ಬ್ರೇಕಿಂಗ್ ನ್ಯೂಸ್
18-02-22 02:40 pm HK Desk news ಕರಾವಳಿ
ಉಡುಪಿ, ಫೆ.18 : ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.
ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ನಮಗೆ ಹಿಜಾಬ್ ಮುಖ್ಯ, ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದು ಕಾಲೇಜು ಪ್ರಾಂಶುಪಾಲರಿಗೆ ಒತ್ತಡ ಹೇರಿದ್ದಾರೆ.
ಕಾಲೇಜಿನ ಸಿಬಂದಿ, ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದು ಎಲ್ಲರಿಗೂ ಪ್ರತ್ಯೇಕ ಕೊಠಡಿ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯೇ ಹಿಜಾಬ್ ತೆಗೆದು ಪರೀಕ್ಷೆ ಬರೆಯಿರಿ ಎಂದು ಹೊಸ ಅವಕಾಶ ನೀಡಿದ್ದಾರೆ. ಆದರೆ ಪ್ರಾಂಶುಪಾಲರ ಮನವಿಗೆ ಓಗೊಡದ ವಿದ್ಯಾರ್ಥಿಗಳು, ನಾವು ಇಡೀ ದಿನ ಕಾಲೇಜು ಗೇಟ್ ಬಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ನಮಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದಿದ್ದಾರೆ. ಆದರೆ ಕಾಲೇಜಿನ ಒಂದಷ್ಟು ವಿದ್ಯಾರ್ಥಿನಿಯರು ಕಾಲೇಜಿನ ಶಿಕ್ಷಕ ವೃಂದದ ಒತ್ತಾಯಕ್ಕೆ ಮಣಿದು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ.
ಇದೇ ವೇಳೆ, ಕಾಲೇಜಿನ ಹೊರಗಡೆಯ ಮಂದಿ ಇಲ್ಲಿಯೂ ಹಿಜಾಬ್ ಗಲಾಟೆ ಎಬ್ಬಿಸಬೇಕೆಂದು ಪ್ರಚೋದನೆ ಮಾಡಿದ್ದಾರೆ. ಅದರಿಂದಾಗಿ ನಾವು ಧರಣಿ ನಡೆಸಿದ್ದಾಗಿ ಕೆಲವು ವಿದ್ಯಾರ್ಥಿಗಳು, ಕಾಲೇಜು ಸಿಬಂದಿ ಬಳಿ ಹೇಳಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ಆಗದಂತೆ ನೋಡಿಕೊಂಡಿದ್ದಾರೆ.
The controversy over wearing Hijab in educational institutions spread to Milagres College, Kallianpur here on Friday February 18 with scores of students crowding at the college gate following confusion over the interim order regarding the headscarf. Muslim students, both girls and boys, were seen standing outside the college gate. Some of them were PU students and others pursuing undergraduation.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm