ಬ್ರೇಕಿಂಗ್ ನ್ಯೂಸ್
18-11-22 01:30 pm Source: Vijayakarnataka ಕ್ರೀಡೆ
ಟೀಮ್ ಇಂಡಿಯಾ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹಾಲಿ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಗೆ ಆಗಾಗ್ಗೆ ನೀಡಲಾಗುತ್ತಿರುವ ಅನಗತ್ಯದ ವಿರಾಮಗಳು ಏಕೆ? ಎಂದು ಶಾಸ್ತ್ರಿ ಕೇಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಮತ್ತು ಏಕದಿನ ಕ್ರಿಕೆಟ್ ಸರಣಿಯಿಂದ ರಾಹುಲ್ ದ್ರಾವಿಡ್ ಮತ್ತು ಅವರ ಕೋಚಿಂಗ್ ಸಿಬ್ಬಂದಿ ರಜೆ ತೆಗೆದುಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿ ತಂಡದಲ್ಲಿ ಇಲ್ಲದಿರುವುದು ಇದೇ ಮೊದಲೇನು ಅಲ್ಲ. ಇದಕ್ಕೂ ಮೊದಲು, ಜಿಂಬಾಬ್ವೆ ಪ್ರವಾಸ ಮತ್ತು ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿ ವೇಳೆಯೂ ಅವರು ವಿಶ್ರಾಂತಿ ಪಡೆದಿದ್ದರು.
ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯಕ್ಕೂ ಮುನ್ನ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ, ಶಾಸ್ತ್ರಿ ಈ ರೀತಿ ಹೇಳಿದ್ದಾರೆ. "ನಾನು ಹಲವಾರು ಅನಗತ್ಯದ ವಿರಾಮಗಳ ಮೇಲೆ ವಿಶ್ವಾಸ ಇಟ್ಟಿಲ್ಲ. ಏಕೆಂದರೆ ನಾನು ನನ್ನ ತಂಡ, ನನ್ನ ಆಟಗಾರರನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ. ನಿಜ ಹೇಳಬೇಕೆಂದರೆ, ನಿಮಗೆ ಅಂತಹ ವಿರಾಮ ಬೇಕಾಗಿರುವುದಾದರೂ ಏಕೆ? ನಿಮಗೆ ಎರಡು-ಮೂರು ತಿಂಗಳ ವಿಶ್ರಾಂತಿ ಐಪಿಎಲ್ ವೇಳೆ ಸಿಕ್ಕೇ ಸಿಗುತ್ತದೆ. ಆಗ ಕೋಚ್ ಕೆಲಸಿದಂದ ವಿರಾಮ ಪಡೆದು ವಿಶ್ರಾಂತಿ ತೆಗೆದುಕೊಳ್ಳಬಹುದು," ಎಂದಿದ್ದಾರೆ.
ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಟಿ20 ಕ್ರಿಕೆಟ್ ಮತ್ತು ಅಷ್ಟೇ ಪಂದ್ಯಗಳ ಒಡಿಐ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ನಂತರ ತಂಡವು ಡಿಸೆಂಬರ್ 4ರಿಂದ ಬಾಂಗ್ಲಾದೇಶ ಪ್ರವಾಸ ಮಾಡಲಿದೆ. ಬಾಂಗ್ಲಾದೇಶ ಪ್ರವಾಸದಲ್ಲಿ ದ್ರಾವಿಡ್ ಮತ್ತು ಕೋಚಿಂಗ್ ಬಳಗ ತಂಡವನ್ನು ಮತ್ತೆ ಸೇರಿಕೊಳ್ಳಲಿವೆ. ಪ್ರಸ್ತುತ, ಅವರ ಜವಾಬ್ದಾರಿಯನ್ನು ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ನಿರ್ವಹಿಸುತ್ತಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋರ್ ಬದಲಿಗೆ, ಹೃಷಿಕೇಶ್ ಕಾನಿಟ್ಕರ್ ಭಾರತೀಯ ಆಟಗಾರರಿಗೆ ಬ್ಯಾಟಿಂಗ್ ಮಾರ್ಗದರ್ಶನ ನೀಡಲಿದ್ದು, ಸಾಯಿರಾಜ್ ಬಹುದುಲೆ ಬೌಲಿಂಗ್ ಕೋಚ್ ಆಗಿ ಪಾರಸ್ ಮಾಂಬ್ರೆ ಅವರ ಕೆಲಸವನ್ನು ನಿಭಾಯಿಸಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತದ ಟಿ20 ಕ್ರಿಕೆಟ್ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತದ ಏಕದಿನ ಕ್ರಿಕೆಟ್ ತಂಡ
ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ/ ವಿಕೆಟ್ಕೀಪರ್), ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಶಹಬಾಝ್ ಅಹ್ಮದ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹರ್, ಕುಲ್ದೀಪ್ ಸೇನ್, ಉಮ್ರಾನ್ ಮಲಿಕ್.
Ind Vs Nz Ravi Shastri Lashes Out At Team India Head Coach Rahul Dravid Ahead Of New Zealand Tour.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm