ಬ್ರೇಕಿಂಗ್ ನ್ಯೂಸ್
30-12-22 01:25 pm Source: Vijayakarnataka ಕ್ರೀಡೆ
ಕಾರು ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಆರೋಗ್ಯದ ಬಗ್ಗೆ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಕ್ರಿಕೆಟಿಗನ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ ಗಾಬರಿ ಪಡಬೇಕಾದ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ ಸುಮಾರು 5:30ರ ಸಮಯದಲ್ಲಿ ದಿಲ್ಲಿಯಿಂದ ಉತ್ತರಾಖಂಡಗೆ ರಿಷಭ್ ಪಂತ್ ಒಬ್ಬರೆ ತಮ್ಮ ಬಿಎಂಡಬ್ಲ್ಯು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ದಿಲ್ಲಿ-ಡೆಹ್ರಾಡೂನ್ ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಬೆನ್ನಲ್ಲೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಿಷಭ್ ಪಂತ್ ಕಾರಿನ ಬಾಗಿಲು ತೆಗೆದು ಹೊರಗಡೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದರು.
ರಿಷಭ್ ಪಂತ್ ಅವರನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹಾಗೂ ತದನಂತರ ಡೆಹ್ರಾಡೂನ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಂದಹಾಗೆ ಅಪಘಾತದಲ್ಲಿ ರಿಷಭ್ ಪಂತ್ ತಲೆ, ಬೆನ್ನು ಹಾಗೂ ಕಾಲಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ರಿಷಭ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಷಭ್ ಪಂತ್ ಗಾಯದ ಸ್ವರೂಪ ಹಾಗೂ ಅವರು ಸಂಪೂರ್ಣವಾಗಿ ಗುಣಮುಖರಾಗಲು ಇನ್ನೂ ಎಷ್ಟು ದಿನಗಳ ಬೇಕು ಎಂಬುದರ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ.
ಭಾರತ ಕ್ರಿಕೆಟ್ ತಂಡದ ರಿಷಭ್ ಪಂತ್ ಅವರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಸಿಬ್ಬಂದಿಯ ವೀಕ್ಷಣೆಯಲ್ಲಿದ್ದಾರೆ. ಆದರೆ, ಅವರಿಗೆ ಯಾವುದೇ ಅಪಾಯ ಇಲ್ಲ ಎಂದು ಮ್ಯಾಕ್ಸ್ ಆಸ್ಪತ್ರೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ಖಚಿತಪಡಿಸಿದೆ.
"ಕ್ರಿಕೆಟಿಗ ರಿಷಬ್ ಪಂತ್ ಅವರು ಮೂಳೆಚಿಕಿತ್ಸಕರು ಮತ್ತು ಪ್ಲಾಸ್ಟಿಕ್ ಸರ್ಜನ್ಗಳ ವೀಕ್ಷಣೆಯಲ್ಲಿದ್ದಾರೆ. ಅವರ ಆರೋಗ್ಯ ಪರಸ್ಥಿತಿ ಸ್ಥಿರವಾಗಿದೆ. ವೈದ್ಯರು ರಿಷಭ್ ಪಂತ್ ಅವರನ್ನು ಪರೀಕ್ಷಿಸಿದ ಬಳಿಕ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಲಾಗುವುದು. ತದ ನಂತರ ಮುಂದಿನ ಹೆಜ್ಜೆಯನ್ನು ಇಡುತ್ತೇವೆ," ಎಂದು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆ ಆಶಿಶ್ ಯಾಗ್ನಿಕ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Rishabh Pant Accident Max Hospital Releases First Official Update On Rishabh Pant's Health After Freak Car Accident.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm