ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮ ಮನೆಗಳ ನಿರ್ಮಾಣ, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು 

25-03-22 01:02 pm       Mangalore Correspondent   ಕರಾವಳಿ

ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ. 

ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.

Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.