ಬ್ರೇಕಿಂಗ್ ನ್ಯೂಸ್
10-08-22 02:26 pm Source: Vijayakarnataka ಕ್ರೀಡೆ
ಮುಂಬೈ: ಮುಂಬರುವ ಏಷ್ಯಾ ಕಪ್ 2022 ಟೂರ್ನಿ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಸದಸ್ಯರ ಟೀಮ್ ಇಂಡಿಯಾ ಪ್ರಕಟ ಮಾಡಿದೆ. ತಂಡಕ್ಕೆ ಸ್ಟಾರ್ಗಳಾದ ಕೆ.ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಮರಳಿರುವುದು ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾದರೆ, ಇದೇ ವೇಳೆ ಗಾಯದ ಸಮಸ್ಯೆ ಕಾರಣ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಅಲಭ್ಯರಾಗಿರುವುದು ಬಹುದೊಡ್ಡ ಹಿನ್ನಡೆ ತಂದೊಡ್ಡಿದೆ. ಈ ನಡುವೆ ತಂಡದ ಆಯ್ಕೆಯನ್ನು ಪ್ರರ್ಶನೆ ಮಾಡಿರುವ ಟೀಮ್ ಇಂಡಿಯಾದ ಮಾಜಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಕಿರಣ್ ಮೋರೆ ಅನುಭವಿ ಆರ್. ಅಶ್ವಿನ್ ಅವರನ್ನು ಆಯ್ಕೆ ಮಾಡಿದ್ದೇಕೆ? ಎಂದು ಟೀಮ್ ಇಂಡಿಯಾ ಸೆಲೆಕ್ಟರ್ಸ್ ಕಡೆಗೆ ಬೌನ್ಸರ್ ಎಸೆದಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ಪ್ರವಾಸದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈಗ ಭಾರತ ತಂಡಕ್ಕೆ ಮರಳಿದ್ದಾರೆ. ಮತ್ತೊಂದೆಡೆ ಗಾಯದ ಸಮಸ್ಯೆ ಮತ್ತು ಕೋವಿಡ್-19 ಎಲ್ಲದರಿಂದಲೂ ಸಂಪೂರ್ಣ ಗುಣಮುಖರಾದ ಕೆ.ಎಲ್ ರಾಹುಲ್ ಕೂಡ ಕಮ್ಬ್ಯಾಕ್ ಎದುರು ನೋಡುತ್ತದಿದ್ದಾರೆ. ಈ ಕುರಿತಾಗಿ ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಕಿರಣ್ ಮೋರೆ, ತಂಡಕ್ಕೆ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಬೇಕಿತ್ತು. ಜೊತೆಗೆ ಅಶ್ವಿನ್ ಸ್ಥಾನದಲ್ಲಿ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನೇ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
"ನನಗೆ ನಿಜಕ್ಕೂ ಅಚ್ಚರಿಯಾಗಿದೆ. ಆರ್ ಅಶ್ವಿನ್ಗೆ ಈ ತಂಡದಲ್ಲಿ ಸ್ಥಾನ ಸಿಕ್ಕಿರುವುದಾದರೂ ಹೇಗೆ? ಎಂಬುದು ಅರ್ಥವಾಗುತ್ತಿಲ್ಲ. ಕಳೆದ ವಿಶ್ವಕಪ್ನಲ್ಲೂ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ, ಆಡುವ ಅವಕಾಶ ಸಿಕ್ಕಿರಲಿಲ್ಲ. ಅವರ ಐಪಿಎಲ್ ದಾಖಲೆಗಳನ್ನು ಗಮನಿಸಿ. ಅಷ್ಟೇನು ಹೇಳಿಕೊಳ್ಳುವಂತ್ತಿಲ್ಲ. ಮೊಹಮ್ಮದ್ ಶಮಿ ಅವರನ್ನು ಕೈ ಬಿಟ್ಟಿರುವುದಕ್ಕೆ ಬಹಳಾ ಬೇಸರವಿದೆ. ಅಕ್ಷರ್ ಪಟೇಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಶಮಿ ಅವರನ್ನು ವಿಶ್ವಕಪ್ಗೂ ಆಯ್ಕೆ ಮಾಡಬೇಕು. ವಿಕೆಟ್ ಪಡೆಯುವಂತಹ ಬೌಲರ್ಗಳು ತಂಡದಲ್ಲಿ ಇರಬೇಕು. ಹೊಸ ಚೆಂಡಿನಲ್ಲಿ ವಿಕೆಟ್ ತಂದುಕೊಡುವ ಸಾಮರ್ಥ್ಯ ಶಮಿ ಅವರಲ್ಲಿದೆ. ಮಧ್ಯದ ಮತ್ತು ಕೊನೇ ಓವರ್ಗಳಲ್ಲೂ ಅವರು ಮಿಂಚಬಲ್ಲರು," ಎಂದು ಮೋರೆ ಅಭಿಪ್ರಾಯ ಹೊರಹಾಕಿದ್ದಾರೆ.
ಇನ್ನು ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡದಲ್ಲಿ ಕೇವಲ ಮೂವರು ವೇಗಿಗಳನ್ನು ಮಾತ್ರವೇ ಆಯ್ಕೆ ಮಾಡಲಾಗಿದೆ. ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಅರ್ಷದೀಪ್ ಸಿಂಗ್ ಸ್ಥಾನ ಪಡೆದಿದ್ದು, ಸ್ಪಿನ್ನರ್ಗಳಾಗಿ ಆರ್ ಅಶ್ವಿನ್, ಯುಜ್ವೇಂದ್ರ ಚಹಲ್ ಮತ್ತು ರವಿ ಬಿಷ್ಣೋಯ್ ಇದ್ದಾರೆ. ಆಲ್ರೌಂಡರ್ಗಳಾಗಿ ಆರ್ ಜಡೇಜಾ, ದೀಪಕ್ ಹೂಡ ಮತ್ತು ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿದ್ದಾರೆ.
ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ
Asia Cup 2022 Kiran More Disappointed With Team India’s Squad Selection For Asia Cup.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm