ಬ್ರೇಕಿಂಗ್ ನ್ಯೂಸ್
30-09-22 01:54 pm Source: Vijayakarnataka ಕ್ರೀಡೆ
ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಗೆ ಯುವ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಭಾರತ ತಂಡಕ್ಕೆ ಹಿಂದಿರುಗಿದ್ದಾರೆ. ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬದಲಿಗೆ ಸಿರಾಜ್ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ತಂಡಕ್ಕೆ ಸೇರ್ಪಡೆ ಮಾಡಿದೆ. ಬೆನ್ನು ನೋವಿನ ಗಾಯದಿಂದಾಗಿ ಬುಮ್ರಾ ಟೀಮ್ ಇಂಡಿಯಾದಿಂದ ಹೊರಗುಳಿಯುವಂತ್ತಾಗಿದೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಆಡುವುದು ಸಂಪೂರ್ಣ ಅನುಮಾನವಾಗಿದೆ. ಹೀಗಿರುವಾಗ ಸಿರಾಜ್ರನ್ನು ತಂಡಕ್ಕೆ ಸೇರಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ತನ್ನ ಬ್ಯಾಕ್ಅಪ್ ಪ್ಲಾನ್ ಸಿದ್ಧಪಡಿಸಿದೆ.
ಸದ್ಯ ಸಿರಾಜ್ ಇಂಗ್ಲೆಂಡ್ನಲ್ಲಿ ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ. ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಈ ಮೊದಲು ಪ್ರಕಟ ಮಾಡಿದ್ದ ತಂಡದಲ್ಲಾಗಲಿ ಅಥವಾ ಕಾಯ್ದಿರಿಸಿದ ಆಟಗಾರ ಪಟ್ಟಿಯಲ್ಲಾಗಲಿ ಸಿರಾಜ್ಗೆ ಸ್ಥಾನ ಸಿಕ್ಕಿರಲಿಲ್ಲ. ಆದ್ದರಿಂದ ಇದ್ದಕ್ಕಿದ್ದಂತೆ ಅವರನ್ನು ಟಿ20 ಸರಣಿಗೆ ಆಯ್ಕೆ ಮಾಡಿರುವುದು ಸಾಕಷ್ಟು ಅಚ್ಚರಿ ತಂದೊಡ್ಡಿದೆ. ಇನ್ನು ಕಾಯ್ದಿರಿಸಿದ ಆಟಗಾರರ ಪಟ್ಟಿಯಲ್ಲಿ ಇದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿದ ನಂತರವಷ್ಟೇ ಆಯ್ಕೆಗೆ ಲಭ್ಯರಾಗಲಿದ್ದಾರೆ. ಈ ಅನಿವಾರ್ಯ ಪರಿಸ್ಥಿತಿಯಲ್ಲಿ, ಟೀಮ್ ಇಂಡಿಯಾ ಆಯ್ಕೆ ಸಮಿತಿ ಸಿರಾಜ್ ಅವರಿಗೆ ಬುಲಾವ್ ಕೊಟ್ಟಿದೆ ಎಂದು ಅರ್ಥಮಾಡಿಕೊಳ್ಳಬೇಕಿದೆ.
ಆಸೀಸ್ ಪಿಚ್ಗಳಲ್ಲಿ ಸಿರಾಜ್ ಮಿಂಚಿದ್ದಾರೆ!
ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಈ ಬಾರಿ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ನಡೆಯಲಿದೆ. ಈ ಟೂರ್ನಿಗೆ ಪ್ರಕಟ ಮಾಡಲಾಗಿರುವ ಭಾರತ ತಂಡದಲ್ಲಿ ಅಥವಾ ಸಂಭಾವ್ಯರ ಪಟ್ಟಿಯಲ್ಲೂ ಮೊಹಮ್ಮದ್ ಸಿರಾಜ್ಗೆ ಸ್ಥಾನ ಸಿಕ್ಕಿಲ್ಲ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇದ್ದಕ್ಕಿದ್ದಂತೆ ಆಯ್ಕೆ ಆಗಿರುವ ಕಾರಣ, ಅವರಲ್ಲಿ ಟಿ20 ವಿಶ್ವಕಪ್ಗೂ ಆಯ್ಕೆ ಆಗುವ ಭರವಸೆ ಹೆಚ್ಚಿಸಿದೆ. ಸಿರಾಜ್, ಭಾರತ ತಂಡದ ಪರ ಮೂರೂ ಮಾದರಿಯ ಕ್ರಿಕೆಟ್ ಆಡುತ್ತಿದ್ದಾರೆ. ಟಿ20ಯಲ್ಲಿ ಕಡಿಮೆ ಅವಕಾಶ ಪಡೆದಿದ್ದರೂ ಟೆಸ್ಟ್ ಮತ್ತು ಒಡಿಐ ಪಂದ್ಯಗಳಲ್ಲಿ ತಂಡದ ಪ್ರಮುಖ ಭಾಗವಾಗಿದ್ದಾರೆ.
ಇದಲ್ಲದೆ, ಅವರು ಆಸ್ಟ್ರೇಲಿಯಾದ ವೇಗದ ಪಿಚ್ಗಳಲ್ಲಿ ಆಡಿದ ಉತ್ತಮ ಅನುಭವ ಹೊಂದಿದ್ದಾರೆ. ಆದರೂ ಬುಮ್ರಾ ಅವರಲ್ಲಿನ ನಿಖರ ಯಾರ್ಕರ್ಗಳಂತಹ ಅಸ್ತ್ರ ಸಿರಾಜ್ ಅವರಲ್ಲಿ ಇಲ್ಲ. ಇನ್ನು ಆಸ್ಟ್ರೇಲಿಯಾ ವಿರುದ್ಧ ಕಾಂಗರೂ ನಾಡಲ್ಲಿ ಸಿರಾಜ್ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 2.85 ರ ಎಕಾನಮಿಯಲ್ಲಿ 13 ವಿಕೆಟ್ಗಳನ್ನು ಪಡೆದಿದ್ದಾರೆ. ಸಿರಾಜ್ ಅವರಲ್ಲಿನ ಆಕ್ರಮಣಕಾರಿ ಬೌಲಿಂಗ್ ಆಸೀಸ್ನ ಬೌನ್ಸಿ ಪಿಚ್ಗಳಲ್ಲಿ ಭಾರತ ತಂಡಕ್ಕೆ ಯಶಸ್ಸು ತಂದುಕೊಡಬಲ್ಲದು. ಇದೇ ಕಾರಣಕ್ಕೆ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಮೊಹಮ್ಮದ್ ಸಿರಾಜ್, ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪರವೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತದ ಟಿ20 ಕ್ರಿಕೆಟ್ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹರ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್.
Ind Vs Sa Mohammed Siraj Replaces Injured Jasprit Bumrah In India T20i Squad For South Africa Series.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm