹಾರ್ಟ್ ಬೀಟ್ ಹೆಚ್ಚಿರುವುದು ಮತ್ತು ಸಮಸ್ಯೆ ಇರುವುದು ಕಂಡುಬಂದಿದ್ದು ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಶಶಾಂಕ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಹೀಗಾಗಿ ವೈದ್ಯರ ಕೋರಿಕೆಯಂತೆ ಮನೆಯವರು ಹುಡುಗನ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮನೆಯವರ ಪರಿಸ್ಥಿತಿ ನೋಡಿ ಆಸ್ಪತ್ರೆಯ ವೈದ್ಯರು ಬಿಲ್ ಕಡಿತ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಶಶಾಂಕ್, ಕೊಕ್ರಾಡಿ ಗ್ರಾಮದ ಸುಂದರ ಎಂಬವರ ಮಗನಾಗಿದ್ದು ಮೂವರು ಮಕ್ಕಳಲ್ಲಿ ಕಿರಿಯವ. ಬಡ ಕುಟುಂಬವಾಗಿದ್ದು ಇಬ್ಬರು ಅಕ್ಕಂದಿರು. ಮನೆಯಲ್ಲಿ ಬಡತನದ ಕಾರಣ ಸಣ್ಣ ವಯಸ್ಸಿನಲ್ಲೇ ಕೆಲಸಕ್ಕೆ ಹೋಗಲು ಆರಂಭಿಸಿದ್ದ. ಆದರೆ ವಿಧಿ ಕೈಕೊಟ್ಟಿದ್ದು ಸಣ್ಣ ವಯಸ್ಸಿನಲ್ಲೇ ಹುಡುಗನ ಪ್ರಾಣ ಕಸಿದಿದೆ.
ವಿಶೇಷ ಅಂದರೆ, ಶಶಾಂಕನ ಕುಟುಂಬದಲ್ಲಿ ಕಳೆದ ಎರಡು - ಮೂರು ವರ್ಷಗಳ ಅಂತರದಲ್ಲಿ ನಾಲ್ವರು ಸಾವು ಕಂಡಿದ್ದಾರೆ. ಅಜ್ಜ , ಅಜ್ಜಿ ಕ್ಯಾನ್ಸರ್ ಮತ್ತು ಹೃದಯಾಘಾತದಿಂದ ಸಾವು ಕಂಡಿದ್ದರೆ, ಮಾವ ನಾರಾಯಣ ಎಂಬವರು ಅಕಾಲಿಕ ಮರಣ ಹೊಂದಿದ್ದರು. ಬೆನ್ನು ಬೆನ್ನಿಗೆ ಮೂವರ ಆಸ್ಪತ್ರೆ ಖರ್ಚಿಗಾಗಿ ಮನೆಯವರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ಈಗ ಮತ್ತೊಬ್ಬ ಕುಡಿ ಸಾವು ಕಂಡಿದ್ದು ಕುಟುಂಬ ದಿಕ್ಕೆಟ್ಟು ಹೋಗಿದೆ. ಈ ಬಗ್ಗೆ ಯಾರಾದರೂ ದಾನಿಗಳು ಸಹಾಯ ಮಾಡುವುದಿದ್ದರೆ ಸಹಾಯ ಆದೀತು ಎಂದು ಅಲ್ಲಿನ ಸ್ಥಳೀಯರು ಕೇಳಿಕೊಂಡಿದ್ದಾರೆ.
Mangalore 19 year old boy dies of Heart Attack, family donates eyes. The deceased has been identified as Shashank from Belthangady.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am