ಬ್ರೇಕಿಂಗ್ ನ್ಯೂಸ್
03-01-23 11:48 am Source: Vijayakarnataka ಕ್ರೀಡೆ
ಕಳೆದ 2022ರ ವರ್ಷದಲ್ಲಿ ಟಿ20 ಕ್ರಿಕೆಟ್ನಲ್ಲಿ ರನ್ ಹೊಳೆ ಹರಿಸುವ ಮೂಲಕ ಗಮನ ಸೆಳೆದಿರುವ ಸೂರ್ಯಕುಮಾರ್ ಯಾದವ್ ಅವರನ್ನು ಗುಣಗಾಣ ಮಾಡಿದ ಭಾರತ ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ, ಬಲಗೈ ಬ್ಯಾಟ್ಸ್ಮನ್ ಟೆಸ್ಟ್ ತಂಡದಲ್ಲಿಯೂ ಆಡಬೇಕೆಂದು ಹೇಳಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆ.ಎಲ್ ರಾಹುಲ್ ಸೇರಿದಂತೆ ಹಲವು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ತಂಡ ಇಂದಿನಿಂದ (ಮಂಗಳವಾರ) ಶ್ರೀಲಂಕಾ ವಿರುದ್ದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕಾದಾಟ ನಡೆಸಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದರೆ, ಸೂರ್ಯಕುಮಾರ್ ಯಾದವ್ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಮಂಗಳವಾರ ಸಂಜೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಮೊದಲನೇ ಟಿ20 ಪಂದ್ಯದ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ ಹಲವು ಸಂಗತಿಗಳ ಬಗ್ಗೆ ಬೆಳಕು ಚೆಲ್ಲಿದರು. ಅದರಲ್ಲಿಯೂ ವಿಶೇಷವಾಗಿ ಸಹ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಮುಕ್ತಕಂಠದಿಂದ ಗುಣಗಾಣ ಮಾಡಿದರು.
"ಹಲವು ವರ್ಷಗಳ ಹಿಂದೆಯೇ ನಾನು ಸೂರ್ಯಕುಮಾರ್ ಯಾದವ್ ಬಗ್ಗೆ ಭವಿಷ್ಯ ನುಡಿದಿದ್ದೆ ಹಾಗೂ ತಡವಾಗಿದರೂ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದಾರೆ. 2020ರಲ್ಲಿಯೇ ಭಾರತ ತಂಡದ ಪರ ಸೂರ್ಯ ಆಡಬೇಕಾಗಿತ್ತು. ಆದರೆ, ಅನಿರೀಕ್ಷಿತವಾಗಿ ಅವರು ಆಡಲು ಸಾಧ್ಯವಾಗಿರಲಿಲ್ಲ. ದೇವರು ಆಶಿರ್ವಾದ ಅವರ ಮೇಲಿದೆ. ಭಾರತ ತಂಡದ ಪರ ತಡವಾಗಿ ಆಡಿದರೂ ಅಂದುಕೊಂಡಂತೆ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ," ಎಂದರು.
A new year 🗓️
— BCCI (@BCCI) January 2, 2023
A new start 👍🏻
A new Vice-captain - @surya_14kumar - for the Sri Lanka T20I series 😎#TeamIndia had their first practice session here at Wankhede Stadium ahead of the T20I series opener in Mumbai 🏟️#INDvSL | @mastercardindia pic.twitter.com/qqUifdoDsp
"ಭಾರತ ತಂಡದ ಪರ ಇದೇ ರೀತಿ ಅವರು ರನ್ ಗಳಿಸಲಿ ಎಂದು ನಾನು ಆಶಿಸುತ್ತೇನೆ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅವರು ಇನ್ನಷ್ಟು ರನ್ಗಳನ್ನು ಗಳಿಸಲಿ. ನನ್ನ ಪ್ರಕಾರ ನಮ್ಮ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಆಟಗಾರ," ಎಂದು ಹಾರ್ದಿಕ್ ಪಾಂಡ್ಯ ಗುಣಗಾಣ ಮಾಡಿದ್ದಾರೆ.
ಸೀಮಿತ ಓವರ್ಗಳ ಭಾರತ ತಂಡದಲ್ಲಿ ಈಗಾಗಲೇ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿರುವ ಸೂರ್ಯಕುಮಾರ್ ಯಾದವ್, ಇನ್ನೂ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡುವುದು ಬಾಕಿ ಇದೆ. ಅದರಂತೆ ಟೆಸ್ಟ್ ಕ್ರಿಕೆಟ್ನಲ್ಲಿಯೂ ಸೂರ್ಯ ಆಡಬೇಕೆಂದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಸೀಮಿತ ಓವರ್ಗಳ ಕ್ರಿಕೆಟ್ ಮಾತ್ರವಲ್ಲದೆ ಭಾರತ ತಂಡದ ಎಲ್ಲಾ ಸ್ವರೂಪಕ್ಕೂ ಸೂರ್ಯಕುಮಾರ್ ಯಾದವ್ ಪ್ರಮುಖ ಆಟಗಾರರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ಗೂ ಕೂಡ ಸೂರ್ಯಕುಮಾರ್ ಯಾದವ್ ಬರಬೇಕು. ಏಕೆಂದರೆ ಸನ್ನಿವೇಶ ಯಾವುದೇ ಇರಲಿ, ಅದನ್ನು ಬದಲಾವಣೆ ಮಾಡುವ ಸಾಮರ್ಥ್ಯ ಹಾರ್ದಿಕ್ ಪಾಂಡ್ಯ ಅವರಲ್ಲಿದೆ. ಸೆಲೆಕ್ಟರ್ಗಳು ಹಾಗೂ ಕೋಚ್ಗಳ ಈ ಬಗ್ಗೆ ಚಿಂತಿಸಲಿದ್ದಾರೆಂಬ ಬಗ್ಗೆ ನನಗೆ ಖಚಿತತೆ ಇದೆ," ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ.
"ವೈಟ್ ಬಾಲ್ ಕ್ರಿಕೆಟ್ನಲ್ಲಿ ಸೂರ್ಯಕುಮಾರ್ ಯಾದವ್ ಎಂಥಾ ಆಟಗಾರ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಹೇಳಬೇಕಾದ ಅಗತ್ಯವಿಲ್ಲ. ಒಬ್ಬ ನಾಯಕನಾಗಿ, ಟೀಮ್ ಮ್ಯಾನೇಜ್ಮೆಂಟ್ಗೆ ಸೂರ್ಯ ಅತ್ಯಂತ ಪ್ರಮುಖ ಆಟಗಾರ," ಎಂದು ಭಾರತ ತಂಡದ ಹಂಗಾಮಿ ನಾಯಕ ಹೇಳಿದ್ದಾರೆ.
Ind Vs Sl Suryakumar Yadav Is Very Important For All The Formats And In Red Ball As Well ,Says Hardik Pandya.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm