ಬ್ರೇಕಿಂಗ್ ನ್ಯೂಸ್
22-11-22 01:25 pm Source: Vijayakarnataka ಕ್ರೀಡೆ
ಇಲ್ಲಿನ ಮೆಕ್ಲೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮಂಗಳವಾರ ಆರಂಭವಾದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಹರ್ಷಲ್ ಪಟೇಲ್ ಬಂದಿದ್ದಾರೆ.
ವೆಲ್ಲಿಂಗ್ಟನ್ನಲ್ಲಿ ನಡೆಯಬೇಕಿದ್ದ ಮೊದಲನೇ ಟಿ20 ಪಂದ್ಯ ಕೂಡ ಮಳೆಯಿಂದ ರದ್ದಾಗಿತ್ತು. ಆದರೆ, ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ (111* ರನ್) ಶತಕ ಹಾಗೂ ದೀಪಕ್ ಹೂಡ(10ಕ್ಕೆ 4) ಅವರ ಸ್ಪಿನ್ ಮೋಡಿಯ ಬಲದಿಂದ ಭಾರತ 65 ರನ್ಗಳ ಭರ್ಜರಿ ಗೆಲುವು ಪಡೆದಿತ್ತು. ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ತ 1-0 ಮುನ್ನಡೆ ಪಡೆದಿದೆ.
ಇದೀಗ ಇಲ್ಲಿನ ಮೆಕ್ಲೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಮೂರನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಪಂದ್ಯ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ. ಒಂದು ವೇಳೆ ಈ ಪಂದ್ಯ ಮಳೆಗೆ ರದ್ದಾದರೆ, ಭಾರತ ತಂಡ 1-0 ಅಂತರದಲ್ಲಿ ಟಿ20 ಸರಣಿಯನ್ನು ಮುಡಿಗೇರಿಸಿಕೊಳ್ಳಲಿದೆ.
ಮೆಕ್ಲೀನ್ ಪಾರ್ಕ್ ಪಿಚ್ ರಿಪೋರ್ಟ್: ನ್ಯೂಜಿಲೆಂಡ್ ಬ್ಯಾಟಿಂಗ್ ಸ್ನೇಹಿ ಮೈದಾನಗಳ ಪೈಕಿ ಮೆಕ್ಲೀನ್ ಪಾರ್ಕ್ ಸ್ಟೇಡಿಯಂನ ಕೂಡ ಒಂದಾಗಿದೆ. ವಿಶ್ವ ದರ್ಜೆಯ ಡ್ರೈನೇಜ್ ಸಿಸ್ಟಮ್ ಈ ಅಂಗಣದಲ್ಲಿದೆ. ಆದರೆ, ಈ ಮೈದಾನವನ್ನು ರಗ್ಬೀ ಕ್ರೀಡೆಗೂ ಬಳಸಲಾಗುತ್ತದೆ ಎಂಬುದು ಅಚ್ಚರಿ ವಿಷಯ. ಅಂದಹಾಗೆ ಈ ಮೈದಾನದಲ್ಲಿ ಇಲ್ಲಿಯವರೆಗೂ 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿಸಲಾಗಿದೆ. ಬ್ಯಾಟಿಂಗ್ ಸ್ನೇಹಿ ಮೈದಾನದಲ್ಲಿ 160 ರಿಂದ 170 ರನ್ ಸರಾಸರಿ ಮೊತ್ತವಾಗಿದೆ.
ಭಾರತ: ಇಶಾನ್ ಕಿಶನ್, ರಿಷಭ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್
ನ್ಯೂಜಿಲೆಂಡ್: ಡೆವೋನ್ ಕಾನ್ವೇ (ವಿ.ಕೀ), ಫಿನ್ ಆಲೆನ್, ಗ್ಲೆನ್ ಫಿಲಿಪ್ಸ್, ಮರ್ಕ್ ಚಾಂಪ್ಮನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥೀ, ಇಶ್ ಸೋಧಿ, ಲಾಕಿ ಫರ್ಗ್ಯೂಸನ್, ಆಡಂ ಮಿಲ್ನೆ
Ind Vs Nz Live Score Toss Playing11 Highlights India Vs New Zealand 3rd T20i 2022 From Napier.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm