ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್ ; ಭಾರೀ ಮಳೆಯ ಸೂಚನೆ 

19-09-20 09:37 am       Mangaluru Correspondant   ಕರಾವಳಿ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮಂಗಳೂರು, ಸೆಪ್ಟಂಬರ್ 19: ಕರಾವಳಿಯಲ್ಲಿ ಮತ್ತೆ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರಾವಳಿ ಜಿಲ್ಲೆ ಮತ್ತು ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಸೆ.20 ಮತ್ತು 21 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ನಿನ್ನೆ ರಾತ್ರಿಯಿಂದ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. 

ವಾರದ ಹಿಂದಷ್ಟೇ ಸತತ ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಜನರನ್ನು ಚಳಿ ಹಿಡಿಸಿ ಹಿಂಡಿ ಹಿಪ್ಪೆ ಮಾಡಿದ್ದ ಮಳೆರಾಯ ಮೂರು ದಿನಗಳಿಂದ ಬಿಡುವು ನೀಡಿತ್ತು. ಈಗ ಮತ್ತೆ ಅಬ್ಬರಿಸುವ ಲಕ್ಷಣ ಗೋಚರಿಸಿದೆ. ಬಿರುಗಾಳಿಯ ಕಾರಣ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

Join our WhatsApp group for latest news updates