ಬ್ರೇಕಿಂಗ್ ನ್ಯೂಸ್
27-12-22 12:53 pm Source: Vijayakarnataka ಕ್ರೀಡೆ
ಬಾಂಗ್ಲಾದೇಶ ವಿರುದ್ಧ ಇತ್ತೀಚೆಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 3 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತ್ತು. ಆ ಮೂಲಕ ಕೆ.ಎಲ್ ರಾಹುಲ್ ನಾಯಕತ್ವದ ಭಾರತ ತಂಡ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.
ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯ ಗೆಲುವಿನ ಮೂಲಕ ಭಾರತ ತಂಡದ 2023ರ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಹಾದಿ ಇನ್ನಷ್ಟು ಸುಗಮವಾಗಿದೆ. ಬಾಂಗ್ಲಾದೇಶ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡ ಟೆಸ್ಟ್ ಚಾಂಪಿಯನ್ಷಿಪ್ ಪಾಯಿಂಟ್ಸ್ ಟೇಬಲ್ನಲ್ಲಿ 52.08ರ ಸರಾಸರಿಯನ್ನು ಹೊಂದಿತ್ತು. ಇದೀಗ ಟೆಸ್ಟ್ ಸರಣಿ ಗೆಲುವಿನ ಬಳಿಕ ಸರಾಸರಿಯಲ್ಲಿ 58.08% ರಷ್ಟು ಏರಿಕೆ ಕಂಡಿದೆ.
ದೀಗ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಮೊದಲನೇ ಟೆಸ್ಟ್ ಸೋಲುವ ಮೂಲಕ ಭಾರತ ತಂಡ ಟೆಸ್ಟ್ ಚಾಂಪಿಯನ್ಷಿಪ್ ಪಾಯಿಂಟ್ಸ್ ಟೇಬಲ್ನಲ್ಲಿ ಎರಡನೇ ಸ್ಥಾನಕ್ಕೇರಿದೆ. ದಕ್ಷಿಣ ಆಫ್ರಿಕಾ 54.55ರ ಸರಾಸರಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. 76.92ರ ಸರಾಸರಿಯನ್ನು ಹೊಂದಿರುವ ಆಸ್ಟ್ರೇಲಿಯಾ ತಂಡ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರ ಸ್ಥಾನ ಅಲಂಕರಿಸಿದೆ.
ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಗೆಲುವಿನಿಂದಾಗಿ ಭಾರತ ತಂಡಕ್ಕೆ ಫೈನಲ್ಗೆ ಅರ್ಹತೆ ಪಡೆಯಲು ಉತ್ತಮ ಅವಕಾಶವಿದೆ. ಫೆಬ್ರವರಿ ತಿಂಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಾದಾಟ ನಡೆಸಲಿವೆ. ಈ ಸರಣಿಯ ಫಲಿತಾಂಶದ ಆಧಾರದ ಮೇಲೆ ಟೀಮ್ ಇಂಡಿಯಾದ ಫೈನಲ್ಗೆ ಅರ್ಹತೆ ನಿರ್ಧಾರವಾಗಲಿದೆ. ಇದರ ನಡುವೆ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ 3 ಪಂದ್ಯಗಳ ಟೆಸ್ಟ್ ಸರಣಿಯ ಫಲಿತಾಂಶ ಕೂಡ ಭಾರತ ತಂಡದ ಅರ್ಹತೆಯ ಮೇಲೆ ಪರಿಣಾಮ ಬೀರಲಿದೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಬಳಿಕ ದಕ್ಷಿಣ ಆಫ್ರಿಕಾ ತಂಡ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಸರಣಿ ಆಡಲಿದೆ. ಮತ್ತೊಂದೆಡೆ ಶ್ರೀಲಂಕಾ ತಂಡಕ್ಕೂ ಕೂಡ ಫೈನಲ್ಗೆ ತಲುಪಲು ಇನ್ನೂ ಅವಕಾಶವಿದೆ. ಲಂಕನ್ನರು ನ್ಯೂಜಿಲೆಂಡ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಸರಣಿಗಳ ಬಳಿಕ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರ ಎರಡು ತಂಡಗಳು ಫೈನಲ್ಗೆ ಅರ್ಹತೆ ಪಡೆಯಲಿವೆ.
2023ರ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಅರ್ಹತೆ ಭಾರತ ತಂಡದ ಲೆಕ್ಕಾಚಾರ ಹೇಗಿದೆ?
1.ದಕ್ಷಿಣ ಆಫ್ರಿಕಾ ವಿರುದ್ದ ಇನ್ನುಳಿದ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆಲುವು ಪಡೆಯಬೇಕು. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಗೆದ್ದರೆ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಭಾರತ ಅರ್ಹತೆ ಪಡೆಯಲಿದೆ.
2. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಒಂದು ಪಂದ್ಯ ಗೆದ್ದು ಕ್ಲೀನ್ ಸ್ವೀಪ್ನಿಂದ ತಪ್ಪಿಸಿಕೊಂಡರೆ ಹಾಗೂ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡರೆ, ಆಗ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧ 2-0 ಅಥವಾ 3-0 ಅಥವಾ 3-1 ಅಥವಾ 4-0 ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕಾಗುತ್ತದೆ.
ರನ್ನರ್ ಅಪ್ ಆಗಿದ್ದ ಭಾರತ ತಂಡ: ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಫೈನಲ್ಗೆ ಅರ್ಹತೆ ಪಡೆದಿತ್ತು. ಆದರೆ, ಫೈನಲ್ ಹಣಾಹಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ರನ್ನರ್ ಅಪ್ಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಭಾರತ ತಂಡ ಎರಡನೇ ಆವೃತ್ತಿಯಲ್ಲಿಯೂ ಪ್ರಶಸ್ತಿ ಗೆಲ್ಲಲು ಅವಕಾಶವಿದೆ.
Wtc Final Scenario How Can Indian Cricket Team Qualify For World Test Championship Final 2023.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm