ಬ್ರೇಕಿಂಗ್ ನ್ಯೂಸ್
27-08-22 04:10 pm Source: Vijayakarnataka ಕ್ರೀಡೆ
ದುಬೈ:ವಿರಾಟ್ ಕೊಹ್ಲಿ ಬಗ್ಗೆ ನಾವು ಜಾಸ್ತಿ ಯೋಚಿಸುತ್ತಿಲ್ಲ. ಏಕೆಂದರೆ ಅವರು ಈ ಹಿಂದೆ ಭಾರತ ತಂಡಕ್ಕಾಗಿ ಸಾಕಷ್ಟು ಅದ್ಭುತ ಇನಿಂಗ್ಸ್ಗಳನ್ನು ಆಡಿದ್ದಾರೆ. ಆದರೆ, ಅವರು ಫಾರ್ಮ್ಗೆ ಮರಳಬೇಕೆಂಬುದು ನಮ್ಮೆಲ್ಲರ ಆಶಯ ಎಂದು ಭಾರತ ತಂಡದ ಉಪ ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಬಹು ನಿರೀಕ್ಷಿತ 2022ರ ಏಷ್ಯಾ ಕಪ್ ಟೂರ್ನಿ ಶನಿವಾರದಿಂದ ಆರಂಭವಾಗಲಿದೆ. ಆದರೆ, ಭಾನುವಾರ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ಭಾರತ ತಂಡ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಲ್ ರಾಹುಲ್ ಹಲವು ಸಂಗತಿಗಳ ಬಗ್ಗೆ ಬೆಳಕು ಚೆಲ್ಲಿದರು.
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದ ಬಳಿಕ, ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಪ್ರವಾಸಗಳಿಗೆ ವಿಶ್ರಾಂತಿ ಪಡೆದಿದ್ದರು. ಇದೀಗ ಏಷ್ಯಾ ಕಪ್ ಟೂರ್ನಿಯಲ್ಲಿ, ವಿಶೇಷವಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳುತ್ತಿದ್ದಾರೆ.
"ವಿರಾಟ್ ಕೊಹ್ಲಿ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ಅವರು ಸಾಕಷ್ಟು ಬಾರಿ ಭಾರತ ತಂಡಕ್ಕೆ ಮ್ಯಾಚ್ ವಿನ್ನಿಂಗ್ ಪ್ರದರ್ಶನಗಳನ್ನು ತೋರಿದ್ದಾರೆ. ತಂಡವನ್ನು ಗೆಲ್ಲಿಸುವ ಅವರ ಮನಸ್ಥಿತಿ ಹಾಗೇ ಉಳಿಯುತ್ತದೆ. ಆದರೆ, ಅವರು ಫಾರ್ಮ್ಗೆ ಮರಳಬೇಕೆಂಬುದು ನಮ್ಮೆಲ್ಲರ ಆಶಯ," ಎಂದು ಕೆ.ಎಲ್ ರಾಹುಲ್ ಸಹ ಆಟಗಾರನಿಗೆ ಬೆಂಬಲ ವ್ಯಕ್ತಪಡಿಸಿದರು.
"ಹೊರಗಡೆಯ ಕಾಮೆಂಟ್ಗಳಿಗೆ ನಾವು ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ. ಇದು ನಮ್ಮ ಆಟಗಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೊರಗಡೆಯಿಂದ ಯಾರು ಏನೇ ಹೇಳಿದರೂ, ವಿಶೇಷವಾಗಿ ವಿರಾಟ್ ಕೊಹ್ಲಿ ಅವರಂತಹ ಆಟಗಾರನ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಈಗಷ್ಟೇ ಅವರು ವಿರಾಮ ಮುಗಿಸಿಕೊಂಡು ಬಂದಿದ್ದಾರೆ ಹಾಗೂ ತಮ್ಮ ಆಟದ ಮೇಲೆ ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ," ಎಂದರು.
"ಹೊರಗಡೆಯ ಕಾಮೆಂಟ್ಗಳಿಗೆ ನಾವು ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ. ಇದು ನಮ್ಮ ಆಟಗಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೊರಗಡೆಯಿಂದ ಯಾರು ಏನೇ ಹೇಳಿದರೂ, ವಿಶೇಷವಾಗಿ ವಿರಾಟ್ ಕೊಹ್ಲಿ ಅವರಂತಹ ಆಟಗಾರನ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಈಗಷ್ಟೇ ಅವರು ವಿರಾಮ ಮುಗಿಸಿಕೊಂಡು ಬಂದಿದ್ದಾರೆ ಹಾಗೂ ತಮ್ಮ ಆಟದ ಮೇಲೆ ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ," ಎಂದರು.
ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ / ಅವೇಶ್ ಖಾನ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಝ್ವಾನ್, ಫಖರ್ ಝಮಾನ್, ಇಫ್ತಿಕಾರ್ ಅಹ್ಮದ್, ಹೈದರ್ ಅಲಿ, ಖುಷ್ದಿಲ್ ಶಾ, ಶದಾಬ್ ಖಾನ್, ಮೊಹಮ್ಮದ್ ನವಾಝ್, ಮೊಹಮ್ಮದ್ ವಾಸಿಮ್, ಹ್ಯಾರಿಸ್ ರೌಫ್, ಶಹನವಾಝ್ ದಹಾನಿ.
ಪಂದ್ಯದ ವಿವರ
ಟೂರ್ನಿ: 2022ರ ಏಷ್ಯಾ ಕಪ್
ತಂಡಗಳು: ಭಾರತ vs ಪಾಕಿಸ್ತಾನ
ದಿನಾಂಕ: ಆಗಸ್ಟ್ 28, 2022
ಸಮಯ: ಸಂಜೆ 07: 30ಕ್ಕೆ
ಸ್ಥಳ: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ, ದುಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
Asia Cup 2022 Dont Really Give Much Importance To Comments Kl Rahul Blocks Outside Noise Ahead Of Asia Cup Match Vs Pakistan.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm