ಬ್ರೇಕಿಂಗ್ ನ್ಯೂಸ್
21-02-22 08:15 pm Mangaluru Correspondent ಕರಾವಳಿ
ಮಂಗಳೂರು, ಫೆ.21: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾಗ ಮಂಗಳಮುಖಿಯರ ತಂಡವೊಂದು ಸ್ಥಳಕ್ಕೆ ಆಗಮಿಸಿ, ಅಶ್ಲೀಲವಾಗಿ ನಡೆದುಕೊಂಡಿದ್ದರು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಮಂದಿ ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಇದೇ ಘಟನೆಗೆ ಸಂಬಂಧಿಸಿ ಮಂಗಳಮುಖಿಯರು ಪ್ರತಿ ದೂರು ನೀಡಿದ್ದು, ಆಸಿಫ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆನಂತರ, ಈ ನಡುವೆ ಹೈವೇ ಪ್ರಾಧಿಕಾರದಿಂದ ಟೋಲ್ ಗೇಟ್ ಬಳಿಯಲ್ಲೇ ದೊಡ್ಡ ಬ್ಯಾನರ್ ಹಾಕಿದ್ದು, ಸುರತ್ಕಲ್ ಟೋಲ್ ಗೇಟ್ ಅಧಿಕೃತವಾಗಿದೆ. ಈ ಬಗ್ಗೆ ಅಕ್ರಮವೆಂದು ಹೇಳಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿತ್ತು. ಇದೀಗ ಅದೇ ನೆಪದಲ್ಲಿ ಆಸಿಫ್ ವಿರುದ್ಧ ಹೈವೇ ಪ್ರಾಧಿಕಾರದವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಟೋಲ್ ಗೇಟ್ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ, ಸ್ಥಳದಲ್ಲಿ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ ಎಂದು ಹೇಳಿದ್ದರು. ಅದರಂತೆ ದೂರು ದಾಖಲಾಗಿದ್ದು, ಆಸಿಫ್ ಅವರನ್ನು ವಿಚಾರಣೆ ನಡೆಸುವುದಕ್ಕಾಗಿ ವಶಕ್ಕೆ ಪಡೆಯಲಾಗಿದೆ. ಯಾವುದೇ ರೀತಿ ಬಂಧನ ಮಾಡಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಪ್ಪಾಗಿ ಮಾಹಿತಿ ನೀಡಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಅಲ್ಲದೆ, ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಆಸಿಫ್ ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆದಿರಲಿಲ್ಲ. ಇದಕ್ಕಾಗಿ ಅವರ ವಿರುದ್ಧ ನೋಟೀಸ್ ನೀಡಲು ತೆರಳಿದ್ದ ಪೊಲೀಸರ ವಿರುದ್ಧವೂ ಅಸಭ್ಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಪೊಲೀಸರು ನೋಟೀಸ್ ನೀಡಿದ್ದನ್ನು ಏನಿದೆ ಎಂದು ನೋಡುವ ಸೌಜನ್ಯವೂ ಅವರಿಗೆ ಇರಲಿಲ್ಲ. ಈ ಬಗ್ಗೆ ವಿಚಾರಣೆ ನಡೆಸುವುದಕ್ಕಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದಿದ್ದಾರೆ ಕಮಿಷನರ್.
Also Read:
Surathkal toll illegal protest social activist Asif Apathbandava arrested after case by Highway authority. Six transgenders have been arrested in connection to the attempted assault on social worker Asif Apatbandhava who has been on a protest near the tollgate at Suratkal for the last many days. A few transgenders had allegedly tried to attack him past midnight on Tuesday February 15.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am