ಬ್ರೇಕಿಂಗ್ ನ್ಯೂಸ್
09-12-22 01:34 pm Source: Vijayakarnataka ಕ್ರೀಡೆ
ಬಾಂಗ್ಲಾದೇಶ ವಿರುದ್ದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಹೊತ್ತಿಗೆ ಹಿರಿಯ ವೇಗಿ ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಸಂಪೂರ್ಣವಾಗಿ ಗುಣಮುಖರಾಗುವುದು ಬಹುತೇಕ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರೂ ಟೆಸ್ಟ್ ಸರಣಿಯಿಂದ ಹೊರಬೀಳಲಿದ್ದು, ಇವರ ಸ್ಥಾನಕ್ಕೆ ಸೌರಭ್ ಕುಮಾರ್ ಮತ್ತು ನವದೀಪ್ ಸೈನಿ ಆಯ್ಕೆಯಾಗುವ ಸಾಧ್ಯತೆ ಇದೆ.
ಪ್ರಸ್ತುತ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿ ಕಾದಾಟ ನಡೆಸುತ್ತಿವೆ. ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಭಾರತ ತಂಡ ಈಗಾಗಲೇ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಶನಿವಾರ ಮೂರನೇ ಪಂದ್ಯದಲ್ಲಿ ಉಭಯ ತಂಡಗಳು ಸೆಣಸಲಿವೆ. ಇದಾದ ಬಳಿಕ ಡಿಸೆಂಬರ್ 14 ರಿಂದ ಚತ್ತೋಗ್ರಾಮ್ನಲ್ಲಿ ಮೊದಲನೇ ಪಂದ್ಯದ ಮೂಲಕ ಟೆಸ್ಟ್ ಸರಣಿ ಆರಂಭವಾಗಲಿವೆ.
ಸೆಪ್ಟಂಬರ್ ಆರಂಭದಲ್ಲಿ ರವೀಂದ್ರ ಜಡೇಜಾ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ, ಇನ್ನೂ ಅವರು ಗುಣಮುಖರಾಗಿಲ್ಲ. ಆಸ್ಟ್ರೇಲಿಯಾದಲ್ಲಿ ಇತ್ತೀಚೆಗೆ ಮುಕ್ತಾಯವಾಗಿದ್ದ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ತವರಿಗೆ ಮರಳಿದ್ದ ಮೊಹಮ್ಮದ್ ಶಮಿ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಗೆ ಸಜ್ಜಾಗುತ್ತಿದ್ದ ವೇಳೆ ಭುಜದ ಗಾಯಕ್ಕೆ ತುತ್ತಾಗಿದ್ದರು.
ಗಾಯಾಳು ರವೀಂದ್ರ ಜಡೇಜಾ ಅವರ ಸ್ಥಾನಕ್ಕೆ ಉತ್ತರ ಪ್ರದೇಶ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇವರು ರಣಜಿ ಟ್ರೋಫಿ ಟೂರ್ನಿಯಲ್ಲಿ ನಿಯಮಿತವಾಗಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದರ ಜೊತೆಗೆ ಪ್ರಸ್ತುತ ಬಾಂಗ್ಲಾದೇಶ 'ಎ' ತಂಡದ ವಿರುದ್ದವೂ ಭಾರತ 'ಎ' ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲಿಯೂ ಅವರು ತಂಡಕ್ಕೆ ನೆರವಾಗಬಲ್ಲರು.
ಮತ್ತೊಂದಡೆ ಮೊಹಮ್ಮದ್ ಶಮಿ ಅವರ ಬದಲು ನವದೀಪ್ ಸೈನಿ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಆ ಮೂಲಕ ಉಮೇಶ್ ಯಾದವ್, ಶಾರ್ದುಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನೊಳಗೊಂಡ ವೇಗದ ಬೌಲಿಂಗ್ ವಿಭಾಗವನ್ನು ಸೇರಿಕೊಳ್ಳಬಹುದು. ಮತ್ತೊಂದೆಡೆ ಎರಡನೇ ಏಕದಿನ ಪಂದ್ಯದ ವೇಳೆ ಹೆಬ್ಬೆರಳು ಗಾಯಕ್ಕೆ ತುತ್ತಾಗಿರುವ ರೋಹಿತ್ ಶರ್ಮಾ ಅವರು ಕೂಡ ಟೆಸ್ಟ್ ಸರಣಿಯಿಂದ ಹೊರಬೀಳುವ ಸಾಧ್ಯತೆ ಇದೆ.
ಎರಡನೇ ಏಕದಿನ ಪಂದ್ಯದಲ್ಲಿ ಹೆಬ್ಬೆರಳು ಗಾಯದ ಹೊರತಾಗಿಯೂ ರೋಹಿತ್ ಶರ್ಮಾ 9ನೇ ಕ್ರಮಾಂಕದಲ್ಲಿ ಕ್ರೀಸ್ಗಿಳಿದು 28 ಎಸೆತಗಳಲ್ಲಿ ಅಜೇಯ 51 ರನ್ ಸಿಡಿಸಿದ್ದರು. ಇದರ ಹೊರತಾಗಿಯೂ ಭಾರತ ತಂಡ ಕೇವಲ 5 ರನ್ಗಳಿಂದ ಸೋಲು ಅನುಭವಿಸಿತ್ತು. ಆ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಭಾರತ ಒಡಿಐ ಸರಣಿಯನ್ನು ಕಳೆದುಕೊಂಡಿತು.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ಕೀಪರ್), ಕೆ.ಎಸ್ ಭರತ್ (ವಿಕೆಟ್ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ(ಅನುಮಾನ), ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ(ಅನುಮಾನ), ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
Ind Vs Ban Ravindra Jadeja, Mohammed Shami Likely To Miss Bangladesh Test Series, Saurabh Kumar And Navdeep Saini As Replacements.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 06:39 pm
Mangalore Correspondent
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm