ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm