ರೆಡ್ ಅಲರ್ಟ್ ; ಉಡುಪಿ ಜಿಲ್ಲೆಯಲ್ಲಿ ಮೇ 20ಕ್ಕೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ 

19-05-22 10:07 pm       Udupi Correspondent   ಕರಾವಳಿ

ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಮೇ 20ರ ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ. 

ಉಡುಪಿ, ಮೇ 19 : ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಮೇ 20ರ ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ. 

ಕರಾವಳಿಯ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಶುಕ್ರವಾರವೂ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ/ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ಕರಾವಳಿಯಲ್ಲಿ ದಿನವಿಡೀ ಜಿಟಿ ಜಿಟಿ ಮಳೆಯಾಗಿದ್ದು ಜನರಿಗೆ ಎರಡೇ ದಿನದಲ್ಲಿ ಮಳೆ ಚಳಿ ಹಿಡಿಸಿದೆ.

Deputy commissioner (DC) M Kurma Rao declared holiday for all schools and PU colleges of the district on May 20 due to incessant rains.