ಬ್ರೇಕಿಂಗ್ ನ್ಯೂಸ್
02-12-22 01:12 pm Source: Vijayakarnataka ಕ್ರೀಡೆ
ಭಾರತ ಟಿ20 ತಂಡದ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಸೂಕ್ತ ಅಭ್ಯರ್ಥಿ ಎಂದು ಇಂಗ್ಲೆಂಡ್ ಆಲ್ರೌಂಡರ್ ಮೊಯೀನ್ ಅಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾಗಿದ್ದ 2022ರ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ತನ್ನ ಅಭಿಯಾನವನ್ನು ಮುಗಿಸಿತ್ತು.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗುಂಪು ಹಂತದಿಂದ ಹೊರಬಿದ್ದಿತ್ತು. ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿಯೂ ಟೀಮ್ ಇಂಡಿಯಾ 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೈಫಲ್ಯ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ 2024ರ ಟಿ20 ವಿಶ್ವಕಪ್ ನಿಮಿತ್ತ ಭಾರತ ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.
ಯುಎಇಯಲ್ಲಿ ನಡೆಯುತ್ತಿರುವ ಟಿ10 ಲೀಗ್ ಟೂರ್ನಿಯಲ್ಲಿ ಮೊರಿಸ್ವಿಲ್ಲೆ ಸ್ಯಾಂಪ್ ಆರ್ಮಿ ತಂಡವನ್ನು ಮುನ್ನಡೆಸುತ್ತಿರುವ ಮೊಯೀನ್ ಅಲಿ ಇತ್ತೀಚೆಗೆ ಎಎನ್ಐ ಜೊತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಈ ವೇಳೆ ಭಾರತ ಟಿ20 ತಂಡದ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಸೂಕ್ತ ಅಭ್ಯರ್ಥಿ ಎಂಬ ವಿಷಯವನ್ನು ಒತ್ತಿ ಹೇಳಿದ್ದಾರೆ.
"ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಿ. ಪ್ರಸ್ತುತ ಭಾರತ ತಂಡವನ್ನು ಮುನ್ನಡೆಸಲು ಹಾರ್ದಿಕ್ ಪಾಂಡ್ಯ ಸೂಕ್ತ ಅಭ್ಯರ್ಥಿಯಾಗಿದ್ದಾರೆ," ಎಂದು ಮೊಯೀನ್ ಅಲಿ ತಿಳಿಸಿದ್ದಾರೆ. ಇಂಗ್ಲಿಷ್ ಆಲ್ರೌಂಡರ್ ಹೇಳಿದಂತೆ ಹಾರ್ದಿಕ್ ಟಿ20 ನಾಯಕತ್ವ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು.
2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಅನುಭವಿಸಿದ ಬಗ್ಗೆ ಮಾತನಾಡಿದ ಮೊಯೀನ್ ಅಲಿ, "ಸೆಮಿಫೈನಲ್ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಅನ್ನು ಆಡಿಸದ ಕಾರಣ ಭಾರತ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಆಡಿದ್ದರೆ, ಸನ್ನಿವೇಶ ವಿಭಿನ್ನವಾಗಿರುತ್ತಿತ್ತು," ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
"ಈ ಪಂದ್ಯದಲ್ಲಿ ಭಾರತ ತಂಡ ಇನ್ನಷ್ಟು ರನ್ಗಳನ್ನು ಗಳಿಸಬಹುದಿತ್ತು. ಟೀಮ್ ಇಂಡಿಯಾ ಅಂದಿನ ಪಂದ್ಯದಲ್ಲಿ 200 ಅಥವಾ ಅದಕ್ಕಿಂತ ಜಾಸ್ತಿ ರನ್ ಗಳಿಸಬಹುದೆಂದು ನಾವು ಭಾವಿಸಿದ್ದೆವು. ಆದರೆ, ಭಾರತ ಗಳಿಸಿದ್ದು 160 ರನ್ ಮಾತ್ರ. ಹಾಗಾಗಿ ಭಾರತೀಯ ಬೌಲರ್ಗಳ ವಿರುದ್ಧ ನಮ್ಮ ಬ್ಯಾಟ್ಸ್ಮನ್ಗಳಿಗೆ ವಿಶ್ವಾಸವಿತ್ತು. ಅದರಂತೆ ಪಂದ್ಯವನ್ನು ಮುಗಿಸಿದ್ದರು," ಎಂದು ಮೊಯೀನ್ ಅಲಿ ಹೇಳಿದರು.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗಮನಾರ್ಹ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿಯನ್ನು ಇದೇ ವೇಳೆ ಇಂಗ್ಲೆಂಡ್ ಆಲ್ರೌಂಡರ್ ಮುಕ್ತಕಂಠದಿಂದ ಗುಣಗಾನ ಮಾಡಿದರು. "ವಿರಾಟ್ ಕೊಹ್ಲಿ ಫಾರ್ಮ್ಗೆ ಮರಳಿರುವುದು ತಂಡದ ಪಾಲಿಗೆ ಶುಭ ಸಂಕೇತ. ಪ್ರತಿಯೊಬ್ಬ ಆಟಗಾರರು ವೃತ್ತಿ ಜೀವನದಲ್ಲಿ ಒಮ್ಮೆ ಕಠಿಣ ಅವಧಿಯನ್ನು ಅನುಭವಿಸುತ್ತಾರೆ. ಇದರಿಂದ ಕೆಲ ಆಟಗಾರರು ಮಾತ್ರ ಹೊರಬರುತ್ತಾರೆ. ಅದರಂತೆ ವಿರಾಟ್ ಕೊಹ್ಲಿ ಕಠಿಣ ದಿನಗಳಿಂದ ಹೊರ ಬಂದಿದ್ದಾರೆ," ಎಂದು ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಗುಣಗಾನ ಮಾಡಿದರು.
Star All-Rounder Hardik Pandya Best Option To Lead Team India ,Says English All-Rounder Moeen Ali.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm