ಬ್ರೇಕಿಂಗ್ ನ್ಯೂಸ್
07-05-22 05:18 pm Mangalore Correspondent ಕರಾವಳಿ
ಬಂಟ್ವಾಳ, ಮೇ 7: ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ನನ್ನು ವಿಟ್ಲ ಪೊಲೀಸರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಾಹುಲ್ ಹಮೀದ್ ಎಂಬಾತ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 4ರಂದು ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ಸಂಜೀವ ಎಂಬವರ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಗಳ ಸಾವಿಗೆ ಕಣಿಯೂರು ತಲೆಕ್ಕಿಯ ಸಾಹುಲ್ ಹಮೀದ್ ಯಾನೆ ಕುಟ್ಟ ಪ್ರಚೋದನೆ ನೀಡಿರುವುದೇ ಕಾರಣ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು.
ಘಟನೆಯ ಬಳಿಕ ಹಿಂದು ಸಂಘಟನೆಗಳು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಇದೊಂದು ವ್ಯವಸ್ಥಿತ ಹತ್ಯೆ, ಲವ್ ಜಿಹಾದಿಗೆ ಬಾಲಕಿ ಬಲಿಯಾಗಿದ್ದಾಳೆಂದು ಆರೋಪಿಸಿದ್ದರು. ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ಶಾಸಕ ರಾಜೇಶ್ ನಾಯ್ಕ್ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದರು.
Bantwal Provocation to suicide of 15 year old girl accused arrested.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am