ಬ್ರೇಕಿಂಗ್ ನ್ಯೂಸ್
29-11-22 12:53 pm Source: Vijayakarnataka ಕ್ರೀಡೆ
ಭಾರತ ಸೀಮಿತ ಓವರ್ಗಳ ತಂಡದಲ್ಲಿ ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಅವರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಿಷಭ್ ಪಂತ್ ಬದಲು ಸಂಜು ಸ್ಯಾಮ್ಸನ್ಗೆ ಭಾರತ ವೈಟ್ ಬಾಲ್ ತಂಡದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕೆಂದು ಹಲವು ಮಾಜಿ ಆಟಗಾರರು ಆಗ್ರಹಿಸಿದ್ದಾರೆ. ಈ ಪಟ್ಟಿಗೆ ಇದೀಗ ನ್ಯೂಜಿಲೆಂಡ್ ಮಾಜಿ ವೇಗಿ ಸೈಮನ್ ದೌಲ್ ಸೇರ್ಪಡೆಯಾಗಿದ್ದಾರೆ.
ರಿಷಭ್ ಪಂತ್ ಭಾರತ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಆದರೆ, ಒಡಿಐ ಹಾಗೂ ಟಿ20 ತಂಡಗಳಲ್ಲಿ ಇನ್ನೂ ಹೇಳಿಕೊಳ್ಳುವಂತಹ ದೊಡ್ಡ ಇನಿಂಗ್ಸ್ಗಳನ್ನು ಅವರು ಆಡಿಲ್ಲ. ಸೀಮಿತ ಓವರ್ಗಳ ಸ್ವರೂಪದಲ್ಲಿ ಆಡಿರುವ 95 ಪಂದ್ಯಗಳ ಪೈಕಿ 8 ಅರ್ಧಶತಕಗಳು ಹಾಗೂ ಒಂದು ಶತಕ ಸೇರಿದಂತೆ 1842 ರನ್ ಗಳಿಸಿದ್ದಾರೆ.
ಮತ್ತೊಂದೆಡೆ ಸಂಜು ಸ್ಯಾಮ್ಸನ್ ಅವರು ರಿಷಭ್ ಒಂತ್ ಅವರಿಗಿಂತ ಮೊದಲೇ ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಆದರೆ, ಪಂತ್ಗೆ ಸಿಕ್ಕಂತಹ ಅವಕಾಶಗಳು ಕೇರಳ ಮೂಲದ ಆಟಗಾರನಿಗೆ ಲಭಿಸಿಲ್ಲ. 27 ಸೀಮಿತ ಓವರ್ಗಳ ಪಂದ್ಯಗಳಿಂದ ಸಂಜು 626 ರನ್ ಗಳಿಸಿದ್ದಾರೆ. ಅಂದಹಾಗೆ ಏಕದಿನ ಕ್ರಿಕೆಟ್ನಲ್ಲಿ ಪಂತ್ಗಿಂತ (35) ಸಂಜು ಸ್ಯಾಮ್ಸನ್ (66) ಅವರ ಸರಾಸರಿ ಉತ್ತಮವಾಗಿದೆ.
ಅಂದಹಾಗೆ ಪ್ರಸ್ತುತ ನ್ಯೂಜಿಲೆಂಡ್ ವಿರುದ್ದ ನಡೆಯುತ್ತಿರುವ ಒಡಿಐ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ತೋರಿದ ಹೊರತಾಗಿಯೂ ಸಂಜು ಸ್ಯಾಮ್ಸನ್ ಅವರನ್ನು ಟೀಮ್ ಮ್ಯಾನೇಜ್ಮೆಂಟ್ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಆರಂಭಿಕ ಪಂದ್ಯದಲ್ಲಿ ಪಂತ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಆದರೆ, ಸಂಜು ಸ್ಯಾಮ್ಸನ್ 36 ರನ್ ಗಳಿಸಿದ್ದರು ಹಾಗೂ ಶ್ರೇಯಸ್ ಅಯ್ಯರ್ ಜೊತೆ 94 ರನ್ ನಿರ್ಣಾಯಕ ಜೊತೆಯಾಟವಾಡಿದ್ದರು. ಇದರ ಹೊರತಾಗಿಯೂ ಎರಡನೇ ಪಂದ್ಯದಲ್ಲಿ ಪಂತ್ ಅವರನ್ನು ಉಳಿಸಿಕೊಂಡು, ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿತ್ತು.
"ಏಕದಿನ ಕ್ರಿಕೆಟ್ನಲ್ಲಿ ರಿಷಭ್ ಪಂತ್ ಅವರ ಸರಾಸರಿ ಸಾಮಾನ್ಯವಾಗಿದೆ. ಇವರು ಆಡಿರುವ 30 ಪಂದ್ಯಗಳಲ್ಲಿ 35ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ ಹಾಗೂ ಸ್ಟ್ರೈಕ್ ರೇಟ್ ಉತ್ತಮವಾಗಿದೆ. ಆದರೆ, ಸಂಜು ಸ್ಯಾಮ್ಸನ್ 11 ಪಂದ್ಯಗಳಿಂದ 60ಕ್ಕೂ ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ವಿಕೆಟ್ ಕೀಪರ್ಗೆ ಇರುವ ಎಲ್ಲಾ ಅರ್ಹತೆ ಸಂಜುಗೂ ಇದೆ. ಆದ್ದರಿಂದ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಲು ಸಂಜು ಸ್ಯಾಮ್ಸನ್ ಅರ್ಹರಾಗಿದ್ದಾರೆ," ಎಂದು ಸೈಮನ್ ದೌಲ್ ಕ್ರಿಕ್ಬಝ್ಗೆ ತಿಳಿಸಿದ್ದಾರೆ.
Ind Vs Nz Rishabhs Odi Average Is 30, Samson In 11 Matches Is Averaging 60': Simon Doull Not Convinced Of Pants White-Ball Skills.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm