ಬ್ರೇಕಿಂಗ್ ನ್ಯೂಸ್
12-04-22 01:28 pm Udupi Correspondent ಕರಾವಳಿ
ಉಡುಪಿ, ಎ.12: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಲ್ವತ್ತು ಶೇಕಡಾ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಹೋಟೆಲಿನ ಲಾಡ್ಜಿನಲ್ಲಿ ರೂಮ್ ನಂಬರ್ 207 ರಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದು ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ. ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕೆ ಆಗಮಿಸಿದ್ದು ಕೆಎಂಸಿ ಮಣಿಪಾಲದ ಫೋರೆನ್ಸಿಕ್ ತಜ್ಞರನ್ನು ಕರೆಸಿ ತನಿಖೆ ಕೈಗೊಂಡಿದ್ದಾರೆ.



ಆತ್ಮಹತ್ಯೆಗೂ ಮುನ್ನ ಸಂತೋಷ್ ಪಾಟೀಲ್ ಮಾಧ್ಯಮದ ವ್ಯಕ್ತಿಗಳಿಗೆ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಬರೆದು ವಾಟ್ಸಪ್ ಸಂದೇಶ ಕಳುಹಿಸಿದ್ದರು. ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ವಾಟ್ಸಪ್ ಮೆಸೇಜ್ ಹಾಕಿದ್ದು ಆಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ನಿನ್ನೆ ರಾತ್ರಿಯೇ ಮೆಸೇಜ್ ಬಂದಿದ್ದು ಆನಂತರ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್ ಟವರ್ ಲೊಕೇಶನ್ ಉಡುಪಿಯಲ್ಲಿ ತೋರಿಸುತ್ತಿತ್ತು.



ನನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ನೇರ ಕಾರಣ ಎಂದು ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾರೆ. ಸಚಿವರ ವಿರುದ್ಧ ತನಿಖೆ ನಡೆಸಿ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು , ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಮೆಸೇಜ್ ನಲ್ಲಿ ಮನವಿ ಮಾಡಿದ್ದಾರೆ.
A man killed himself in a lodge in the city after writing a suicide note in which he has named Rural Development & Panchayat Raj (RDPR) minister K S Eshwarappa responsible for his extreme step. The deceased has been identified as Santhosh K Patil, who was a building contractor by profession, killed himself in room no 207 of Shambhavi Lodge near KSRTC bus stand. It is learnt that he consumed poison. Two of his friends were found in an adjoining room of the same lodge.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am