ಬ್ರೇಕಿಂಗ್ ನ್ಯೂಸ್
17-09-22 12:45 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಕಳೆದ ಏಷ್ಯಾ ಕಪ್ ಟೂರ್ನಿಯಲ್ಲಿ ಒಂದು ಶತಕ ಹಾಗೂ ಎರಡು ಅರ್ಧಶತಕಗಳನ್ನು ಸಿಡಿಸಿದ್ದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಎರಡು ನೂತನ ದಾಖಲೆ ಬರೆಯುವ ಸಾಧ್ಯತೆ ಇದೆ. ಅಂದಹಾಗೆ ಈ ಟಿ20 ಸರಣಿಯು ಸೆಪ್ಟಂಬರ್ 20 ರಿಂದ ಆರಂಭವಾಗಲಿದೆ.
ಟಿ20 ಕ್ರಿಕೆಟ್ನಲ್ಲಿ 11,000 ರನ್ಗಳನ್ನು ಪೂರ್ಣಗೊಳಿಸಲು ಟೀಮ್ ಇಂಡಿಯಾ ಮಾಜಿ ನಾಯಕನಿಗೆ ಇನ್ನೂ ಕೇವಲ 98 ರನ್ ಅಗತ್ಯವಿದೆ. ಪ್ರಸ್ತುತ ಬಲಗೈ ಬ್ಯಾಟ್ಸ್ಮನ್ 349 ಟಿ20 ಪಂದ್ಯಗಳಿಂದ 40.37ರ ಸರಾಸರಿ ಹಾಗೂ 132.95ರ ಸ್ಟ್ರೈಕ್ ರೇಟ್ನಲ್ಲಿ 10,902 ರನ್ ಗಳಿಸಿದ್ದಾರೆ. ಇದರಲ್ಲಿ ಅವರು 6 ಶತಕಗಳು ಹಾಗೂ 80 ಅರ್ಧಶತಕಗಳನ್ನು ಸಿಡಿಸಿದ್ದಾರೆ.
ಇತ್ತೀಚೆಗೆ ದುಬೈನಲ್ಲಿ ಅಫಘಾನಿಸ್ತಾನ ವಿರುದ್ಧ ಏಷ್ಯಾ ಕಪ್ ಟೂರ್ನಿಯ ಸೂಪರ್-4ರ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು. ಆ ಮೂಲಕ ಸುರೇಶ್ ರೈನಾ, ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ ಹಾಗೂ ಹರ್ಮನ್ಪ್ರೀತ್ ಕೌರ್ ಬಳಿಕ ಟಿ20ಐ ಕ್ರಿಕೆಟ್ ಶತಕ ಸಿಡಿಸಿದ ಏಳನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.
11,000 ರನ್ಗಳ ಜೊತೆಗೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚ ರನ್ಗಳಿಸಿದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಕೇವಲ 62 ರನ್ಗಳ ಅಗತ್ಯವಿದೆ. ಆ ಮೂಲಕ 24,064 ರನ್ಗಳನ್ನು ಗಳಿಸಿರುವ ಬ್ಯಾಟಿಂಗ್ ದಿಗ್ಗಜ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕುವ ಸಾಧ್ಯತೆ ಇದೆ.
ವಿರಾಟ್ ಕೊಹ್ಲಿ ಸದ್ಯ ಭಾರತ ತಂಡದ ಪರ 468 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 53.81ರ ಸರಾಸರಿಯಲ್ಲಿ 71 ಶತಕಗಳು ಹಾಗೂ 124 ಅರ್ಧಶತಕಗಳೊಂದಿಗೆ 24002 ರನ್ಗಳನ್ನು ಗಳಿಸಿದ್ದಾರೆ. ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 24,000 ರನ್ ಗಳಿಸಿದ ಭಾರತದ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು.
2019ರ ನವೆಂಬರ್ನಲ್ಲಿ ಬಾಂಗ್ಲಾದೇಶ ವಿರುದ್ಧ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದ ಕೊನೆಯ ಶತಕ ಸಿಡಿಸಿದ್ದರು. ತದನಂತರ ಅವರು ತಮ್ಮ 71ನೇ ಶತಕ ಸಿಡಿಸಲು ಬರೋಬ್ಬರಿ 1000ಕ್ಕೂ ಹೆಚ್ಚಿನ ದಿನಗಳನ್ನು ತೆಗೆದುಕೊಂಡಿದ್ದರು. ಅಫಘಾನಿಸ್ತಾನ ವಿರುದ್ಧ ಏಷ್ಯಾ ಕಪ್ ಟೂರ್ನಿಯ ಪಂದ್ಯದಲ್ಲಿ ಅವರು ಶತಕ ಸಿಡಿಸಿ ಫಾರ್ಮ್ಗೆ ಮರಳಿದ ಮುನ್ಸೂಚನೆ ನೀಡಿದ್ದರು.
ಅಂತಿಮವಾಗಿ ವಿರಾಟ್ ಕೊಹ್ಲಿ 276 ರನ್ ಗಳಿಸುವ ಮೂಲಕ ಏಷ್ಯಾ ಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು. ಪಾಕಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್ಮನ್ ಮೊಹಮ್ಮದ್ ರಿಝ್ವಾನ್ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಆಗಿದ್ದಾರೆ.
ಅಂದಹಾಗೆ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟಂಬರ್ 20 ರಿಂದ ಆರಂಭವಾಗಿ, ಸೆ. 25ಕ್ಕೆ ಅಂತಿಮವಾಗಲಿದೆ. ಮೊಹಾಲಿ, ನಾಗ್ಪುರ್ ಹಾಗೂ ಹೈದರಾಬಾದ್ನಲ್ಲಿ ಕ್ರಮವಾಗಿ ಮೂರು ಪಂದ್ಯಗಳು ನಡೆಯಲಿವೆ.
India Vs Australia Virat Kohli Has Chance Of Smashing At Least Two Records In The Upcoming T20i Series Vs Australia.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm