ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am