ಬ್ರೇಕಿಂಗ್ ನ್ಯೂಸ್
16-05-22 02:00 pm Udupi Correspondent ಕರಾವಳಿ
ಉಡುಪಿ, ಮೇ 16 : ಉಡುಪಿಯಲ್ಲಿ ಟೊಮೇಟೊ ಫ್ಲೂ ಪತ್ತೆಯಾಗಿದೆ ಎಂಬ ವದಂತಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಅಂತಹ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆ ರೀತಿಯ ಪ್ರಕರಣ ಪತ್ತೆಯಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ. ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಎನ್ನುವ ಸೋಂಕಿನ ಲಕ್ಷಣಗಳಿರುವ ಪ್ರಕರಣ ಅದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ.

ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಎಂದು ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ.
ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತವೆ. ಈ ಕುರಿತು ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
No tomato flue in Udupi says DC. There are some rumours that a case of Tomato flue has been dedicated in Udupi don't give ear to such fake news said Udupi DC Kurma Rao
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm