ಬ್ರೇಕಿಂಗ್ ನ್ಯೂಸ್
20-10-22 01:42 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಸೂರ್ಯಕುಮಾರ್ ಯಾದವ್ ಸೇರ್ಪಡೆಯಾಗಿರುವುದರಿಂದ ಭಾರತ ಅತ್ಯಂತ ಬಲಿಷ್ಠವಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ 2021ರ ಆರಂಭದಲ್ಲಿ ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಸೂರ್ಯಕುಮಾರ್ ಯಾದವ್ ತಮ್ಮ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ಗಳ ಮೂಲಕ ರಾಷ್ಟ್ರೀಯ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಕೆ.ಎಲ್ ರಾಹುಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಗ್ರ ಕ್ರಮಾಂಕದಲ್ಲಿ ಬೇಗ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ತಂಡವನ್ನು ಮೇಲೆತ್ತುವ ಸಾಮರ್ಥ್ಯ ಸೂರ್ಯಕುಮಾರ್ ಯಾದವ್ಗೆ ಇದೆ.
ಇಲ್ಲಿಯವರೆಗೂ ಭಾರತ ತಂಡದ ಪರ 34 ಟಿ20 ಪಂದ್ಯಗಳಾಡಿರುವ ಸೂರ್ಯಕುಮಾರ್ ಯಾದವ್, 9 ಅರ್ಧಶತಕಗಳು ಹಾಗೂ ಒಂದು ಸೆಂಚುರಿ ಸೇರಿದಂತೆ 1000ಕ್ಕೂ ಹೆಚ್ಚಿನ ರನ್ಗಳನ್ನು ಸಿಡಿಸಿದ್ದಾರೆ. ಭಾರತ ತಂಡಕ್ಕೆ ಎಬಿ ಡಿವಿಲಿಯರ್ಸ್ ಸಿಕ್ಕಿದ್ದಾರೆಂದು ಸೂರ್ಯಕುಮಾರ್ ಯಾದವ್ ಅವರ 360 ಡಿಗ್ರಿ ಬ್ಯಾಟಿಂಗ್ ನೋಡಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಭಾರತ ತಂಡದ ಪರ ಕಳೆದ 10 ಇನಿಂಗ್ಸ್ಗಳಲ್ಲಿ ಹ್ಯಾಟ್ರಿಕ್ ಅರ್ಧಶತಕಗಳು ಸೇರಿದಂತೆ ಐದು ಅರ್ಧಶತಕಗಳನ್ನು ಅವರು ಸಿಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಹೈದರಾಬಾದ್ನಲ್ಲಿ ನಿರ್ಣಾಯಕ 69 ರನ್ ಸಿಡಿಸಿದ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳಲ್ಲಿ ಅಜೇಯ 50 ರನ್ ಹಾಗೂ 22 ಎಸೆತಗಳಲ್ಲಿ 61 ರನ್ ಸಿಡಿಸಿದ್ದರು.
"ಸೂರ್ಯಕುಮಾರ್ ಯಾದವ್ ಸೇರ್ಪಡೆಯಾಗಿರುವುದರಿಂದ ಭಾರತ ತಂಡದ ಬ್ಯಾಟಿಂಗ್ ಬಲ ಇನ್ನಷ್ಟು ಬಲಿಷ್ಠವಾಗಿದೆ. ಯಾವುದೇ ಬೌಲರ್ ವಿರುದ್ಧ ದೊಡ್ಡ ರೇಂಜ್ ಶಾಟ್ಗಳನ್ನು ಹೊಡೆಯುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ. ಇವರ ಬ್ಯಾಟಿಂಗ್ನಲ್ಲಿ ಎಲ್ಲಾ ರೀತಿಯ ಶಾಟ್ಸ್ ಇವೆ. ಈ ಕಾರಣದಿಂದಾಗಿ ಅಗ್ರ ಕ್ರಮಾಂಕದ ಪಾತ್ರ ಬದಲಾಗಿದೆ. ಇದರ ಜೊತೆಗೆ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಅವರು ಯಾವುದೇ ಒತ್ತಡವಿಲ್ಲದೆ ಫಿನಿಷರ್ ಪಾತ್ರವನ್ನು ನಿರ್ವಹಿಸಲಿದ್ದಾರೆ," ಎಂದು ಮಿಸ್ಬಾ ಉಲ್ ಹಕ್ ಹೇಳಿದರು.
"ಒಟ್ಟಾರೆಯಾಗಿ, ಕಳೆದ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡದ ಪ್ರವೃತ್ತಿ ಸಂಪೂರ್ಣ ಬದಲಾಗಿದೆ. ಇದಕ್ಕೂ ಮುನ್ನ ಪಾಕಿಸ್ತಾನ ತಂಡದ ತಂತ್ರವನ್ನು ಭಾರತ ಹೊಂದಿತ್ತು. ಆದರೆ, ಈಗ ಇಂಗ್ಲೆಂಡ್ ತಂಡದ ರೀತಿಯ ತಂತ್ರವನ್ನು ಭಾರತ ಅಳವಡಿಸಿಕೊಂಡಿದೆ. ಪವರ್ಪ್ಲೇನಲ್ಲಿ ಅವರು ಸಾಧ್ಯವಾದಷ್ಟು ಗರಿಷ್ಠ ರನ್ಗಳನ್ನು ಗಳಿಸುತ್ತಾರೆ. ಅದಕ್ಕೆ ತಕ್ಕಂತೆ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಹೊಂದಿಕೊಂಡಿದ್ದಾರೆ. ಇದರಿಂದಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿಯಾಗಿ ಆಡುವುದಕ್ಕೂ ಮುನ್ನ ಕ್ರೀಸ್ಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಲು ಸ್ವಲ್ಪ ಅವಕಾಶ ಸಿಕ್ಕಂತಾಗಿದೆ," ಎಂದು ಮಿಸ್ಬಾ ಉಲ್ ಹಕ್ ತಿಳಿಸಿದರು.
ಆಸ್ಟ್ರೇಲಿಯಾ ಆತಿಥ್ಯದಲ್ಲಿ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಈಗಾಗಲೇ ಆರಂಭವಾಗಿದ್ದು, ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ.
T20 World Cup 2022 After Suryakumar Yadavs Inclusion, Indias Batting Strength Has Increased, Says Misbah Ul Haq.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm