ಬ್ರೇಕಿಂಗ್ ನ್ಯೂಸ್
04-01-23 02:25 pm Source: Vijayakarnataka ಕ್ರೀಡೆ
ಶ್ರೀಲಂಕಾ ವಿರುದ್ಧ ಮೊದಲನೇ ಪಂದ್ಯ ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಗುರುವಾರ ನಡೆಯುವ ಎರಡನೇ ಹಣಾಹಣಿಯನ್ನೂ ಗೆದ್ದು ಟಿ20 ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಉಭಯ ತಂಡಗಳ ನಡುವಣ ಎರಡನೇ ಟಿ20 ಪಂದ್ಯಕ್ಕೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ವೇದಿಕೆ ಸಿದ್ದವಾಗಿದೆ.
ಮೊದಲನೇ ಟಿ20 ಪಂದ್ಯ ಮಂಗಳವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿತ್ತು. ಕೊನೆಯ ಎಸೆತದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದ ಭಾರತ ತಂಡ ಕೇವಲ ಎರಡು ರನ್ ರೋಚಕ ಗೆಲುವು ಸಾಧಿಸಿತ್ತು. ಆ ಮೂಲಕ ನಾಯಕನಾಗಿ ಹಾರ್ದಿಕ್ ಪಾಂಡ್ಯ ಸತತವಾಗಿ ಮೂರನೇ ಟಿ20 ಸರಣಿ ಗೆಲ್ಲುವ ಸನಿಹದಲ್ಲಿದ್ದಾರೆ.
ಕೊನೆಯ ಓವರ್ನಲ್ಲಿ ಶ್ರೀಲಂಕಾ ತಂಡಕ್ಕೆ 13 ರನ್ ಅಗತ್ಯವಿತ್ತು. ಈ ವೇಳೆ ಬೌಲ್ ಮಾಡಿದ ಅಕ್ಷರ್ ಪಟೇಲ್ ಅವರು ಚಮಿಕಾ ಕರುಣಾರತ್ನೆ ಅವರ ಕೈಯಲ್ಲಿ ಸಿಕ್ಸರ್ ಹೊಡೆಸಿಕೊಂಡರೂ ಅಂತಿಮವಾಗಿ 10 ರನ್ ನೀಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಈ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ 2023ರ ವರ್ಷದಲ್ಲಿ ಶುಭಾರಂಭ ಕಂಡಿತ್ತು.
ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ ಬಹುಬೇಗ ಕೀ ಬ್ಯಾಟ್ಸ್ಮನ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಅಕ್ಷರ್ ಪಟೇಲ್ ಹಾಗೂ ದೀಪಕ್ ಹೂಡ ಜೋಡಿ ಅಜೇಯ 68 ರನ್ ಜೊತೆಯಾಟವನ್ನು ಆಡಿತ್ತು. ಕೇವಲ 23 ಎಸೆತಗಳಲ್ಲಿ ಅಜೇಯ 41 ರನ್ ಗಳಿಸಿದ್ದ ದೀಪಕ್ ಹೂಡ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು.
ಮತ್ತೊಂದೆಡೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಶಿವಂ ಮಾವಿ ಅವರು 4 ಓವರ್ಗಳಿಗೆ 22 ರನ್ ನೀಡುವ ಮೂಲಕ ಪ್ರಮುಖ 4 ವಿಕೆಟ್ಗಳನ್ನು ಪಡೆದುಕೊಂಡಿದ್ದರು. ಆ ಮೂಲಕ ಭಾರತ ತಂಡದ ಪರ ಪದಾರ್ಪಣೆ ಪಂದ್ಯದಲ್ಲಿ 4 ವಿಕೆಟ್ ಕಿತ್ತ ಮೂರನೇ ಬೌಲರ್ ಎನಿಸಿಕೊಂಡಿದ್ದರು.
ಪಿಚ್ ರಿಪೋರ್ಟ್: ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟೆಸ್ಟ್ ಪಂದ್ಯ ನಡೆಯುವ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನ ಪಿಚ್ ಕೂಡ ಮುಂಬೈನ ವಾಂಖೆಡೆ ಸ್ಟೇಡಿಯಂನ ರೀತಿಯೇ ಇದೆ. ಈ ಮೈದಾನದ ಪಿಚ್ನಲ್ಲಿ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ತೋರಬಹುದಾಗಿದೆ. ಮೊದಲನೇ ಪಂದ್ಯದಂತೆ ಎರಡನೇ ಪಂದ್ಯದಲ್ಲಿಯೂ ಟಾಸ್ ಗೆದ್ದ ತಂಡ ಚೇಸಿಂಗ್ ಆಯ್ದುಕೊಳ್ಳುವ ಸಾಧ್ಯತೆ ಇದೆ.
ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI: ಶುಭಮನ್ ಗಿಲ್, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡ, ಅಕ್ಷರ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಹಲ್
ಶ್ರೀಲಂಕಾ ತಂಡ ಸಂಭಾವ್ಯ ಪ್ಲೇಯಿಂಗ್ XI: ಪಥುಮ್ ನಿಸಾಂಕ, ಕುಸಾಲ್ ಮೆಂಡಿಸ್ (ವಿ.ಕೀ), ಧನಂಜಯ್ ಡಿ ಸಿಲ್ವಾ, ಚರಿತಾ ಅಸಲಂಕ, ಭನುಕ ರಾಜಪಕ್ಷ, ದಸೂನ್ ಶಾನಕ (ನಾಯಕ), ವಾನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಕಸೂನ್ ರಜಿತ, ದಿಲ್ಷಾನ್ ಮದುಶಂಕ
ಎರಡನೇ ಪಂದ್ಯದ ವಿವರ
ಭಾರತ vs ಶ್ರೀಲಂಕಾ
ದಿನಾಂಕ: ಜನವರಿ 5, 2023
ಸಮಯ: ಸಂಜೆ 07:00 ಗಂಟೆಗೆ
ಸ್ಥಳ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನ, ಪುಣೆ
Ind Vs Sl 2nd T20i Match Preview, India Vs Sri Lanka Probables Playing Xi, Pitch Report, Date, Time.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm