ಬ್ರೇಕಿಂಗ್ ನ್ಯೂಸ್
12-04-22 02:48 pm Mangalore Correspondent ಕರಾವಳಿ
ಮಂಗಳೂರು, ಎ.12: ಸಚಿವ ಈಶ್ವರಪ್ಪ ವಿರುದ್ಧ ಆರೋಪಿಸಿ ಸಾವಿಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣ ತನಿಖೆ ನಡೆಸಲಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ಇಲಾಖೆಯ ತಜ್ಞರನ್ನು ಕಳಿಸಲು ಪೊಲೀಸರಿಗೆ ಸೂಚಿಸಿದ್ದೇನೆ. ಪ್ರಾಥಮಿಕ ತನಿಖೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಪ್ರಾಥಮಿಕ ಮಾಹಿತಿಯನ್ನಷ್ಟೇ ಪಡೆದಿದ್ದೇನೆ. ಪೊಲೀಸರ ತನಿಖೆಯಲ್ಲಿ ನಾವು ಯಾವುದೇ ಒತ್ತಡ ಹೇರುವುದಿಲ್ಲ. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲಿದ್ದಾರೆ. ಸಂತೋಷ್ ಪಾಟೀಲ್ ಎನ್ನುವ ವ್ಯಕ್ತಿ ಯಾತಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಲಿದ್ದಾರೆ. ಆತ ಮಾಡಿದ್ದ ಆರೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈಶ್ವರಪ್ಪ ಸಾವಿಗೆ ಕಾರಣ ಎಂದು ನೇರ ಆರೋಪ ಮಾಡಲಾಗಿದೆ. ಇದಕ್ಕಾಗಿ ಈಶ್ವರಪ್ಪ ರಾಜಿನಾಮೆ ಕೇಳುತ್ತೀರಾ.. ಪ್ರತಿಪಕ್ಷದವರು ಮುಖ್ಯಮಂತ್ರಿ ರಾಜಿನಾಮೆಯನ್ನೂ ಕೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಈ ಹಿಂದೆ ಸಿದ್ದರಾಮಯ್ಯ ಸರಕಾರ ಇದ್ದಾಗ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದರಾ ಎಂದು ಪ್ರಶ್ನೆ ಮಾಡಿದರು. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ, ಪ್ರಾಥಮಿಕ ತನಿಖೆ ಆಗಲಿ ಎಂದಷ್ಟೇ ಹೇಳಿದರು.

ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದನ್ನು ನೀವು ತನಿಖೆ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಗುತ್ತಿಗೆದಾರರು ಆರೋಪ ಮಾತ್ರ ಮಾಡಿದ್ದರು. ಆ ಕುರಿತು ಯಾವುದೇ ದಾಖಲೆಯನ್ನು ಸರಕಾರಕ್ಕಾಗಲೀ, ಯಾವುದೇ ತನಿಖಾ ತಂಡಕ್ಕೂ ಸಲ್ಲಿಸಿಲ್ಲ ಎಂದು ಹೇಳಿ ನುಣುಚಿಕೊಂಡರು.
The police are conducting a full investigation into the suicide of contractor Santosh Patil, who is accused of murdering minister Eshwarappa. I have instructed the police to send a specialist in the field of science from Mangalore. Chief Minister Basavaraja Bommai said the next decision will be taken after the preliminary inquiry.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm