ಬ್ರೇಕಿಂಗ್ ನ್ಯೂಸ್
16-08-22 03:26 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಓಡಿಐ ಸರಣಿಯಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಶಹಬಾಝ್ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಟ್ವಿಟರ್ನಲ್ಲಿ ಖಚಿತಪಡಿಸಿದೆ.
ಕೆಎಲ್ ರಾಹುಲ್ ನಾಯಕತ್ವದ ಭಾರತ ತಂಡ ಈಗಾಗಲೇ ಜಿಂಬಾಬ್ವೆಗೆ ತೆರಳಿದ್ದು, ಆಗಸ್ಟ್ 18 ರಂದು ಮೊದಲನೇ ಓಡಿಐ, 20 ಹಾಗೂ 22 ರಂದು ಕ್ರಮವಾಗಿ ಎರಡು ಮತ್ತು ಮೂರನೇ ಪಂದ್ಯಗಳಲ್ಲಿ ಸೆಣಸಲಿವೆ. ವಾಷಿಂಗ್ಟನ್ ಸುಂದರ್ ಅವರ ಸ್ಥಾನದಲ್ಲಿ ಶಹಭಾಜ್ ಅಹ್ಮದ್ ಅವರು ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಆಗಸ್ಟ್ 11 ರಂದು ಮ್ಯಾಂಚೆಸ್ಟರ್ನಲ್ಲಿ ವೋಸ್ಟರ್ಶೈರ್ ವಿರುದ್ಧ ಪಂದ್ಯದ ಫೀಲ್ಡಿಂಗ್ ವೇಳೆ ವಾಷಿಂಗ್ಟನ್ ಸುಂದರ್ ಅವರ ಎಡ ಭುಜದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಕ್ಷಣ ಅವರು ಮೈದಾನ ತೊರೆದಿದ್ದರು. ಗಾಯದ ಸ್ವರೂಪ ಗಂಭೀರವಾಗಿರುವ ಕಾರಣ ಅವರನ್ನು ಜಿಂಬಾಬ್ವೆ ಪ್ರವಾಸದಿಂದ ಕೈ ಬಿಡಲಾಗಿದೆ.
ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತವರು ಓಡಿಐ ಸರಣಿ ಬಳಿಕ ವಾಷಿಂಗ್ಟನ್ ಸುಂದರ್ ಭಾರತ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಬೆರಳಿನ ಗಾಯಕ್ಕೆ ತುತ್ತಾಗಿದ್ದರಿಂದ ಭಾರತ ತಂಡದಿಂದ ಹಲವು ತಿಂಗಳುಗಳ ಕಾಲ ಸ್ಪಿನ್ ಆಲ್ರೌಂಡರ್ ಹೊರಗುಳಿದಿದ್ದರು. ನಂತರ ಸಂಪೂರ್ಣ ಗುಣಮುಖರಾಗಿದ್ದ ಅವರು, 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಕಾಣಿಸಿಕೊಂಡಿದ್ದರು.
2022ರ ಐಪಿಎಲ್ ಟೂರ್ನಿಯ ವೇಳೆಯೂ ವಾಷಿಂಗ್ಟನ್ ಸುಂದರ್ ಮತ್ತೊಮ್ಮೆ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ನೇರವಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ಬಂದು, ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿದ್ದರು. ಸಂಪೂರ್ಣ ಫಿಟ್ ಆದ ಬಳಿಕ ಅವರು ಇಂಗ್ಲೆಂಡ್ನಲ್ಲಿ ಲಾಂಕಶೈರ್ ಪರ ಕೌಂಟಿ ಕ್ರಿಕೆಟ್ ಆಡಲು ತೆರಳಿದ್ದರು. ಆಡಿದ ಎರಡು ಪ್ರಥಮ ದರ್ಜೆ ಪಂದ್ಯಗಳಲ್ಲಿ ಅವರು 8 ವಿಕೆಟ್ಗಳನ್ನು ಪಡೆದಿದ್ದರು. ಇದೀಗ ನಡೆಯುತ್ತಿರುವ ರಾಯಲ್ ಲಂಡನ್ ಕಪ್ ಟೂರ್ನಿಯಲ್ಲಿ 3 ಲಿಸ್ಟ್ 'ಎ' ಪಂದ್ಯಗಳನ್ನು ಆಡಿದ್ದರು.
ಹದಿನೈದನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 16 ಪಂದ್ಯಗಳಾಡಿದ್ದ ಶಹಬಾಝ್ ಅಹ್ಮದ್ ಅವರು 219 ರನ್ ಹಾಗೂ 4 ವಿಕೆಟ್ಗಳನ್ನು ಕಬಳಿಸಿದ್ದರು. ಮತ್ತೊಂದೆಡೆ ಜೂನ್ ತಿಂಗಳಲ್ಲಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಬಂಗಾಳ ತಂಡದ ಪರ ಸ್ಪಿನ್ ಆಲ್ರೌಂಡರ್ ಒಂದು ಶತಕ ಸೇರಿದಂತೆ 262 ರನ್ಗಳನ್ನು ಗಳಿಸಿದ್ದರು.
ಜಿಂಬಾಬ್ವೆ ವಿರುದ್ಧ 3 ಪಂದ್ಯಗಳ ಓಡಿಐ ಸರಣಿಯ ಭಾರತ ತಂಡ: ಕೆ.ಎಲ್ ರಾಹುಲ್(ನಾಯಕ), ಶಿಖರ್ ಧವನ್ (ಉಪ ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಹಬಾಝ್ ಅಹ್ಮದ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹರ್.
Ind Vs Zim Shahbaz Ahmed Replaces Injured Washington Sundar For 3 Odi Series Against Zimbabwe.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm