ಬ್ರೇಕಿಂಗ್ ನ್ಯೂಸ್
24-11-22 01:41 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ 3 ಪಂದ್ಯಗಳ ಏಕದಿನ ಸರಣಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ. ಗಾಯಕ್ಕೆ ತುತ್ತಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರವೀಂದ್ರ ಜಡೇಜಾ ಅವರು ಡಿಸೆಂಬರ್ ವೇಳೆಗೆ ಸಂಪೂರ್ಣ ಫಿಟ್ನೆಸ್ಗೆ ಮರಳಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಅವರು ಬಾಂಗ್ಲಾದೇಶ ಒಡಿಐ ಸರಣಿಯಿಂದ ಹೊರಬಿದ್ದಿದ್ದಾರೆ.
ಮತ್ತೊಂದೆಡೆ ಯುವ ವೇಗಿ ಯಶ್ ದಯಾಳ್ ಅವರು ಬೆನ್ನು ನೋವಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರು ಕೂಡ ಬಾಂಗ್ಲಾ ವಿರುದ್ದ ಏಕದಿನ ಸರಣಿಗೆ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರವೀಂದ್ರ ಜಡೇಜಾ ಸ್ಥಾನಕ್ಕೆ ಶಹಬಾಜ್ ಅಹ್ಮದ್ ಹಾಗೂ ಯಶ್ ದಯಾಳ್ ಅವರ ಸ್ಥಾನಕ್ಕೆ ಕುಲ್ದೀಪ್ ಸೇನ್ಗೆ ಬಿಸಿಸಿಐ ಅವಕಾಶ ಕಲ್ಪಿಸಿದೆ. ಹಿರಿಯ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಈ ಸರಣಿಗೆ ಅಲಭ್ಯರಾಗಿದ್ದಾರೆ.
ಶುಕ್ರವಾರದಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿಯೂ ಶಹಬಾಜ್ ಅಹ್ಮದ್ ಹಾಗೂ ಕುಲ್ದೀಪ್ ಸೇನ್ ಆಡಲಿದ್ದಾರೆ. ಈ ಸರಣಿ ಮುಗಿಸಿಕೊಂಡ ಬಳಿಕ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಯಲ್ಲಿ ಈ ಇಬ್ಬರೂ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
"ಶಹಬಾಜ್ ಅಹ್ಮದ್ ಹಾಗೂ ಕುಲ್ದೀಪ್ ಸೇನ್ ಇಬ್ಬರೂ ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ರವೀಂದ್ರ ಜಡೇಜಾ ಹಾಗೂ ಯಶ್ ದಯಾಳ್ ಇಬ್ಬರಿಗೂ ಯಾವುದೇ ಬೇರೆ ಬದಲಿ ಆಟಗಾರರನ್ನು ಆಯ್ಕೆ ಮಾಡಿಲ್ಲ. ನ್ಯೂಜಿಲೆಂಡ್ ವಿರುದ್ದ ಏಕದಿನ ಸರಣಿ ಆಡುವ ತಂಡ ನೇರವಾಗಿ ಬಾಂಗ್ಲಾ ಒಡಿಐ ಸರಣಿಯಲ್ಲಿ ಕಣಕ್ಕೆ ಇಳಿಯಲಿದೆ," ಎಂದು ಬಿಸಿಸಿಐ ಹೇಳಿದೆ.
ಇದರ ನಡುವೆ ಬಾಂಗ್ಲಾದೇಶ 'ಎ' ತಂಡದ ವಿರುದ್ಧ 4 ದಿನಗಳ ಎರಡು ಪಂದ್ಯಕ್ಕೆ ಭಾರತ 'ಎ' ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ತಂಡವನ್ನು ಅಭಿಮನ್ಯು ಈಶ್ವರನ್ ಮುನ್ನಡೆಸಲಿದ್ದಾರೆ. ಭಾರತ ತಂಡದ ಆಟಗಾರರಾದ ರಾಹುಲ್ ಚಹರ್, ನವದೀಪ್ ಸೈನ್ ಹಾಗೂ ಜಯಂತ್ ಯಾದವ್ ಈ ತಂಡದಲ್ಲಿ ಆಡಲಿದ್ದಾರೆ.
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ, ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹರ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ಒಡಿಐ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್ , ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲ್ದೀಪ್ ಸೇನ್
ಮೊದಲನೇ ನಾಲ್ಕು ದಿನ ಪಂದ್ಯಕ್ಕೆ ಭಾರತ 'ಎ' ತಂಡ: ಅಭಿಮನ್ಯು ಈಶ್ವರನ್ (ನಾಯಕ), ರೋಹನ್ ಕುನ್ನುಮ್ಮಾಲ್, ಯಶಸ್ವಿ ಜೈಸ್ವಾಲ್, ಯಶ್ ಧುಲ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಉಪೇಂದ್ರ ಯಾದವ್ (ವಿ.ಕೀ), ಸೌರಭ್ ಕುಮಾರ್, ರಾಹುಲ್ ಚಹರ್, ಜಯಂತ್ ಯಾದವ್, ಮುಕೇಶ್ ಕುಮಾರ್, ನವದೀಪ್ ಸೈನಿ, ಅತಿತ್ ಸೇಠ್.
ಎರಡನೇ ನಾಲ್ಕು ದಿನ ಪಂದ್ಯಕ್ಕೆ ಭಾರತ 'ಎ' ತಂಡ: ಅಭಿಮನ್ಯು ಈಶ್ವರನ್ (ನಾಯಕ), ರೋಹನ್ ಕುನ್ನುಮ್ಮಾಲ್, ಯಶಸ್ವಿ ಜೈಸ್ವಾಲ್, ಯಶ್ ಧುಲ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಉಪೇಂದ್ರ ಯಾದವ್ (ವಿ.ಕೀ), ಸೌರಭ್ ಕುಮಾರ್, ರಾಹುಲ್ ಚಹರ್, ಜಯಂತ್ ಯಾದವ್, ಮುಕೇಶ್ ಕುಮಾರ್, ನವದೀಪ್ ಸೈನಿ, ಅತಿತ್ ಸೇಠ್, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್, ಕೆಎಸ್ ಭರತ್(ವಿ.ಕೀ)
Ind Vs Ban Odi Series 2022 Ravindra Jadeja, Yash Dayal Ruled Out Of Bangladesh Odi Series; Kuldeep Sen And Shahbaz Ahmed Named Replacements.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm