ಬ್ರೇಕಿಂಗ್ ನ್ಯೂಸ್
09-08-22 02:42 pm Source: Vijayakarnataka ಕ್ರೀಡೆ
ಬೆಂಗಳೂರು: ಎರಡೂ ರಾಷ್ಟ್ರಗಳ ನಡುವೆ ಹದಗೆಟ್ಟಿರುವ ರಾಜಕೀಯ ಸ್ಥಿತಿಗತಿಗಳ ಕಾರಣ ಭಾರತ ಮತ್ತು ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಸರಣಿಗಳನ್ನು ಆಡುತ್ತಿಲ್ಲ. ಕೇವಲ ಐಸಿಸಿ ಮತ್ತು ಎಸಿಸಿ ಆಯೋಜಿತ ಟೂರ್ನಿಗಳಲ್ಲಿ ಮಾತ್ರವೇ ಟೀಮ್ ಇಂಡಿಯಾ ಮತ್ತು ಪಾಕ್ ತಂಡಗಳು ಮುಖಾಮುಖಿಯಾಗುತ್ತಿವೆ. ಇದೀಗ ಆಗಸ್ಟ್ 27ರಂದು ಶುರುವಾಗಲಿರುವ ಏಷ್ಯಾ ಕಪ್ 2022 ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯವನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ. ಆಗಸ್ಟ್ 28ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂಡೊ-ಪಾಕ್ ಕದನ ನಡೆಯಲಿದೆ. ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳೇ ಫೈನಲ್ ತಲುಪಿದರೆ, ಒಟ್ಟು 3 ಬಾರಿ ಭಾರತ ಮತ್ತು ಪಾಕಿಸ್ತಾನ ನಡುವಣ ಕಾದಾಟ ವೀಕ್ಷಿಸಲು ಸಿಗಲಿದೆ.
ಏಷ್ಯಾ ಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ಸಾಧನೆ ಮೆರೆದಿರುವ ಟೀಮ್ ಇಂಡಿಯಾ ಈ ಬಾರಿಯೂ ಟ್ರೋಫಿ ಗೆಲ್ಲುವ ಫೇವರಿಟ್ ತಂಡವಾಗಿದೆ. ಈ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆಯೋಜನೆ ಆಗಲಿದ್ದು, ಇದೇ ಕಾರಣಕ್ಕೆ ಏಷ್ಯಾ ಕಪ್ ಟೂರ್ನಿಯನ್ನು ಟಿ20 ಕ್ರಿಕೆಟ್ ಮಾದರಿಯಲ್ಲೇ ಆಯೋಜಿಸಲಾಗುತ್ತಿದೆ.
ಕಳೆದ ವರ್ಷ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿ ಪಾಕ್ ಎದುರು 10 ವಿಕೆಟ್ಗಳ ಆಘಾತಕ್ಕೊಳಗಾಯಿತು. ಹೀಗಾಗಿ ಏಷ್ಯಾ ಕಪ್ನಲ್ಲಿ ಪಾಕ್ ಎದುರು ತನ್ನ ಶ್ರೇಷ್ಠ ಇಲೆವೆನ್ ಕಣಕ್ಕಿಳಿಸುವ ಲೆಕ್ಕಾಚಾರ ಮಾಡಿದೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡದ ಬೌಲಿಂಗ್ ವಿಭಾಗಕ್ಕೆ ಭಾರಿ ಹಿನ್ನಡೆ ತಂದೊಡ್ಡಿದೆ ಆದರೂ, ಅವರ ಸ್ಥಾನ ತುಂಬಬಲ್ಲ ಸಮರ್ಥ ಯುವ ವೇಗಿಗಳು ತಂಡದಲ್ಲಿ ಇದ್ದಾರೆ. ಟಿ20 ಸ್ಪೆಷಲಿಸ್ಟ್ ಬೌಲರ್ ಹರ್ಷಲ್ ಪಟೇಲ್ ಕೂಡ ಗಾಯದ ಸಮಸ್ಯೆ ಕಾರಣ ಮಹತ್ವದ ಟೂರ್ನಿಗೆ ಅಲಭ್ಯರಾಗಿದ್ದಾರೆ.
ಪಾಕಿಸ್ತಾನ ವಿರುದ್ಧ ಏಷ್ಯಾ ಕಪ್ ಕದನಕ್ಕೆ ಭಾರತ ತಂಡದ ಸಂಭಾವ್ಯ ಇಲೆವೆನ್ ಹೀಗಿದೆ.
1. ರೋಹಿತ್ ಶರ್ಮಾ (ಕ್ಯಾಪ್ಟನ್/ ಓಪನರ್)
2. ಕೆ.ಎಲ್ ರಾಹುಲ್ (ಓಪನರ್/ ವೈಸ್ ಕ್ಯಾಪ್ಟನ್)
3. ವಿರಾಟ್ ಕೊಹ್ಲಿ (ಬ್ಯಾಟ್ಸ್ಮನ್)
4. ರಿಷಭ್ ಪಂತ್ (ವಿಕೆಟ್ಕೀಪರ್/ ಬ್ಯಾಟ್ಸ್ಮನ್)
5. ಹಾರ್ದಿಕ್ ಪಾಂಡ್ಯ (ಆಲ್ರೌಂಡರ್)
6. ದಿನೇಶ್ ಕಾರ್ತಿಕ್ (ಬ್ಯಾಟರ್)
7. ರವೀಂದ್ರ ಜಡೇಜಾ (ಆಲ್ರೌಂಡರ್)
8. ಆರ್ ಅಶ್ವಿನ್ (ಆಫ್ ಸ್ಪಿನ್ನರ್)
9. ಭುವನೇಶ್ವರ್ ಕುಮಾರ್ (ವೇಗದ ಬೌಲರ್)
10. ರವಿ ಬಿಷ್ಣೋಯ್ (ಲೆಗ್ ಸ್ಪಿನ್ನರ್)
11. ಅರ್ಷದೀಪ್ ಸಿಂಗ್ (ಎಡಗೈ ವೇಗದ ಬೌಲರ್)
ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ
ಓಪನರ್ಸ್: ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್
ಮಧ್ಯಮ ಕ್ರಮಾಂಕದ ಬ್ಯಾಟರ್ಸ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ
ವಿಕೆಟ್ಕೀಪರ್ಸ್: ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್
ಆಲ್ರೌಂಡರ್ಸ್: ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ
ವೇಗದ ಬೌಲರ್ಸ್: ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್
ಸ್ಪಿನ್ನರ್ಸ್: ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್
ಕಾಯ್ದಿರಿಸಿದ ಆಟಗಾರರು: ಅಕ್ಷರ್ ಪಟೇಲ್, ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.
ಏಷ್ಯಾ ಕಪ್ 2022 ಟೂರ್ನಿಗೆ ಪಾಕಿಸ್ತಾನ ತಂಡದ ವಿವರ ಇಲ್ಲಿದೆ
ಬಾಬರ್ ಅಝಮ್ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್ಕೀಪರ್), ಮೊಹಮ್ಮದ್ ವಾಸಿಂ ಜೂನಿಯನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶಹನವಾಝ್ ದಹಾನಿ ಮತ್ತು ಉಸ್ಮಾನ್ ಕಾದಿರ್.
Ind Vs Pak Team Indias Predicted Playing Xi To Face Pakistan In Upcoming Asia Cup T20 2022.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm