ಬ್ರೇಕಿಂಗ್ ನ್ಯೂಸ್
27-03-22 02:08 pm Mangalore Correspondent ಕರಾವಳಿ
ಮಂಗಳೂರು, ಮಾ.27: ಹಿಜಾಬ್ ಸಂಘರ್ಷದ ನಡುವೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಾಗಿದ್ದು ಧಾರ್ಮಿಕ ಸ್ವಾತಂತ್ರ್ಯ ನೆಪದಲ್ಲಿ ಹಿಜಾಬಿಗಾಗಿ ಪಟ್ಟು ಹಿಡಿದ ಮುಸ್ಲಿಂ ವಿದ್ಯಾರ್ಥಿನಿಯರು ಕಗ್ಗಂಟಿಗೆ ಸಿಲುಕಿದ್ದಾರೆ. ಪರೀಕ್ಷೆ ಬರೆಯುವುದೋ, ಬಿಡುವುದೋ ಎಂಬ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಕಮಿಟಿ ಅಧ್ಯಕ್ಷ ಶಾಫಿ ಸಹದಿ ಮುಸ್ಲಿಂ ಧಾರ್ಮಿಕ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಎಸ್ಸೆಸ್ಸೆಫ್ ವಿಭಾಗದ ಹಿರಿಯ ಮುಖಂಡರಾಗಿರುವ ದೇಶದಲ್ಲಿ ಅಸಂಖ್ಯಾತ ಅನುಯಾಯಿಗಳನ್ನು ಹೊಂದಿರುವ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬುಬಕ್ಕರ್ ಮುಸ್ಲಿಯಾರ್, ಹಿಜಾಬ್ ವಿಚಾರದಲ್ಲಿ ಸರಕಾರದ ಜೊತೆ ಸಂಘರ್ಷಕ್ಕೆ ಇಳಿಯಬೇಡಿ. ಶಾಂತಿಯಿಂದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.
ಮೂಡುಬಿದಿರೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಅಬುಬಕ್ಕರ್ ಮುಸ್ಲಿಯಾರ್ ಈ ಬಗ್ಗೆ ಮಾತನಾಡಿದ್ದು ಹಿಜಾಬ್ ವಿಚಾರದಲ್ಲಿ ಸರಕಾರ ಮತ್ತು ನ್ಯಾಯಾಲಯದ ಜೊತೆಗೆ ಸಂಘರ್ಷಕ್ಕೆ ನಿಲ್ಲುವುದು ಸರಿಯಲ್ಲ. ಸರ್ವರಿಗೂ ಸಮ್ಮತವಾಗುವ ದೃಷ್ಟಿಯಿಂದ ಗೊಂದಲಕ್ಕೆ ತೆರೆ ಎಳೆದು ಸಂಧಾನದ ಮೂಲಕ ನ್ಯಾಯ ಲಭಿಸುವಂತೆ ಮಾಡಬೇಕು ಎಂದು ಹೇಳಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಮರ್ಕಜ್ ಲಾ ಕಾಲೇಜಿನ ಖ್ಯಾತ ವಕೀಲರ ತಂಡ ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ. ಹಿಜಾಬ್ ಬಗ್ಗೆ ಕಾನೂನಿನಲ್ಲಿ ಎದುರಿಸಲು ಅವಕಾಶ ಇದೆ. ಸಂವಿಧಾನದ ಅವಕಾಶ ಬಳಸಿಕೊಂಡು ನಾವು ಮುಂದಡಿ ಇಡುತ್ತೇವೆ. ಹಾಗೆಂದು ಸರಕಾರ ಮತ್ತು ಕೋರ್ಟ್ ವಿರುದ್ಧ ಸಂಘರ್ಷಕ್ಕೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿದ್ದು ಎಲ್ಲರೂ ಪರೀಕ್ಷೆಗಳನ್ನು ಬರೆಯಬೇಕು. ಗರಿಷ್ಠ ಅನುಕೂಲಗಳನ್ನು ಬಳಸಿ ಪರೀಕ್ಷೆಗೆ ಹಾಜರಾಗಬೇಕು. ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ಇತ್ಯರ್ಥಗೊಂಡು ಶೀಘ್ರ ನ್ಯಾಯ ಲಭಿಸುವ ನಿರೀಕ್ಷೆಯಿದೆ. ಧಾರ್ಮಿಕ ಸ್ವಾತಂತ್ರ್ಯ ಖಾತರಿಪಡಿಸುವ ಶ್ರೇಷ್ಠ ಸಂವಿಧಾನ ಭಾರತದಲ್ಲಿದ್ದು ಸಾಮರಸ್ಯ ಮತ್ತು ಸಹಿಷ್ಣುತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದು ದೇಶದ ಎಲ್ಲ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಅಬುಬಕ್ಕರ್ ಮುಸ್ಲಿಯಾರ್ ಹೇಳಿದ್ದಾರೆ.

ಹೆತ್ತವರು ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸಿ
ಇದೇ ವೇಳೆ, ಉಡುಪಿ ಜಿಲ್ಲಾ ಸಂಯುಕ್ತ ಜಮಾತ್ ಖಾಝಿ ಝೈನುಲ್ ಉಲಮಾ ಅಬ್ದುಲ್ ಮುಸ್ಲಿಯಾರ್, ಹೆತ್ತವರು ತಮ್ಮ ಮಕ್ಕಳ ಪರೀಕ್ಷೆ, ಶಿಕ್ಷಣದ ಬಗ್ಗೆ ಗಮನ ಹರಿಸಬೇಕು. ಸೂಕ್ಷ್ಮ ವಿಷಯಗಳನ್ನು ದೀರ್ಘ ದೃಷ್ಟಿಯಿಂದ ನೋಡಬೇಕು. ದೇಶದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಕಾರ್ಯ ಆಗಬಾರದು ಎಂದು ಹಿಜಾಬ್ ವಿಚಾರದಲ್ಲಿ ಧಾರ್ಮಿಕತೆಗೆ ಕಟ್ಟುಬಿದ್ದಿರುವ ವಿದ್ಯಾರ್ಥಿನಿಯರು ಮತ್ತು ಹೆತ್ತವರಿಗೆ ಸಲಹೆ ನೀಡಿದ್ದಾರೆ.
ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಯಾವುದೇ ಕಾರಣಕ್ಕೂ ನಮ್ಮ ಸಮುದಾಯ ಶಿಕ್ಷಣದಿಂದ ವಂಚಿತರಾಗಬಾರದು. ಜಾತ್ಯತೀತ ಭಾರತದ ಸಂವಿಧಾನವು ಧಾರ್ಮಿಕ ಆಚರಣೆ, ನಂಬಿಕೆಗಳಿಗೆ ಅವಕಾಶ ನೀಡಿದೆ. ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡುವ ತಪ್ಪು ಮಾಹಿತಿಗಳೇ ಇಷ್ಟೊಂದು ಸಮಸ್ಯೆ ಬಿಗಡಾಯಿಸಲು ಕಾರಣ ಎಂದು ಹೇಳಿದ್ದಾರೆ.
Mangalore Dont fight with the government on Hijab row says Sheikh Abubakr Ahmad, requests Muslims to have peace. Musliyar known as Sheikh Abubakr Ahmad is the Grand Mufti of India and also the Social Worker. He is also the Chancellor of the Jamia Markaz, Chairman of the Siraj Daily and General Secretary of the All India Sunni Jamiyyathul Ulama.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm