ಬ್ರೇಕಿಂಗ್ ನ್ಯೂಸ್
28-04-22 02:15 pm Mangalore Correspondent ಕರಾವಳಿ
ಮಂಗಳೂರು, ಎ.28 : ರಾಜ್ಯದ ಆರೂವರೆ ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೂಡುಬಿದಿರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ. ಡೀಮ್ಡ್ ಫಾರೆಸ್ಟ್ ಕಾರಣದಿಂದ ಜನರು ತೀವ್ರ ಕಿರುಕುಳ ಅನುಭವಿಸುತ್ತಿದ್ದರು. ಆದರೆ ಸಮಸ್ಯೆ ಬಗೆಹರಿದಿರಲಿಲ್ಲ. ಇದೀಗ 6.5 ಲಕ್ಷ ಎಕ್ರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂ ಕೋರ್ಟ್ ಗೆ ಅಫಿದವಿತ್ ಸಲ್ಲಿಸಿದ್ದೇನೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಡೀಮ್ಡ್ ಅರಣ್ಯ ಸಮಸ್ಯೆಯಂತೆಯೇ ಕುಮ್ಕಿ, ಕಾನ ಬಾಣೆ, ಸೊಪ್ಪಿನ ಬೆಟ್ಟ ಸಮಸ್ಯೆಗಳನ್ನೂ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.
ವಿರೋಧ ಪಕ್ಷದವರು ವಿವಿಧ ವಿಚಾರಗಳನ್ನು ಹೇಳುತ್ತಾರೆ, ಆದರೆ ನಾನು ಅದು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ನನ್ನ ರಾಜ್ಯದ ಅಭಿವೃದ್ಧಿ ಕಾರ್ಯಗಳೇ ನನಗೆ ಮುಖ್ಯ. ನನಗೆ ಅಭಿವೃದ್ಧಿ ಕೆಲಸ ಮಾಡಲು ದಿನದ 24 ಗಂಟೆಯೂ ಸಾಲದು. ಹಾಗಿರುವಾಗ ಸರಿ ತಪ್ಪು ತೀರ್ಮಾನ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಸಮಸ್ಯೆಗಳನ್ನು ಸೃಷ್ಟಿ ಮಾಡಲು ಒಂದು ವರ್ಗ ಪ್ರಯತ್ನ ಮಾಡ್ತಾ ಇದೆ. ಯಾಕೆಂದರೆ ಸಮಸ್ಯೆ ಪರಿಹಾರವಾದರೆ ಯಾರೂ ಬರಲ್ಲ. ಆದರೆ ನನ್ನದು ಪೀಪಲ್ಸ್ ಪಾಲಿಟಿಕ್ಸ್. ಪವರ್ ಪಾಲಿಟಿಕ್ಸ್ ಅಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದರೆ ಅದೇ ಜನರ ರಾಜಕೀಯ. ಅದೇ ನನ್ನದು ರಾಜಕೀಯ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಹೊಸ ತಾಲೂಕು ಸೌಧ ಕಟ್ಟಡದ ಪೀಠೋಪಕರಣಗಳಿಗೆ 2 ಕೋಟಿ ರೂಪಾಯಿ ಕೇಳಿದ್ದಾರೆ. ಅಲ್ಲದೆ ಹೊಸ ತಾಲೂಕಿನ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕೇಳಿದ್ದಾರೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದರು.
Chief Minister Basavaraj Bommai on Wednesday said that 24 hours in a day is not sufficient for him to work for the welfare of the state and hence he can’t be bothered by the accusations made by Opposition parties.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm