ಬ್ರೇಕಿಂಗ್ ನ್ಯೂಸ್
11-01-23 12:36 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಜಮ್ಮು ಬೌಲರ್ ಮತ್ತೊಂದು ದಾಖಲೆ ಬರೆದಿದ್ದಾರೆ.
ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ ಪ್ರಸ್ತಾವಿತ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತ-ಶ್ರೀಲಂಕಾ ನಡುವಿನ 3 ಪಂದ್ಯಗಳ 2ನೇ ಪಂದ್ಯವು ಜನವರಿ 12ರಂದು ನಡೆಯಲಿದೆ. ಈ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಉಮ್ರಾನ್ ಮಲಿಕ್ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. 14ನೇ ಓವರ್ನ 4ನೇ ಎಸೆತದಲ್ಲಿ ಮಲಿಕ್ ಈ ದಾಖಲೆ ಸೃಷ್ಟಿಸಿದ್ದು, ವಿಶ್ವ ಕ್ರಿಕೆಟ್ ಇವರ ವೇಗಕ್ಕೆ ಅಚ್ಚರಿ ವ್ಯಕ್ತಪಡಿಸಿದೆ.
ಟೀಂ ಇಂಡಿಯಾದ ಪರ ಇದೀಗ ಉಮ್ರಾನ್ ಮಲಿಕ್ ಅತ್ಯಂತ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಬುಮ್ರಾ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮಲಿಕ್ ಮುರಿದಿದ್ದಾರೆ.
ಶ್ರೀಲಂಕಾದೊಂದಿಗಿನ ಮೊದಲ ಟಿ20 ಪಂದ್ಯದಲ್ಲಿ ಉಮ್ರಾನ್ ಗಂಟೆಗೆ 155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಶ್ರೀಲಂಕಾ ನಾಯಕ ದಸುನ್ ಶನಕಾ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ ಉಮ್ರಾನ್ ಭಾರತದ ಪರ ವೇಗದ ಬೌಲರ್ ಎನಿಸಿಕೊಂಡಿದ್ದರು.
23 ವರ್ಷದ ಯುವ ಉಮ್ರಾನ್ ಮಲಿಕ್ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 156 kmph ಬೌಲಿಂಗ್ ಮಾಡುವ ಮೂಲಕ ತಮ್ಮದೇ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಂತ ವೇಘದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪಂದ್ಯದ 14ನೇ ಓವರ್ನಲ್ಲಿ ಉಮ್ರಾನ್ ಮಲಿಕ್ ಈ ದಾಖಲೆ ಬರೆದಿದ್ದು, ಮೊದಲ ಎಸೆತವನ್ನು 147 kmph ವೇಗದಲ್ಲಿ ಎಸೆದರೆ, 2ನೇ ಎಸೆತ 151 kmph, 3ನೇ ಎಸೆತ 151 kmph, 4ನೇ ಎಸೆತ 156 kmph ವೇಗ, 5ನೇ ಎಸೆತ 146 kmph ವೇಗ ಮತ್ತು ಕೊನೆಯ ಎಸೆತವನ್ನು 145 kmph ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಇನ್ನು ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ ದಾಖಲೆ ಪಾಕಿಸ್ತಾನದ ಮಾಜಿ ವೇಗಿ ಅಖ್ತರ್ ಹೆಸರಿನಲ್ಲಿದೆ. ಅವರು 161 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿದಾಖಲೆ ನಿರ್ಮಿಸಿದ್ದರು. ಆದರೆ ಉಮ್ರಾನ್ ಈ ದಾಖಲೆ ಮುರಿಯಬೇಕು ಎಂಬ ಆಸೆಯನ್ನು ಹೊಂದಿದ್ದಾರೆ.
IND vs SL1st odi umran malik has bowled at a speed of 156 kmph.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm