ಬ್ರೇಕಿಂಗ್ ನ್ಯೂಸ್
31-01-22 07:14 pm HK Desk news ಕರಾವಳಿ
ಉಡುಪಿ, ಜ.31 : ಹಿಜಬ್ ವಿವಾದದ ಬಗ್ಗೆ ಶಾಸಕ ರಘುಪತಿ ನೇತೃತ್ವದಲ್ಲಿ ಕಾಲೇಜಿನಲ್ಲಿ ಅಧಿಕಾರಿಗಳು ಮತ್ತು ಧಾರ್ಮಿಕ ಮುಖಂಡರ ಸಭೆ ನಡೆದಿದ್ದು ಹಿಜಾಬ್ ಬೇಕೆಂದು ಪಟ್ಟು ಹಿಡಿದವರಿಗೆ ಖಡಕ್ ವಾರ್ನಿಂಗ್ ಮಾಡಲಾಗಿದೆ.
ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದರು. ಈ ಹಂತದಲ್ಲಿ ಹಿಜಾಬ್ ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲ ವಿಚಾರಗಳನ್ನು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ಇಲ್ಲದಿದ್ದರೆ ಬರುವುದು ಬೇಡ. ನಾಳೆಯಿಂದ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಸಭೆಯ ಬಳಿಕ ಶಾಸಕ ರಘುಪತಿ ಭಟ್ ಮಾಹಿತಿ ನೀಡಿದ್ದಾರೆ.
ಮಾಧ್ಯಮ, ಸಂಘ- ಸಂಸ್ಥೆ, ಯಾವುದೇ ಸಂಘಟನೆಗಳಿಗೆ ಕಾಲೇಜು ಆವರಣಕ್ಕೆ ಪ್ರವೇಶ ಇಲ್ಲ. ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳು, ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಜಿಲ್ಲಾಧಿಕಾರಿಗೆ ಕೊಡಿ. ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು. ಅದು ಬಿಟ್ಟು ಗೊಂದಲಕ್ಕೆ ಅವಕಾಶ ಇಲ್ಲ ಎಂದು ರಘುಪತಿ ಭಟ್ ಹೇಳಿದ್ದಾರೆ.

ಸಭೆಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು, ಅಧ್ಯಕ್ಷರು, ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಅಧಿಕಾರಿಗಳು ಭಾಗಿಯಾಗಿದ್ದರು. ಹಿಜಾಬ್ ಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರನ್ನು ಬ್ಯಾರಿ ಅಕಾಡೆಮಿ ಸದಸ್ಯರು ಮನವೊಲಿಸುವ ಯತ್ನ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಹಿಜಾಬ್ ಧಾರಣೆಗೆ ನಮ್ಮ ವಿರೋಧ ಇಲ್ಲ. ಅದು ಇಸ್ಲಾಂ ಧಾರ್ಮಿಕ ಪದ್ಧತಿ. ಆದರೆ ಶರಿಯತ್ ಆಧರಿತ ಕಾನೂನು ಬೇರೆ. ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಇಲ್ಲಿನ ಸರ್ಕಾರದ ಆದೇಶವನ್ನು ಪಾಲಿಸಬೇಕು. ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಬ್ ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ ಎಂದು ಹೇಳಿದರು.
MLA and president of College Development Authority Raghupati Bhat has categorically denied the girls protesting for Hijab, entry to the Government Women's PU College here. He annnounced the same after chairing a meeting at the college on Monday, January 31 in which four of the five girl students demanding Hijab in classes participated.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm