ಬ್ರೇಕಿಂಗ್ ನ್ಯೂಸ್
18-10-22 01:18 pm Source: Vijayakarnataka ಕ್ರೀಡೆ
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ಸೋಮವಾರ ಅಭ್ಯಾಸ ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನ ತಂಡ ಜೊತೆ ಸೇರಿಕೊಂಡ ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಬಾಬರ್ ಅಝಮ್, ಮೊಹಮ್ಮದ್ ರಿಝ್ವಾನ್ ಅಭ್ಯಾಸ ನಡೆಸುತ್ತಿದ್ದ ನೆಟ್ಸ್ ಪಕ್ಕ ಮತ್ತೊಂದು ನೆಟ್ಸ್ನಲ್ಲಿ ಕಿಂಗ್ ಕೊಹ್ಲಿ ನೆಟ್ ಪ್ರಾಕ್ಟಿಸ್ ಮಾಡಿದರು.
ಇಂಗ್ಲೆಂಡ್ ಪ್ರವಾಸದ ಬಳಿಕ ಒಂದು ತಿಂಗಳಿಗೂ ಹೆಚ್ಚಿನ ಅವಧಿ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ 2022ರ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಮರಳಿದ್ದರು ಹಾಗೂ ಅಫಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ವೃತ್ತಿ ಜೀವನದ 71ನೇ ಶತಕ ಸಿಡಿಸಿದ್ದರು. ಬಳಿಕ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿಯೂ ಆಡಿದ್ದರು.
ಅಂದಹಾಗೆ ಅಕ್ಟೋಬರ್ 16 ರಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭದಾಗಿನಿಂದಲೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆಯದೆ ಸತತ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಲೇ ಇದ್ದಾರೆ. ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳಿಗೆ ಅಲಭ್ಯರಾಗಿದ್ದ ಕೊಹ್ಲಿ, ಸೋಮವಾರ ಆಸ್ಟ್ರೇಲಿಯಾ ವಿರುದ್ದದ ಅಭ್ಯಾಸ ಪಂದ್ಯದಲ್ಲಿ ಆಡಿದ್ದರು. ಆದರೆ, 13 ಎಸೆತಗಳಲ್ಲಿ ಕೇವಲ 19 ರನ್ಗೆ ವಿಕೆಟ್ ಒಪ್ಪಿಸಿದರು. ಆ ಮೂಲಕ ನಿರಾಶೆ ಮೂಡಿಸಿದರು.
ಅಂದಹಾಗೆ ಅಭ್ಯಾಸ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಅವರ ಶಾರ್ಟ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಫೈನ್ ಲೆಗ್ನಲ್ಲಿ ಸುಲಭ ಕ್ಯಾಚ್ಗೆ ಬಲಿಯಾಗಿದ್ದರು. ಇದರ ಹೊರತಾಗಿಯೂ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕಗಳ ಬಲದಿಂದ ಭಾರತ ತಂಡ 186 ರನ್ ಗಳಿಸಿತ್ತು. ಅಂತಿಮವಾಗಿ ಈ ಪಂದ್ಯದಲ್ಲಿ ಭಾರತ ಕೇವಲ 6 ರನ್ ರೋಚಕ ಗೆಲುವು ಪಡೆದಿತ್ತು.
Babar Azam, Mohammad Rizwan and Virat Kohli did a net session together! All three batting side by side#T20WorldCup pic.twitter.com/itIMkKsAgn
— 𝙰𝚓𝚠𝚊 𝙵𝚊𝚢𝚢𝚊𝚣 (@Babar4life) October 17, 2022
ಅಭ್ಯಾಸ ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ಜೊತೆ ಸೇರಿಕೊಂಡು ಗಬ್ಬಾದಲ್ಲಿ ಬ್ಯಾಟಿಂಗ್ ಪ್ರಾಕ್ಟಿಸ್ ನಡೆಸಿದರು. ಮಿಚೆಲ್ ಸ್ಟಾರ್ಕ್ಗೆ ಔಟ್ ಆದ ಎಸೆತವನ್ನು ನೆಟ್ಸ್ನಲ್ಲಿ ಹಾಕಿಸಿಕೊಂಡು ವಿರಾಟ್ ಕೊಹ್ಲಿ 40 ನಿಮಿಷಗಳ ಕಾಲ ಅಭ್ಯಾಸ ನಡೆಸಿದರು ಹಾಗೂ ಅಭ್ಯಾಸ ಪಂದ್ಯದಲ್ಲಿ ತಾವು ಮಾಡಿಡ ತಪ್ಪನ್ನು ತಿದ್ದಿಕೊಳ್ಳುವ ಪ್ರಯತ್ನ ನಡೆಸಿದರು.
ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ಪಕ್ಕದ ಎರಡು ನೆಟ್ಸ್ಗಳಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಮ್ ಹಾಗೂ ಆರಂಬಿಕ ಬ್ಯಾಟ್ಸ್ಮನ್ ಮೊಹಮ್ಮದ್ ರಿಝ್ವಾನ್ ಕೂಡ ಅಭ್ಯಾಸ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಂದಹಾಗೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಬ್ಯಾಟಿಂಗ್ ಅಭ್ಯಾಸ ನಡೆಸಿದ ಬಳಿಕ ವಿರಾಟ್ ಕೊಹ್ಲಿ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ಜೊತೆ ಸಂಭಾಷಣೆ ನಡೆಸಿದರು. ಆ ಮೂಲಕ ಅಮೂಲ್ಯವಾದ ದಿನವನ್ನು ವಿರಾಟ್ ಕೊಹ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದರು. ಬುಧವಾರ ಇದೇ ಮೈದಾನದಲ್ಲಿ ಭಾರತ ತಂಡ ತನ್ನ ಎರಡನೇ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
T20 World Cup 2022 Virat Kohli Batting Practices With Pakistan Team Moments After T20wc WarmbUp Tie Vs Aus.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm