ಬ್ರೇಕಿಂಗ್ ನ್ಯೂಸ್
24-08-22 02:56 pm Source: Vijayakarnataka ಕ್ರೀಡೆ
ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬ್ಯಾಟ್ ಸದ್ದು ಮಾಡಿಲ್ಲ. ವೃತ್ತಿಬದುಕಿನ ಹೀನಾಯ ಲಯದಲ್ಲಿರುವ ವಿರಾಟ್, ಇದೀಗ ಏಷ್ಯಾ ಕಪ್ 2022 ಟೂರ್ನಿಯಲ್ಲಿ ಭಾರತ ತಂಡಕ್ಕೆ ಕಮ್ಬ್ಯಾಕ್ ಮಾಡಲಿದ್ದಾರೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡುತ್ತಿದ್ದು, ಈ ಪಂದ್ಯದಲ್ಲಿ ಭಾರತ ತಂಡ ಪರ ವಿರಾಟ್ ಕೊಹ್ಲಿ ಆಡಿದ್ದೇ ಆದರೆ ಅದು ಅವರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವೃತ್ತಿಬದುಕಿನ 100ನೇ ಪಂದ್ಯವಾಗಲಿದೆ.
ವಿರಾಟ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಆಡಿದರೆ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಆಡಿದ ವಿಶ್ವದ ಎರಡನೇ ಹಾಗೂ ಭಾರತದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ವಿಶೇಷ ಪಂದ್ಯ ಸಲುವಾಗಿ ಭಾರತ ತಂಡದ ಮಾಜಿ ನಾಯಕ ವಿಶೇಷ ಬ್ಯಾಟ್ ಬಳಕೆ ಮಾಡಲು ಮುಂದಾಗಿದ್ದಾರೆ. ರನ್ ಮಷೀನ್ ಬಳಕೆ ಮಾಡುತ್ತಿದ್ದ ಕೆಂಪು ಬಣ್ಣದ ಎಮ್ಆರ್ಎಫ್ ಸ್ಟಿಕ್ಸರ್ ಇದ್ದ ಬ್ಯಾಟ್ ಬದಲು, ಗೋಲ್ಡ್ ಎಡಿಷನ್ ಬ್ಯಾಟ್ ಬಳಕೆ ಮಾಡಲಿದ್ದಾರೆ ಎಂದು ವರದಿಗಳಾಗಿವೆ. ಹೊಸ ಬ್ಯಾಟ್ನ ಫೋಟೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಸದ್ದು ಮಾಡಿವೆ.
ಭಾರತದ ಅತ್ಯಂತ ಜನಪ್ರಿಯ ಟೈರ್ ತಯಾರಿಕೆ ಸಂಸ್ಥೆ ಎಂಆರ್ಎಫ್, ವಿರಾಟ್ ಕೊಹ್ಲಿ ಅವರ ಬ್ಯಾಟ್ ಪ್ರಾಯೋಜಕತ್ವವನ್ನು ಹೊಂದಿದೆ. ಇದೀಗ 22 ಸಾವಿರ ರೂ. ಬೆಲೆ ಬಾಳುವ ಗೋಲ್ಡ್ ಎಡಿಷನ್ ಎಂಆರ್ಎಫ್ ಬ್ಯಾಟ್ನೊಂದಿಗೆ ಮೊದಲ ಬಾರಿ ಆಡಲು ವಿರಾಟ್ ಮುಂದಾಗಿದ್ದಾರೆ. ತಮ್ಮ ನೂರನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ವಿರಾಟ್, ವಿಶೇಷ ಬ್ಯಾಟ್ನಲ್ಲಿ ಎಷ್ಟು ರನ್ ಗಳಿಸಲಿದ್ದಾರೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. 2008ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಕೊಹ್ಲಿ, ಇತ್ತೀಚೆಗೆ (ಆಗಸ್ಟ್ 18) ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿನಲ್ಲಿ 14 ವರ್ಷಗಳ ಸಂಭ್ರಮ ಆಚರಿಸಿಕೊಂಡರು.
ಶತಕ ಬಾರಿಸಿ 1000ಕ್ಕೂ ಹೆಚ್ಚು ದಿನಗಳು ಕಳೆದಿವೆ. ಈಗ ಪಾಕ್ ವಿರುದ್ಧದ ಏಷ್ಯಾ ಕಪ್ ಪಂದ್ಯದಲ್ಲಿ ತಮ್ಮ ಶ್ರೇಷ್ಠ ಲಯ ಕಂಡುಕೊಳ್ಳಲಿದ್ದಾರೆ ಎಂದೇ ನಿರೀಕ್ಷಿಸಲಾಗಿದೆ. ಆದರೆ, ಪಾಕ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಯಾವುದೇ ಕಾರಣಕ್ಕೂ ಲಯ ಕಂಡುಕೊಳ್ಳುವುದು ಬೇಡ ಅಂದು ಪಾಕ್ ತಂಡದ ಮಾಜಿ ನಾಯಕ ವಸೀಮ್ ಅಕ್ರಮ್ ಹೇಳಿದ್ದಾರೆ.
"ವಿರಾಟ್ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಈಗಲೂ ಕೂಡ ಅದ್ಭುತ ಫಿಟ್ನೆಸ್ ಹೊಂದಿದ್ದಾರೆ. ಭಾರತ ತಂಡದಲ್ಲಿ ಇರುವ ಶ್ರೇಷ್ಠ ಫೀಲ್ಡರ್ಗಳಲ್ಲಿ ಅವರೂ ಒಬ್ಬರು. ಆಟಗಾರ ಕ್ಲಾಸ್ ಎಂದಿಗೂ ಶಾಶ್ವತ ಎಂದಷ್ಟೇ ಇಲ್ಲಿ ಹೇಳಬಲ್ಲೆ. ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಾತ್ರ ಅವರು ತಮ್ಮ ಶ್ರೇಷ್ಠ ಲಯ ಕಂಡುಕೊಳ್ಳುವುದು ಬೇಡ. ಏಕೆಂದರೆ ಮುಂದಿನ ದಿನಗಳಲ್ಲಿ ಅವರು ಖಂಡಿತಾ ಲಯ ಕಂಡುಕೊಳ್ಳಲಿದ್ದಾರೆ," ಎಂದು ಅಕ್ರಮ್ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.
ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡದ ವಿವರ
Asia Cup 2022 Virat Kohli To Use Special Gold Mrf Bat Against Pakistan.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm