ಬ್ರೇಕಿಂಗ್ ನ್ಯೂಸ್
13-12-22 02:31 pm Source: Vijayakarnataka ಕ್ರೀಡೆ
ಬಾಂಗ್ಲಾದೇಶ ವಿರುದ್ದ ನಾಳೆಯಿಂದ(ಬುಧವಾರ) ಆರಂಭವಾಗಲಿರುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದ್ದು, ಇನಿಂಗ್ಸ್ ಆರಂಭಿಸಲು ಕೆ.ಎಲ್ ರಾಹುಲ್ ಹಾಗೂ ಶುಭಮನ್ ಗಿಲ್ಗೆ ಅವಕಾಶ ನೀಡಿದ್ದಾರೆ.
ರೋಹಿತ್ ಶರ್ಮಾ ಹೆಬ್ಬೆರಳು ಗಾಯದಿಂದಾಗಿ ಮೊದಲನೇ ಟೆಸ್ಟ್ ಪಂದ್ಯದಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಕೆ.ಎಲ್ ರಾಹುಲ್ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಹಿರಿಯ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.
ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿದ ಆಕಾಶ್ ಚೋಪ್ರಾ, "ಬೌಲಿಂಗ್ ವಿಭಾಗದಲ್ಲಿ ಇನ್ನೂ ಪ್ರಶ್ನೆಗಳಿವೆ. ಆದರೆ, ಬ್ಯಾಟಿಂಗ್ ವಿಭಾಗ ಸರಿಯಾಗಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಕೆ.ಎಲ್ ರಾಹುಲ್ ಅವರ ಜೊತೆ ಶುಭಮನ ಗಿಲ್ ಇನಿಂಗ್ಸ್ ಆರಂಭಿಸಬಹುದು. ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಕೆ.ಎಲ್ ರಾಹುಲ್ ನಾಯಕ," ಎಂದು ಹೇಳಿದರು.
"3ನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಬರಲಿದ್ದಾರೆ. ಇದಾದ ಬಳಿಕ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇಲ್ಲಿನ ಕಂಡೀಷನ್ಸ್ನಲ್ಲಿ ಅಗ್ರ ನಾಲ್ಕು ಬ್ಯಾಟಿಂಗ್ ಕ್ರಮಾಂಕಗಳ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ತೋರಲಿದ್ದಾರೆಂದು ನಾನು ಭಾವಿಸುತ್ತೇನೆ. ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಹಾಗೂ ಶ್ರೇಯಸ್ ಅಯ್ಯರ್ ಅಯ್ಯರ್ 6ನೇ ಕ್ರಮಾಂಕದಲ್ಲಿ ಆಡಬೇಕು. ಇದು ನನ್ನ ಬ್ಯಾಟಿಂಗ್ ಕ್ರಮಾಂಕ," ಎಂದು ಚೋಪ್ರಾ ತಿಳಿಸಿದರು.
ಇಬ್ಬರು ಸ್ಪಿನ್ ಆಲ್ರೌಂಡರ್ಗಳು: ಮೊದಲನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಆರ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಸೇರಿದಂತೆ ಇಬ್ಬರು ಸ್ಪಿನ್ ಆಲ್ರೌಂಡರ್ಗಳನ್ನು ಆಯ್ಕೆ ಮಾಡಿದ್ದಾರೆ.
"ಭಾರತ ತಂಡದ ಆಡುವ ಬಳಗದಲ್ಲಿ ಇಬ್ಬರು ಆಲ್ರೌಂಡರ್ಗಳನ್ನು ನೋಡಲು ನಾನು ಬಯಸುತ್ತೇನೆ. ಆರ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಇಬ್ಬರೂ ಕ್ರಮವಾಗಿ 7 ಮತ್ತು 8ನೇ ಕ್ರಮಾಂಕಗಳಲ್ಲಿ ಆಡಬೇಕು. ಟೆಸ್ಟ್ ಕ್ರಿಕೆಟ್ ಬಂದಾಗ ಆರ್ ಅಶ್ವಿನ್ ಪ್ರಮುಖ ಆಟಗಾರ. ಮತ್ತೊಂದೆಡೆ ಗಾಯದಿಂದಾಗಿ ಕಳೆದ ಕೆಲ ಟೆಸ್ಟ್ ಪಂದ್ಯಗಳಲ್ಲಿ ಅಕ್ಷರ್ ಪಟೇಲ್ ಆಡಿರಲಿಲ್ಲ," ಎಂದರು.
"ಮೂರು ಸ್ಪಿನ್ನರ್ಗಳು ಹಾಗೂ ಮೂರು ಫಾಸ್ಟ್ ಬೌಲರ್ಗಳೊಂದಿಗೆ ಆಡಲು ನಾನು ಬಯಸುತ್ತೇನೆ. ಕೊನೆಯ ಒಡಿಐ ನಡೆದಿದ್ದು ಇದೇ ಮೈದಾನದಲ್ಲಿ. ಹಾಗಾಗಿ ಫಾಸ್ಟ್ ಬೌಲರ್ಗಳಿಗೆ ಈ ಪಿಚ್ ನೆರವಾಗಬಲ್ಲದು. ಮೊಹಮ್ಮದ್ ಸಿರಾಜ್ ಶೇ. 100ರಷ್ಟು ಆಡುವುದು ಖಚಿತ. ಮತ್ತೊಂದೆಡೆ ಉಮೇಶ್ ಯಾದವ್ ಬಹುತೇಕ ಆಡಲಿದ್ದಾರೆ. ಆಲ್ರೌಂಡರ್ ಸಾಮರ್ಥ್ಯ ಇರುವ ಹಿನ್ನೆಲೆಯಲ್ಲಿ ಶಾರ್ದುಲ್ ಠಾಕೂರ್ ಅವರನ್ನು ಮೂರನೇ ವೇಗಿಯಾಗಿ ಆಡಿಸಬೇಕು," ಎಂದು ಆಕಾಶ್ ಚೋಪ್ರಾ ಸಲಹೆ ನೀಡಿದ್ದಾರೆ.
ಮೊದಲನೇ ಟೆಸ್ಟ್ ಪಂದ್ಯಕ್ಕೆ ಆಕಾಶ್ ಚೋಪ್ರಾರ ಭಾರತ ಪ್ಲೇಯಿಂಗ್ XI: ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಶಾರ್ದುಲ್ ಠಾಕೂರ್/ಕುಲ್ದೀಪ್ ಯಾದವ್
Ind Vs Ban There Will Be Questions In The Bowling-Aakash Chopra Picks Indias Playing Xi For 1st Test Vs Bangladesh.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 06:39 pm
Mangalore Correspondent
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm