ಬ್ರೇಕಿಂಗ್ ನ್ಯೂಸ್
25-08-22 03:03 pm Source: Vijayakarnataka ಕ್ರೀಡೆ
ದುಬೈ: ಇಂಗ್ಲೆಂಡ್ ಪ್ರವಾಸದ ಬಳಿಕ ಒಂದೂವರೆ ತಿಂಗಳು ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 2022ರ ಏಷ್ಯಾ ಕಪ್ ಟೂರ್ನಿ ನಿಮಿತ್ತ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ. ಅಷ್ಟೇ ಅಲ್ಲದೆ ನೆಟ್ ಪ್ರಾಕ್ಟಿಸ್ನಲ್ಲಿ ದೊಡ್ಡ-ದೊಡ್ಡ ಹೊಡೆತಗಳನ್ನು ಹೊಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಆಗಸ್ಟ್ 27 ರಂದು ಯುಎಇ ಆತಿಥ್ಯದಲ್ಲಿ 2022ರ ಏಷ್ಯಾ ಕಪ್ ಟೂರ್ನಿ ಆರಂಭವಾಗಲಿದೆ. ಇದರ ಮುಂದಿನ ದಿನ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲಿದ್ದಾರೆ.
ಕಳೆದ ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಪ್ರವಾಸಗಳಿಗೆ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದರು. ಇದೀಗ ಹೊಸ ಹುಮ್ಮಸ್ಸಿನೊಂದಿಗೆ ಈ ಮಹತ್ವದ ಟೂರ್ನಿಗೆ ಮರಳಲು ಅವರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಭಾರತ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ನೆಟ್ಸ್ನಲ್ಲಿ ಕಾಣಿಸಿಕೊಂಡಿದ್ದರು.
ಬುಧವಾರ ನಡೆದಿದ್ದ ನೆಟ್ ಸೆಷನ್ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಭ್ಯಾಸದ ಮೂಲಕ ಬೆವರು ಹರಿಸಿದ್ದರು. ನೆಟ್ಸ್ನಲ್ಲಿ ಹೆಚ್ಚು ಹೊತ್ತು ಬ್ಯಾಟ್ ಮಾಡಿದ ಕೊಹ್ಲಿ, ಹಿರಿಯ ಸ್ಪಿನ್ನರ್ಗಳಾದ ಯುಜ್ವೇಂದ್ರ ಚಹಲ್ ಹಾಗೂ ಆರ್ ಅಶ್ವಿನ್ ಅವರನ್ನು ಎದುರಿಸಿದ್ದರು. ಅದರಂತೆ ಆರ್ ಅಶ್ವಿನ್ ಎಸೆತಕ್ಕೆ ಡೀಪ್ ಮಿಡ್ ವಿಕೆಟ್ ಕಡೆಗೆ ದೊಡ್ಡ ಹೊಡೆತ ಹೊಡೆದರೆ, ಚಹಲ್ ಎಸೆತಕ್ಕೆ ಲಾಂಗ್ ಆಫ್ ಕಡೆಗೆ ಚೆಂಡನ್ನು ಬಾರಿಸಿದರು. ಆ ಮೂಲಕ ಫಾರ್ಮ್ಗೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿಯೂ ವಿರಾಟ್ ಕೊಹ್ಲಿ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬಂದಿರಲಿಲ್ಲ. ಅವರು ಆಡಿದ್ದ 16 ಇನಿಂಗ್ಸ್ಗಳಿಂದ ಗಳಿಸಿದ್ದು ಒಂದೇ ಒಂದು ಅರ್ಧಶತಕ ಮಾತ್ರ. ಮತ್ತೊಂದೆಡೆ ಇಂಗ್ಲೆಂಡ್ ಪ್ರವಾಸದಲ್ಲಿ ಎಲ್ಲಾ ಸ್ವರೂಪದಲ್ಲಿ ಆಡಿದ 6 ಪಂದ್ಯಗಳಿಂದ ಅವರು ಗಳಿಸಿದ ವೈಯಕ್ತಿಕ ಗರಿಷ್ಠ ಮೊತ್ತ ಕೇವಲ 20 ರನ್.
ಇಂಗ್ಲೆಂಡ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ವೈಫಲ್ಯ ಅನುಭವಿಸುವ ಮೂಲಕ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ಈ ವೇಳೆ ಪಾಕಿಸ್ತಾನ ನಾಯಕ ಬಾಬರ್ ಆಝಮ್, ಕೊಹ್ಲಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಈ ಇಬ್ಬರೂ ಆಟಗಾರರು ಆಗಸ್ಟ್ 28 ರಂದು ನಡೆಯುವ ಪಂದ್ಯದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದಾರೆ.
ಹೋದ ವರ್ಷ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 10 ವಿಕೆಟ್ಗಳಿಂದ ಬಲಿಷ್ಠ ಭಾರತ ತಂಡವನ್ನು ಮಣಿಸಿತ್ತು. ನಂತರ, ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಮೂಲಕ ಭಾರತ ಟೂರ್ನಿಯಿಂದ ಹೊರ ಬಿದ್ದಿತ್ತು.
ಏಷ್ಯಾ ಕಪ್ ಟೂರ್ನಿಯ ಭಾರತ ತಂಡ
ಓಪನರ್ಸ್: ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್
ಮಧ್ಯಮ ಕ್ರಮಾಂಕದ ಬ್ಯಾಟರ್ಸ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ
ವಿಕೆಟ್ಕೀಪರ್ಸ್: ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್
ಆಲ್ರೌಂಡರ್ಸ್: ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ
ವೇಗದ ಬೌಲರ್ಸ್: ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್
ಸ್ಪಿನ್ನರ್ಸ್: ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್
ಕಾಯ್ದಿರಿಸಿದ ಆಟಗಾರರು: ಅಕ್ಷರ್ ಪಟೇಲ್, ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.
Asia Cup 2022 Star Batsman Virat Kohli Smashes Massive Hits Against Spinners Ashwin, Chahal In Training Session Watch.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm