ಬ್ರೇಕಿಂಗ್ ನ್ಯೂಸ್
06-08-22 01:51 pm Source: Vijayakarnataka ಕ್ರೀಡೆ
ಮುಂಬರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅತ್ಯುತ್ತಮ ಆರಂಭಿಕ ಜೋಡಿಯನ್ನು ಗುರುತಿಸಲು ಪ್ರಯತ್ನಿಸುತ್ತಿರುವ ಟೀಮ್ ಇಂಡಿಯಾಗೆ ಮಾಜಿ ಕ್ರಿಕೆಟಿಗ ದೀಪ್ದಾಸ್ಗುಪ್ತಾ, ಮೂರನೇ ಆಯ್ಕೆಯ ಆರಂಭಿಕ ಬ್ಯಾಟ್ಸ್ಮನ್ ಆಗಿ ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.
ಗಾಯಕ್ಕೆ ತುತ್ತಾಗಿರುವ ಕಾರಣ ಕೆ.ಎಲ್ ರಾಹುಲ್ ಅವರು ಕಳೆದ ಫೆಬ್ರವರಿಯಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ ಅವರ ಜೊತೆ ಸಾಕಷ್ಟು ಆಟಗಾರರಿಗೆ ಇನಿಂಗ್ಸ್ ಆರಂಭಿಸಲು ಅವಕಾಶ ಕಲ್ಪಿಸಲಾಗಿತ್ತು.

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪ್ರಯತ್ನಿಸಲಾಗಿದೆ. ಆದರೆ, ಟೀಮ್ ಮ್ಯಾನೇಜ್ಮಂಟ್ನ ಈ ಪ್ರಯೋಗ ಹೇಳಿಕೊಳ್ಳುವಂತೆ ವರ್ಕ್ಔಟ್ ಆಗಿಲ್ಲ ಆದರೆ, ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ 76 ರನ್ ಗಳಿಸಿದ್ದು, ಸಮಾಧಾನದ ವಿಷಯ.

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪ್ರಯತ್ನಿಸಲಾಗಿದೆ. ಆದರೆ, ಟೀಮ್ ಮ್ಯಾನೇಜ್ಮಂಟ್ನ ಈ ಪ್ರಯೋಗ ಹೇಳಿಕೊಳ್ಳುವಂತೆ ವರ್ಕ್ಔಟ್ ಆಗಿಲ್ಲ ಆದರೆ, ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ 76 ರನ್ ಗಳಿಸಿದ್ದು, ಸಮಾಧಾನದ ವಿಷಯ.

ಕಳೆದ 2021ರ ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಪೃಥ್ವಿ ಶಾ ಕೊನೆಯ ಬಾರಿ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅವರು ಅತ್ಯುತ್ತಮವಾಗಿ ಆಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ 10 ಇನಿಂಗ್ಸ್ಗಳಲ್ಲಿ ಅವರು 152.97ರ ಸ್ಟ್ರೈಕ್ ರೇಟ್ನಲ್ಲಿ 283 ರನ್ ಗಳಿಸಿದ್ದರು.
ಮೂರನೇ ಆರಂಭಿಕ ಸ್ಥಾನಕ್ಕೆ ಮುಂಬೈ ಇಂಡಿಯನ್ಸ್ ಆರಂಭಿಕ ಇಶಾನ್ ಕಿಶನ್ ಅವರನ್ನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಎಡಗೈ ಬ್ಯಾಟ್ಸ್ಮನ್ ಇತ್ತೀಚೆಗೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆಂದು ಅವರು ಹೇಳಿದ್ದಾರೆ.
"ಇಶಾನ್ ಕಿಶನ್ ಅವರ ಅಂತಾರಾಷ್ಟ್ರೀಯ ದಾಖಲೆಗಳನ್ನು ನೀವು ನೋಡಬಹುದು. ಅವರು ಅತ್ಯುತ್ತಮವಾಗಿ ಆಡಿದ್ದಾರೆ. ವೃತ್ತಿ ಜೀವನವನ್ನು ಅತ್ಯುತ್ತಮವಾಗಿ ಆರಂಭಿಸಿದ್ದರು. ಆದರೆ, ಅವರು ಇತ್ತೀಚೆಗೆ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಡಿಸುವುದು ಅನುಮಾನ," ಎಂದಿದ್ದಾರೆ.
But He Can Give You A Brisk Start Deep Dasgupta Backs Prithvi Shaw As Indias Third Choice Opener For T20 World Cup.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm