ಬ್ರೇಕಿಂಗ್ ನ್ಯೂಸ್
19-03-22 02:05 pm Mangalore Correspondent ಕರಾವಳಿ
ಮಂಗಳೂರು, ಮಾ.19: ನಾನು ಹಿಂದುತ್ವದಲ್ಲಿ ನಂಬಿಕೆ ಇಟ್ಟವನು. ಭಗವದ್ಗೀತೆಗೆ ನನ್ನ ವೈಯಕ್ತಿಕ ವಿರೋಧ ಏನೂ ಇಲ್ಲ. ಮಕ್ಕಳಿಗೆ ನೈತಿಕ ವಿದ್ಯೆ ಕಲಿಸುವುದಕ್ಕೆ ನಮ್ಮದೇನೂ ತಕರಾರಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾವು ಸಂವಿಧಾನ ಮತ್ತು ಸೆಕ್ಯುಲರಿಸಂನಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆನಾದ್ರು ಹೇಳಿ ಕೊಡಲಿ, ಕುರಾನ್ ಆದ್ರು ಹೇಳಿಕೊಡಲಿ, ಬೈಬಲ್ ನಾದ್ರು ಹೇಳಿ ಕೊಡಲಿ. ಆದ್ರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಅಷ್ಟೆ. ಮಕ್ಕಳಿಗೆ ಮಾರ್ಕೆಟ್ ಗೆ ಅನುಗುಣವಾಗಿ ಕ್ವಾಲಿಟಿ ಎಜುಕೇಶನ್ ನೀಡಬೇಕು ಎಂದು ಹೇಳಿದರು.
ಭಗವದ್ಗೀತೆಯನ್ನು ನಾವು ಮನೆಗಳಲ್ಲಿ ಮಕ್ಕಳಿಗೆ ಹೇಳಿ ಕೊಡಲ್ವಾ.. ನಾನು ಕೂಡ ಒಬ್ಬ ಹಿಂದು. ನನಗೂ ನನ್ನ ಮನೆಯಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಹೇಳಿಕೊಟ್ಟಿದ್ದಾರೆ. ನೈತಿಕ ಶಿಕ್ಷಣ ಬೇಕು, ಹಾಗಂತ ಸಂವಿಧಾನಕ್ಕೆ ವಿರುದ್ಧವಾಗಿ ನಡ್ಕೋಬಾರ್ದು. ನಾನು ಭಗವದ್ಗೀತೆ, ಖುರಾನ್, ಬೈಬಲ್ ಓದುವುದಕ್ಕೆ ವಿರೋಧಿಯಲ್ಲ. ನಮ್ಮಲ್ಲಿ ಎಲ್ಲವನ್ನೂ ಒಳಗೊಳ್ಳುವ ಸಹಿಷ್ಣುತೆ ಮತ್ತು ಸಹಬಾಳ್ವೆ ಇರಬೇಕಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದನೆ ಮಾಡಿದ್ದಾರೆ.
ಕಾಶ್ಮೀರ್ ಫೈಲ್ಸ್ ಕನ್ನಡಕ್ಕೆ ಡಬ್ಬಿಂಗ್ ಮಾಡುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸ್ತೀವಿ ಅಂದ್ರೆ ಬೇಡ ಅನ್ನೋರು ಯಾರು? ಆದ್ರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನ ತೋರಿಸಬೇಕು. ಕಾಶ್ಮೀರದಲ್ಲಿ ಏನು ನಡೆದಿದೆ ? ಯಾವುದು ಸತ್ಯ ? ಅನ್ನೋದನ್ನ ತೋರಿಸ್ಬೇಕು. ಕಾಶ್ಮೀರದಲ್ಲಿ ಭಯೋತ್ಪಾದಕರು ಏನ್ ಮಾಡಿದ್ರು ? ಕಾಶ್ಮೀರಿ ಪಂಡಿತರು ಸೇರಿದಂತೆ ಬೇರೆ ಸಮುದಾಯದವರೊಂದಿಗೆ ಏನೆಲ್ಲಾ ಆಗಿದೆ ಅನ್ನೋದನ್ನು ತೋರಿಸ್ಬೇಕು. ಹಾಗೆನೇ ಗುಜರಾತ್ ನಲ್ಲಿ ನಡೆದದ್ದು ಮತ್ತು ಲಖಿಂಪುರದಲ್ಲಿ ನಡೆದಿದ್ದನ್ನೂ ತೋರಿಸಬೇಕು ಎಂದು ಹೇಳಿದರು.
ಕಾಶ್ಮೀರ್ ಫೈಲ್ ಸಿನೆಮಾವನ್ನ ನಾನು ಇನ್ನೂ ನೋಡಿಲ್ಲ. ನಾನು ಸಿನಿಮಾ ನೋಡೋದೇ ಕಡಿಮೆ. ಸಿನೆಮಾ ನೋಡಲೇಬೇಕು ಅಂತ ಏನಿದೆ ? ಬಹಳ ಸಿನಿಮಾಗಳನ್ನ ನಾನು ನೋಡಿಲ್ಲ. ಅದೇ ಪ್ರಕಾರ ಇದನ್ನೂ ನೋಡಲ್ಲ ಎಂದರು ಸಿದ್ದರಾಮಯ್ಯ.
ಕಾಂಗ್ರೆಸ್ ಮೃದು ಹಿಂದುತ್ವದತ್ತ ವಾಲುತ್ತಿದೆಯಾ ಎಂಬ ಪ್ರಶ್ನೆಗೆ, ನಮ್ಮಲ್ಲಿ ಸಾಫ್ಟ್ ಹಿಂದುತ್ವನೂ ಇಲ್ಲ. ಹಾರ್ಡ್ ಹಿಂದುತ್ವನೂ ಇಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು. ಹಾಗೆಯೇ ಎಲ್ಲಾ ಧರ್ಮಗಳಿಗೆ ಸಮಾನ ಗೌರವ ಸಂವಿಧಾನ ನೀಡುತ್ತೇವೆ. ಸಂವಿಧಾನದ ಪ್ರಕಾರ ನಾವು ನಡೆದುಕೊಳ್ಳುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಹಿಂದೆಲ್ಲಾ ಹಿಂದುತ್ವ, ಭಗವದ್ಗೀತೆ ಎಂಬ ಮಾತು ಕೇಳಿದರೆ ಉರಿದು ಬೀಳುತ್ತಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿರುವುದು ಅಚ್ಚರಿ ಮೂಡಿಸಿದೆ. ಅತ್ತ ಭಗವದ್ಗೀತೆ ವಿಚಾರದಲ್ಲಿ ಕಾಂಗ್ರೆಸ್ ವಿರೋಧ ಇದೆಯೆಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರೂ, ಸಿದ್ದರಾಮಯ್ಯ ಬೇರೆ ರೀತಿಯಲ್ಲಿ ಮಾತನಾಡಿದ್ದಾರೆ.
Reacting to the debate on the Congress leaning towards soft Hinduism after the five-state elections, Leader of The Opposition siddaramaiah in Mangaluru has said that we believe in Hinduism. Speaking at the Mangaluru airport, Leader of The Opposition Siddaramaiah said, "There is no such thing as a soft and hard Hindutva of the Congress. We believe in Hinduism. He said he would give equal respect to all religions.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am