ಬ್ರೇಕಿಂಗ್ ನ್ಯೂಸ್
05-02-22 10:31 pm Mangalore Correspondent ಕರಾವಳಿ
ಮಂಗಳೂರು, ಫೆ.5 : ವಿದ್ಯುತ್ ದರ ಏರಿಕೆ ಮಾಡುವುದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ. ಆದರೆ ಸದ್ಯಕ್ಕೆ ಸರಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯುತ್ ಪೂರೈಕೆ , ಕಾರ್ಯಕ್ಷಮತೆ ಹೆಚ್ಚಿಸಿ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪರಿಷ್ಕರಿಸಿದ ವಿತರಣಾ ವಲಯದ ಯೋಜನೆಯಡಿ ಎಂಟು ಸಾವಿರ ಕೋಟಿ ರೂ. ರಾಜ್ಯಕ್ಕೆ ಒದಗಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನಧಿಕೃತ ಜೋಡಣೆ, ಸೋರಿಕೆ ತಡೆಯನ್ನು ಸ್ಥಳೀಯಾಡಳಿತ ಮಾಡಬೇಕು ಎಂದವರು ಹೇಳಿದರು.
ತುಳುವಿಗೆ ಅಧಿಕೃತ ಭಾಷೆ ಮಾನ್ಯತೆ
ತುಳುವನ್ನು ರಾಜ್ಯದಲ್ಲಿ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದೇನೆ. ಈ ಬಗ್ಗೆ ತಜ್ಞರು ನೀಡಿರುವ ವರದಿಯನ್ನು ಕಾನೂನು ಕಮಿಟಿಗೆ ನೀಡಲಾಗಿದೆ. ಪ್ರಕ್ರಿಯೆ ನಡೆದಿದ್ದು ಆದಷ್ಟು ಬೇಗ ಕಾನೂನು ಇಲಾಖೆ ಅನುಮೋದನೆ ಪಡೆದು, ಕ್ರಮ ಕೈಗೊಳ್ಳಲಾಗುವುದು. ಬಳಿಕ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲು ಬದ್ಧ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಜಿಲ್ಲೆಯಲ್ಲಿ ಸಾಕಷ್ಟು ಕಡತ ವಿಲೇವಾರಿಯಾಗದೆ ಬಾಕಿಯಾಗಿರುವ ದೂರು ಬಂದಿದೆ. ಗ್ರಾಮ ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿ ತನಕದ ಕಡತ ವಿಲೇವಾರಿಗೆ ಫೆಬ್ರವರಿ ತಿಂಗಳ 19 ರಿಂದ 26 ರ ವರೆಗೆ ಅಭಿಯಾನ ನಡೆಸಲಾಗುವುದು. ಇನ್ನು ಮುಂದೆ ಯಾವುದೇ ಅಧಿಕಾರಿ ತನ್ನ ಮೇಜಿನ ಮೇಲೆ ಕಡತ ಇಟ್ಟುಕೊಂಡು ವಿಳಂಬ ಮಾಡುವಂತಿಲ್ಲ ಎಂದರು.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ, ದುಪ್ಪಟ್ಟು ಬೆಲೆಗೆ ಮಾರಾಟ, ಪೊಲೀಸ್- ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ನಡುವಿನ ಸಮನ್ವಯದ ಕೊರತೆ ಬಗ್ಗೆ ಪರಿಹಾರ ಕಂಡುಕೊಳ್ಳಲಾಗುವುದು. ಜನರ ನಿರೀಕ್ಷೆಯಂತೆ ಮರಳು ಕೊಡಲಾಗಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಈ ಬಗ್ಗೆ ಕ್ರಮ ವಹಿಸುವುದಾಗಿ ಸಚಿವರು ಹೇಳಿದರು.
ಜಿಲ್ಲಾ ರಂಗಮಂದಿರಕ್ಕೆ 5 ಕೋಟಿ ಸೂತ್ರ
ರಾಜ್ಯದ ಜಿಲ್ಲಾ ರಂಗ ಮಂದಿರಗಳಿಗೆ ಐದು ಕೋಟಿ ರೂ. ಮತ್ತು ತಾಲೂಕು ರಂಗ ಮಂದಿರಗಳಿಗೆ ಮೂರು ಕೋಟಿ ರೂ. ಮೊತ್ತ ನೀಡುವ ಏಕಸೂತ್ರ ಜಾರಿಗೆ ಕ್ರಮ ವಹಿಸಲಾಗಿದೆ. ಅದು ಬಿಟ್ಟು ಹೆಚ್ಚುವರಿ ಬೇಕಂದ್ರೆ ಅದನ್ನು ಆಯಾ ಕಮಿಟಿಯವರೇ ಮಾಡಬೇಕು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಶಾಸಕ ಡಿ.ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು. ಸಂವಾದಕ್ಕೆ ಮೊದಲು ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ನಡೆಸಲಾಯಿತು.
Tulu Language to get state Importance, no hike in electricity bill says Minister Sunil Kumar in Mangalore during a felicitation program held by press club in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm