ಬ್ರೇಕಿಂಗ್ ನ್ಯೂಸ್
08-08-22 02:58 pm Source: Vijayakarnataka ಕ್ರೀಡೆ
ಲೌಡರ್ಹಿಲ್ (ಪ್ಲೋರಿಡಾ): ಆತಿಥೇಯ ವೆಸ್ಟ್ ಇಂಡೀಸ್ ಎದುರು ಅಧಿಕಾರಯುತ ಆಟವಾಡಿದ ಟೀಮ್ ಇಂಡಿಯಾ, ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ 4-1 ಅಂತರದ ಜಯ ದಾಖಲಿಸಿದ. ಭಾನುವಾರ ನಡೆದ ಸರಣಿಯ 5ನೇ ಹಾಗೂ ಅಂತಿಮ ಪಂದ್ಯದಲ್ಲಿ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ಕೊಟ್ಟು, ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಮುನ್ನಡೆಸಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 88 ರನ್ಗಳ ಭರ್ಜರಿ ಗೆಲುವು ತಂದುಕೊಟ್ಟರು.
ಅಂದಹಾಗೆ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಭಾರತ ಟಿ20 ಕ್ರಿಕೆಟ್ ತಂಡ ಗೆದ್ದ ಮೂರನೇ ಪಂದ್ಯ ಇದಾಗಿದೆ. ಕಳೆದ ತಿಂಗಳು ಐರ್ಲೆಂಡ್ ವಿರುದ್ಧ ನಡೆದ ಎರಡು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹಾರ್ದಿಕ್ 2-0 ಅಂತರದ ಜಯ ತಂದಿದ್ದರು. ಇದೀಗ ವಿಂಡೀಸ್ ವಿರುದ್ಧ ಕೊನೇ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶ್ರಾಂತಿ ತೆಗೆದುಕೊಂಡ ಕಾರಣ ಭಾರತ ತಂಡವನ್ನು ಮುನ್ನಡೆಸಿ ಮತ್ತೊಂದು ಯಶಸ್ಸು ತಂದುಕೊಟ್ಟಿದ್ದಾರೆ.ಈ ಗೆಲುವಿನ ಬಳಿಕ ಮಾತನಾಡಿದ ಹಂಗಾಮಿ ನಾಯಕ ಹಾರ್ದಿಕ್, ಪೂರ್ಣ ಪ್ರಮಾಣದಲ್ಲಿ ನಾಯಕತ್ವ ಸಿಕ್ಕರೆ ತಮಗೆ ಬಹಳಾ ಸಂತೋಷ ಎಂದು ಹೇಳಿಕೊಂಡಿದ್ದಾರೆ.
"ಖಂಡಿತಾ, ಯಾಕಾಗಬಾರದು? ಭವಿಷ್ಯದಲ್ಲಿ ನನಗೆ ಪೂರ್ಣ ಪ್ರಮಾಣದ ಕ್ಯಾಪ್ಟನ್ ಆಗಿ ಆಡುವ ಅವಕಾಶ ಸಿಕ್ಕರೆ ಖಂಡಿತಾ ಅತೀವ ಸಂತಸವಾಗಲಿದೆ. ಸದ್ಯ ನಮ್ಮೆದುರು ವಿಶ್ವಕಪ್ ಇದೆ. ಏಷ್ಯಾ ಕಪ್ ಕೂಡ ಹತ್ತಿರದಲ್ಲೇ ಇದೆ. ಈ ಬಗ್ಗೆ ಗಮನ ನೀಡಿ ನಮ್ಮ ಪ್ರದರ್ಶನ ಕಾಯ್ದುಕೊಳ್ಳುವ ಕಡೆಗೆ ಎದುರು ನೋಡುತ್ತಿದ್ದೇನೆ. ನಮ್ಮ ಸಾಮರ್ಥ್ಯವನ್ನು ಉತ್ತಮ ಪಡಿಸಿಕೊಳ್ಳುವ ಕಡೆಗೆ ಗಮನ ನೀಡುತ್ತಿದ್ದೇವೆ," ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ ಎಂದು ಕ್ರಿಕ್ಇನ್ಫೋ ವರದಿ ಮಾಡಿದೆ.

ಸರಣಿ ಗೆಲುವಿನ ಬಳಿಕ ಮಾತನಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ, ಭವಿಷ್ಯದಲ್ಲಿ ಭಾರತ ತಂಡದಲ್ಲಿ 10 ಕ್ಯಾಪ್ಟನ್ಗಳನ್ನು ಕಾಣಬಹುದು ಎಂದು ಹೇಳಿದ್ದಾರೆ. "ತಂಡವೊಂದರಲ್ಲಿ ಇಷ್ಟು ಜನ ನಾಯಕರು ಇರುವುದು ಬಹಳಾ ಉತ್ಸುಕತೆ ತಂದುಕೊಡುತ್ತದೆ. ನಮ್ಮ ಬೆನ್ನಿಗೆ ಐಪಿಎಲ್ ಇದೆ. ಅಲ್ಲಿ 10 ತಂಡಗಳಿವೆ. ಆ ಹತ್ತೂ ತಂಡಗಳಲ್ಲಿ ಇರುವ ನಾಯಕರು ಭಾರತ ತಂಡದಲ್ಲಿ ಆಡುವ ಸಾಧ್ಯತೆ ಇದೆ. ಇದು ನಿಜಕ್ಕೂ ಅದ್ಭುತ ಸಂಗತಿ. ಇವೆರೆಲ್ಲರಿಗೂ ನಾಯಕತ್ವದ ಜವಾಬ್ದಾರಿ ಬಗ್ಗೆ ಅರಿವಿದ್ದರೆ ನನ್ನ ಕ್ಯಾಪ್ಟನ್ಸಿಯೂ ಸುಲಭವಾಗುತ್ತದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಅಂದಹಾಗೆ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಈ ವರ್ಷ ಟೀಮ್ ಇಂಡಿಯಾ ಒಟ್ಟಾರೆ 8 ಕ್ಯಾಪ್ಟನ್ಗಳನ್ನು ಬಳಕೆ ಮಾಡಿಕೊಂಡಿದೆ. ಆಟಗಾರರ ಮೇಲಿನ ಹೊರೆ ನಿರ್ವಹಣೆ ಮತ್ತು ಗಾಯದ ಸಮಸ್ಯೆಗಳ ಕಾರಣ ಭಾರತ ತಂಡದ ಕ್ಯಾಪ್ಟನ್ಸಿಯಲ್ಲಿ ಸತತ ಬದಲಾವಣೆ ಆಗಿದೆ. ಇನ್ನು ಐಪಿಎಲ್ 2022 ಟೂರ್ನಿಯಲ್ಲಿ ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಿ ಟ್ರೋಫಿ ಗೆದ್ದುಕೊಟ್ಟ ಹಾರ್ದಿಕ್ ಪಾಂಡ್ಯಗೆ ಇದೀಗ ಭಾರತ ತಂಡವನ್ನು ಮುನ್ನಡೆಸುವ ಅವಕಾಶವೂ ಸಿಕ್ಕಿದೆ.
Ind Vs Wi I Will Be More Than Happy To Gey Full Time Captaincy Says Hardik Pandya.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm