ಬ್ರೇಕಿಂಗ್ ನ್ಯೂಸ್
23-04-22 05:10 pm Mangalore Correspondent ಕರಾವಳಿ
ಉಳ್ಳಾಲ, ಎ.23 : ವಿಶ್ವವಿದ್ಯಾನಿಲಯಗಳು ಸಮಾಜದ ಪ್ರತಿ ರೂಪಗಳಂತಿರಬೇಕು. ಶಿಕ್ಷಣ ಸಂಸ್ಥೆಗಳು ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭಾತೃತ್ವ , ಆರ್ಥಿಕ, ಸಾಮಾಜಿಕ ನ್ಯಾಯ, ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆದ 40ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಘಟಿಕೋತ್ಸವ ಭಾಷಣ ನೆರವೇರಿಸಿ ಮಾತನಾಡಿದರು.
ಶಿಕ್ಷಣ ಮತ್ತು ಪ್ರಜಾಪ್ರಭುತ್ವದ ನಡುವೆ ನಿಕಟ ಸಂಬಂಧ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ ಎಂದರು.
'ಮಾತೆರೆಗ್ಲಾ ನಮಸ್ಕಾರ...'
ಘಟಿಕೋತ್ಸವ ಭಾಷಣದ ಆರಂಭದಲ್ಲಿ ತುಳು ಭಾಷೆಯಲ್ಲೇ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿದ ನ್ಯಾಯಾಧೀಶರು ಬಳಿಕ ಆಂಗ್ಲ ಭಾಷೆಯಲ್ಲಿ ಭಾಷಣ ಮುಂದುವರಿಸಿದರು. ಕರ್ನಾಟಕ ಸರಕಾರದ ರಾಜ್ಯಪಾಲ ಮತ್ತು ಮಂಗಳೂರು ವಿ.ವಿ.ಯ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ಮಂಗಳೂರು ವಿಶ್ವವಿದ್ಯಾಲಯದ 40ನೇ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸಂವಿಧಾನದ ಆಶಯದಂತೆ ದೇಶದ ಎಲ್ಲಾ ಜನರ ಅಭಿವೃದ್ಧಿಗೆ ಯುವ ಜನರು ಕೊಡುಗೆ ನೀಡಬೇಕಾದ ಅಗತ್ಯವಿದೆ ಎಂದರು.
ವಿ.ವಿ.ಯ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಸ್ವಾಗತಿಸಿದರು. ಆಡಳಿತ ಕುಲಸಚಿವ ಕಿಶೋರ್ ಕುಮಾರ್ ಕೆ, ಪರಿಕ್ಷಾಂಗ ಕುಲಸಚಿವ ಪಿ.ಎಲ್.ಧರ್ಮ, ಸಿಂಡಿಕೇಟ್ ಮತ್ತು ವಿ.ವಿ. ಅಕಾಡೆಮಿಕ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಉಪನ್ಯಾಸಕ ಧನಂಜಯ ಕುಂಬ್ಳೆ, ಉಪನ್ಯಾಸಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.
*153ಮಂದಿಗೆ ಪಿಎಚ್ ಡಿ ಪದವಿ, 52 ಮಂದಿಗೆ ಚಿನ್ನದ ಪದಕ, 192 ವಿದ್ಯಾರ್ಥಿಗಳಿಗೆ ರ್ಯಾಂಕ್ ಪ್ರದಾನಿಸಲಾಯಿತು.
ಘಟಿಕೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನವಿಕಾಸ ಯೋಜನೆಯ ಅಧ್ಯಕ್ಷೆ, ಸಮಾಜ ಸೇವಕಿ ಹೇಮಾವತಿ ವಿ ಹೆಗ್ಗಡೆ, ಕ.ಸಾ.ಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಲಾವಿದ ದೇವದಾಸ್ ಕಾಪಿಕಾಡ್ ಅವರುಗಳಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಮತ್ತು ಡಾ.ಶಿವಾನಂದ ನಾಯ್ಕ್ ಅವರಿಗೆ ವಿಜ್ಞಾನ (ಸಂಶೋಧನೆಗೆ ) ಡಾಕ್ಟರೇಟ್ ಪ್ರದಾನಿಸಲಾಯಿತು.
Mangalore 3 awarded honorary doctorates at MU convocation by Justice S Abdul Nazeer, Judge, Supreme Court of India, New Delhi, who was the chief guest, delivered the convocation address. Hemavathi is awarded honorary doctorate for education and social service; Harikrishna Punaroor for social service and literature and Devdas Kapikad for fine arts (Tulu drama/cinema). Dr Shivananda Nayak will be awarded a DSc for his work on type-2 diabetes and cardiovascular diseases.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am