ಬ್ರೇಕಿಂಗ್ ನ್ಯೂಸ್
28-12-22 05:58 pm Source: Vijayakarnataka ಕ್ರೀಡೆ
ಬಾಂಗ್ಲಾದೇಶ ಪ್ರವಾಸದಲ್ಲಿ ಒಡಿಐ ಸರಣಿ ಸೋತರೂ ಟೆಸ್ಟ್ ಸರಣಿಯಲ್ಲಿ ವೈಟ್ವಾಶ್ ಜಯ ದಾಖಲಿಸಿ ತಾಯ್ನಾಡಿಗೆ ಹಿಂದಿರುಗಿರುವ ಟೀಮ್ ಇಂಡಿಯಾ, ಇದೀಗ 2023ರ ಸಾಲಿನಲ್ಲಿ ಮೊದಲ ಅಭಿಯಾನವಾಗಿ ಪ್ರವಾಸಿ ಶ್ರೀಲಂಕಾ ಎದುರು ತಲಾ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಮತ್ತು ಏಕದಿನ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಇತ್ತಂಡಗಳ ನಡುವಣ ಟಿ20 ಸರಣಿ ಜನವರಿ 3ರಂದು ಶುರುವಾಗಲಿದ್ದು, ಈ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡಗಳನ್ನು ಮಂಗಳವಾರ (ಡಿ.27) ಪ್ರಕಟ ಮಾಡಿದೆ. ಟಿ20 ಸರಣಿಯಲ್ಲಿ ಭಾರತ ತಂಡಚವನ್ನು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುನ್ನಡೆಸಿದರೆ, ಏಕದಿನ ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮಾ ಕ್ಯಾಪ್ಟನ್ಸಿ ನಿಭಾಯಿಸಲಿದ್ದಾರೆ. ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಜನವರಿ 10ರಂದು ಶರುವಾಗಲಿದೆ.
ಅಂದಹಾಗೆ ಬಿಸಿಸಿಐ ಈ ಬಾರಿ ಭಾರತ ತಂಡಗಳನ್ನು ಪ್ರಕಟ ಮಾಡುವಾಗ ಕೆಲ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪ್ರಮುಖವಾಗಿ ಒಡಿಐ ತಂಡದಿಂದ ಅನುಭವಿ ಓಪನರ್ ಶಿಖರ್ ಧವನ್ ಅವರನ್ನು ಕೈಬಿಟ್ಟಿದೆ. ಜೊತೆಗೆ ಟಿ20 ತಂಡದಲ್ಲಿ ಯುವಕರಿಗೆ ಮಣೆಹಾಕಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರಿಗೂ ಕೊಕ್ ನೀಡಿದೆ. ಎಲ್ಲಕ್ಕಿಂತಲೂ ಮಿಗಿಲಾಗಿ ಎರಡೂ ತಂಡಗಳಿಂದ ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರನ್ನು ಹೊರಗಿಟ್ಟಿರುವುದು ದೊಡ್ಡ ಅಚ್ಚರಿ ತಂದೊಡ್ಡಿತ್ತು. ಆರಂಭಿಕ ವರದಿಗಳ ಪ್ರಕಾರ ವೈಟ್ಬಾಲ್ ಕ್ರಿಕೆಟ್ನಲ್ಲಿ ಪಂತ್ ಅವರ ಕಳಪೆ ಲಯ ಕಾರಣ ಸ್ಥಾನ ಕಳೆದುಕೊಂಡಿದ್ದಾರೆ ಎಂಬುದಾಗಿತ್ತು. ಆದರೆ, ವಾಸ್ತವದಲ್ಲಿ 25 ವರ್ಷದ ಎಡಗೈ ಬ್ಯಾಟ್ಸ್ಮನ್ ಗಾಯದ ಸಮಸ್ಯೆ ಎದುರಿಸಿದ್ದಾರೆ ಎಂಬುದು ಇದೀಗ ಬೆಳಕಿಗೆ ಬಂದಿದೆ.
ಟೈಮ್ಸ್ ಆಫ್ ಇಂಡಿಯಾ ಇತ್ತೀಚಿನ ವರದಿ ಪ್ರಕಾರ ರಿಷಭ್ ಪಂತ್ ದೀರ್ಘ ಸಮಯದಿಂದ ಮಂಡಿ ನೋವಿನ ಸಮಸ್ಯೆಯಿಂದ ಬಳಲಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿದು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರಕ್ಕೆ ಒಳಪಡಲಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಜನವರಿಯಲ್ಲಿ ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ಎದುರು ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗಳನ್ನು ಆಡಲಿದ್ದು, ಆ ಹೊತ್ತಿಗೆ ಪಂತ್ ಭಾರತ ತಂಡದಲ್ಲಿ ಮರಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಜವಾಬ್ದಾರಿಯನ್ನು ಯುವ ಆಟಗಾರ ಇಶಾನ್ ಕಿಶನ್ ನಿರ್ವಹಿಸಲಿದ್ದಾರೆ. ಟಿ20 ತಂಡದಲ್ಲಿ ಹೆಚ್ಚುವರಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಆಗಿ ಸಂಜು ಸ್ಯಾಮ್ಸನ್ ಕೂಡ ಇದ್ದಾರೆ.
ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತದ ಟಿ20 ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ಕೀಪರ್), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ, ಮುಖೇಶ್ ಕುಮಾರ್.
ಶ್ರೀಲಂಕಾ ವಿರುದ್ಧದ ಒಡಿಐ ಸರಣಿಗೆ ಭಾರತ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ , ಅರ್ಷದೀಪ್ ಸಿಂಗ್.
Ind Vs Sl Here Is Why Rishabh Pant Is Not Selected In T20i And Odi Squads Against Sri Lanka.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm